ಹಾಸನ | ಜಲಸಂಪನ್ಮೂಲ ಇಲಾಖೆಯಿಂದ ಕಳಪೆ ಕಾಮಗಾರಿ; ಸೂಕ್ತ ತನಿಖೆಗೆ ಜಿ ದೇವರಾಜೇಗೌಡ ಒತ್ತಾಯ

Date:

ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ ವರದಿ ಪಡೆದು ನಂತರ ಎಸ್‌ಐಟಿ ಟೀಮ್ ರಚನೆ ಮಾಡುವಂತೆ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ಆಗ್ರಹಿಸಿದ್ದಾರೆ.

ಹಾಸನ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಈ ಹಿಂದಿನ ಸರ್ಕಾರದ ಕೆಲ ಸಚಿವರುಗಳು ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿದ್ದಾರೆಂದು ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳೊಂದಿಗೆ ಕೆಲವು ಮಹತ್ತರವಾದ ತೀರ್ಮಾನಗಳನ್ನು ಕೈಗೊಂಡಿದ್ದೀರ. ಅದೇ ರೀತಿ 2013 ರಿಂದ 2024 ರವರಗೆ ಯಾವುದೇ ಸರ್ಕಾರವಿದ್ದರೂ ಕೂಡ ನಿರ್ಭಯವಾಗಿ ಜಲಸಂಪನ್ಮೂಲ ಇಲಾಖೆಯಲ್ಲಿನ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಎಡದಂಡೆ ನಾಲೆ ಹಾಗೂ ಬಲದಂಡೆ ನಾಲೆ ಆಧುನೀಕರಣ ಕಾಮಗಾರಿಯ ಸುಮಾರು ₹2,300 ಕೋಟಿ ಮತ್ತು ಫಂಡ್ ಡೈವರ್ಷನ್ ಮಾಡಿದ್ದಾರೆ” ಎಂದು ಆರೋಪಿಸಿದರು.

“ಜಿಲ್ಲೆಯ ಇತರೆ ಅಭಿವೃದ್ಧಿ ಕಾಮಗಾರಿಯಲ್ಲಿ ಸುಮಾರು ₹5,600 ಕೋಟಿ ಹಾಗೂ ಇದೇ ಇಲಾಖೆಯಲ್ಲಿನ ವಿಶ್ವೇಶ್ವರಯ್ಯ ಜಲ ನಿಗಮದಲ್ಲಿನ ಎತ್ತಿನಹೊಳೆ ಯೋಜನೆಯ ಕಾಮಗಾರಿಯಲ್ಲಿನ ಕೇವಲ ₹8,325.50 ಸರ್ಕಾರದಿಂದ ಅನುಮೋದನೆ ಪಡೆದು ಟೆಂಡರ್ ಕರೆದು ನಂತರ ಆ ಕಾಮಗಾರಿಯ ಮೊತ್ತವನ್ನು ₹26‌,000 ಕೋಟಿಗೆ ಏರಿಸಿ ಈಗಾಗಲೇ ₹17,000 ಕೋಟಿ ಹಣ ಪಾವತಿಸಿರುವ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರೇ ಈ ಯೋಜನೆಯ ಉದ್ಘಾಟನೆಯ ಸಮಯದಲ್ಲಿ ಘೋಷಣೆ ಮಾಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಜಾತಿ ಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

“₹17,000 ಕೋಟಿ ಕಾಮಗಾರಿಯ ಬಿಲ್‌ ತನಿಖೆ ಹಾಗೂ ರಾಜ್ಯದ ಉದ್ದಗಲಕ್ಕೂ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ 10 ವರ್ಷಗಳಲ್ಲಿ ಕೆಆರ್‌ಡಿಸಿಎಲ್(ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ)ನಿಂದ ಲೆಕ್ಕಕ್ಕೆ ಸಿಗದಷ್ಟು ಕೋಟಿ ರೂ.ಗಳ ಹಣ ವ್ಯಯಮಾಡಿರುವ ಬಗ್ಗೆ ತಮ್ಮ ಸರ್ಕಾರಕ್ಕೆ ಮಾಹಿತಿ ಇದ್ದು, ಆದ ಕಾರಣ ಕಳಂಕರಹಿತ ಮುಖ್ಯಮಂತ್ರಿಗಳಾದ ತಾವು ಮತ್ತು ತಮ್ಮ ಮಂತ್ರಿಮಂಡಲ ಉತ್ತಮ ತೀರ್ಮಾನ ತೆಗೆದುಕೊಂಡು ಒಬ್ಬ ಪ್ರಾಮಾಣಿಕ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಿ ಅವರಿಂದ ವರದಿ ಪಡೆದು, ನಂತರ ತಮ್ಮ ಅಧೀನದಲ್ಲಿರುವ ಎಸ್‌ಐಟಿ ತನಿಖಾ ತಂಡ ರಚಿಸಿ ಈ ಕಾಮಗಾರಿಗಳಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಹಣ ಲಪಟಾಯಿಸಿರುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ಮುಖಂಡ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...