ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಲ್ಲೆ ಪ್ರಕರಣ; ದಿನನಿತ್ಯ ವಿಚಾರಣೆ

Date:

ಹಾಸನ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಮೇಲಿರುವ ಲೈಂಗಿಕ ಕಿರುಕುಳದ ಕೇಸುಗಳ ಪೈಕಿ ಒಂದು ಪ್ರಕರಣ ವಿಚಾರಣೆ ಇದೇ 23ರಿಂದ ದಿನ ನಿತ್ಯ ನಡೆಯಲಿದೆ.

ಮನೆಗೆಲಸದ ಹೆಣ್ಣುಮಗಳ ಮೇಲೆ ಹೊಳೆನರಸೀಪುರದ ಗನ್ನಿಗಢ ಫಾರ್ಮ್‌ ಹೌಸ್‌ ಲೈಂಗಿಕ ಹಲ್ಲೆಯ ಪ್ರಕರಣವನ್ನು ಸಂಸದರ ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಈ ತಿಂಗಳ 23ರಿಂದ 29ರ(ಭಾನುವಾರ ಹೊರತುಪಡಿಸಿ) ತನಕ ನಡೆಸಲಿದೆ.

2021ರ ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಪ್ರಜ್ವಲ್ ಈ ಗೆಸ್ಟ್ ಹೌಸ್‌ಗೆ ಬಂದು ಈ ಹೆಣ್ಣುಮಗಳ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿಕೊಳ್ಳಲಾಗಿರುವ ಆಪಾದನಾ ಪಟ್ಟಿಯಲ್ಲಿ ಹೇಳಲಾಗಿದೆ. ಆಪಾದನಾಪಟ್ಟಿಯ ಪ್ರಕಾರ ಪ್ರಜ್ವಲ್ ಈ ಹಲ್ಲೆಯನ್ನು ತಮ್ಮ ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಣ್ಣುಮಗಳು 2022ರಲ್ಲಿ ಗೆಸ್ಟ್ ಹೌಸ್ ಕೆಲಸವನ್ನು ತೊರೆದು ತಮ್ಮ ಹಳ್ಳಿಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. 2024ರ ಏಪ್ರಿಲ್ 28ರಿಂದ ಜೂನ್ 10ರ ಅವಧಿಯಲ್ಲಿ ಪ್ರಜ್ವಲ್ ವಿರುದ್ಧ ಲೈಂಗಿಕ ಹಲ್ಲೆಯ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ಬೆಂಗಳೂರಿನಲ್ಲಿ ಮೂರು ಮತ್ತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್‌ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರ ಮೇಲೆ ನಡೆಸಲಾದ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಪ್ರಜ್ವಲ್ ಅವರ ಜಾಮೀನು ಕೋರಿಕೆ ಅರ್ಜಿಯನ್ನು ನ್ಯಾಯಾಲಯ ನೆನ್ನೆ(ಏಪ್ರಿಲ್ 19) ತಿರಸ್ಕರಿಸಿತ್ತು. ಲೈಂಗಿಕ ಹಲ್ಲೆಗೆ ಗುರಿಯಾದ ಹೆಣ್ಣುಮಗಳು ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಲಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...