ಹಾಸನ | ಲೈಂಗಿಕ ದೌರ್ಜನ್ಯ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ನ್ಯಾ. ಎಚ್. ಪಿ ಸಂದೇಶ್

Date:

ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಮತ್ತು ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಹದಿಹರೆಯದಲ್ಲಿ ಮಾಡುವ ತಪ್ಪಿಗಾಗಿ ಜೀವನ ಪೂರ್ತಿ ಕಷ್ಟ ಅನುಭವಿಸಬೇಕಾಗುತ್ತದೆ. ಬಾಲ್ಯದಲ್ಲಿಯೇ ಪೋಕ್ಸೊ ಕಾಯ್ದೆಯ ಬಗ್ಗೆ ಎಲ್ಲರಲ್ಲೂ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಪೋಕ್ಸೊ ಕಾಯ್ದೆ ಮಕ್ಕಳಿಗೆ ಪರಿಣಾಮಕಾರಿ ರಕ್ಷಕ. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕುಟುಂಬದ ಹಂತದಲ್ಲಿಯೇ ಮಕ್ಕಳಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ. 18 ವರ್ಷದ ಒಳಗಿನ ಮಕ್ಕಳಲ್ಲಿ ಸರಿ- ತಪ್ಪುಗಳ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇರುವುದಿಲ್ಲ ಚಂಚಲ ಮನಸ್ಥಿತಿಯನ್ನು ಹಿಡಿತದಲ್ಲಿ ಇಟ್ಟುಕೊಂಡರೆ ಭವಿಷ್ಯ ಉತ್ತಮವಾಗಿರಲು ಸಾಧ್ಯ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ತಿಳಿಸಿದರು.

ಬೇರೆಯವರ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿದಾಗ ಅವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಪಡೆಯಲು ಸಾಧ್ಯ, ಮಕ್ಕಳ ಮೇಳಿನ ಅಪರಾಧ ಹಾಗೂ ಅದರ ಪರಿಣಾಮಗಳ ಬಗ್ಗೆ ಕುಟುಂಬ, ಶಾಲಾ ಹಂತದಲ್ಲಿ ಜಾಗೃತಿ ಮೂಡಿದಲ್ಲಿ ಮಕ್ಕಳ ರಕ್ಷಣೆ ಸಾಧ್ಯ, ಮಕ್ಕಳ ರಕ್ಷಣೆಗೆ ಜಾತಿ ಬೇಧವಿಲ್ಲದೇ, ಎಲ್ಲರೂ ಒಗ್ಗಟ್ಟಾಗಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು. ಪೋಷಕರು ಆಸ್ತಿ ಮಾಡುವ ಬದಲು, ಮಕ್ಕಳಿಗೆ ವಿದ್ಯೆ ಹಾಗೂ ಸಂಸ್ಕಾರವನ್ನು ನೀಡಬೇಕು. ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ದೊರೆತರೆ ಕುಟುಂಬ, ಜಿಲ್ಲೆ, ರಾಜ್ಯ ಹಾಗೂ ದೇಶದ ಆಸ್ತಿಯಾತ್ತಾರೆ. ಪ್ರತಿಯೊಬ್ಬ ಪೋಷಕರು ಮಕ್ಕಳನ್ನು ದೇಶದ ಆಸ್ತಿಯಾಗುವಂತೆ ಬೆಳೆಸಬೇಕು. ಶಿಕ್ಷಕರು ವಿದ್ಯಾರ್ಥಿಯಲ್ಲಿ ಇರುವ ಕೊರತೆ ಗಮನಿಸಬೇಕು. ಯಾವ ವಿಷಯದಲ್ಲಿ ಕೌಶಲವಿಲ್ಲ ಎಂಬುದನ್ನು ಅರಿಯಬೇಕು. ಇಲ್ಲದಿದ್ದರೆ ಶಿಕ್ಷಕ ವೃತ್ತಿಗೆ ಅರ್ಹರಾಗುವುದಿಲ್ಲ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣ ಗಮನಿಸಿದರೆ, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ಕೊಡಬೇಕು ಪೋಷಕರು, ಶಿಕ್ಷಕರರು ಕಾಳಜಿ ವಹಿಸುವುದು ಮುಖ್ಯ. ಮಕ್ಕಳ ರಕ್ಷಣೆಯು ಪೋಷಕರು, ಶಿಕ್ಷಕರು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ  ಮಾತಾಡಿದರು. ಜಿಲ್ಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ 182 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 98 ಪ್ರಕರಣಗಳು ಬಾಲ್ಯ ವಿವಾಹಕ್ಕೆ ಸಂಬಂಧಿಸಿವೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆಡಾ.ಸಿ.ವಿ. ಸ್ನೇಹಾ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ 1098 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗೌಪ್ಯತೆ ಕಾಪಾಡಿಕೊಂಡು ಪ್ರಕರಣ ಇತ್ಯರ್ಥ ಮಾಡಲಾಗುವುದು ಎಂದು ವೆಂಕಟೇಶ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಆಳುವ ಸರ್ಕಾರಗಳ ಕೆಲ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲ: ಭೀಮ್ ರಾವ್ ಅಂಬೇಡ್ಕರ್ 

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...