ಹಾಸನ | ಅಕ್ರಮ ಒತ್ತುವರಿ ನೆಪದಲ್ಲಿ ತೆರವು; ಬೆಳಂ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ನಗರಸಭೆ

Date:

ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್‌ಗಳು, ಬೃಹತ್ ಜಾಹೀರಾತು ಫಲಕಗಳು, ದೊಡ್ಡ ಫ್ಲೆಕ್ಸ್, ಸೆಕ್ಯೂರಿಟಿ ಬೂತ್ ಸೇರಿದಂತೆ ಅನೇಕ ಅಕ್ರಮ ಒತ್ತುವರಿಯನ್ನು ತೆರೆವುಗೊಳಿಸಿದ್ದಾರೆ.

ನಗರದ ತಣ್ಣೀರು ಹಳ್ಳದಿಂದ ಸಕಲೇಶಪುರ ಮಾರ್ಗದ ರಸ್ತೆಗಳ ಅಕ್ಕಪಕ್ಕದಲ್ಲಿ ಇದ್ದಂತಹ ಅಕ್ರಮ ಶೆಡ್, ಬ್ಯಾನರ್, ಫ್ಲೆಕ್ಸ್ ಹಾಗೂ ಕಟ್ಟಡವನ್ನು ನಗರಸಭೆ ಆಯುಕ್ತ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಯಿತು.‌

ಅಕ್ರಮ ಒತ್ತುವರಿ ತೆರವು 1

ಈ ಹಿಂದೆ ನಗರದ ಬಿಎಮ್ ರಸ್ತೆಯುದ್ದಕ್ಕೂ ಅಕ್ರಮವಾಗಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್, ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಲಾಗಿತ್ತು. ಇಂದು ಮುಂಜಾನೆಯೂ ಏಕಾಏಕಿ ತೆರವು ಕಾರ್ಯಚರಣೆ ಕೈಗೊಂಡಾಗ ಇಲ್ಲಿನ ಅಂಗಡಿ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿ ಆಯುಕ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅಕ್ರಮ ಒತ್ತುವರಿ ತೆರವು 2

ಸ್ಥಳೀಯರು, “ನಗರಸಭೆಯವರು ಯಾರಿಗೂ ನೋಟಿಸ್ ಜಾರಿ ಮಾಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಡವರ ಅನೇಕ ಗೂಡಂಗಡಿ ಒಡೆದು ಹಾಕಿದ್ದು, ಕೆಲ ನಿರ್ದಿಷ್ಟ ವ್ಯಕ್ತಿಗಳಿಗೆ ಸೇರಿದ ಒತ್ತುವರಿಯನ್ನೇಕೆ ತೆರವು ಮಾಡಿಲ್ಲ. ಯಾವುದೇ ತೆರವು ಕಾರ್ಯಾಚರಣೆಗೆ ನೋಟಿಸ್ ಜಾರಿ ಮಾಡಬೇಕು. ಆದರೆ ನಗರಸಭೆಯಿಂದ ವಿಷಯ ತಿಳಿಸದೆ ಕಾರ್ಯಾಚರಣೆ ಕೈಗೊಂಡಿರುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

“ಈ ಬಗ್ಗೆ ಪ್ರಶ್ನಿಸಿದರೆ ಜಿಲ್ಲಾಧಿಕಾರಿಗಳು ನಮಗೆ ಆದೇಶ ನೀಡಿದ್ದಾರೆಂದು ಆಯುಕ್ತರು ಹೇಳುತ್ತಾರೆ. ಬಡ ಮಧ್ಯಮ ವರ್ಗದ ವ್ಯಾಪರಸ್ಥರಿಗೆ ತೀವ್ರ ತೊಂದರೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಮುಖ್ಯ ಎಂಜಿನಿಯರ್ ವೆಂಕಟೇಶ್, ದೀಪಕ್, ಆರೋಗ್ಯ ನಿರೀಕ್ಷಕ ಪ್ರಸಾದ್, ಚನ್ನೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...