ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಪ್ರತಾಪ್ (33), ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನವರು. ತಮ್ಮ ಹುಟ್ಟೂರಿನ ಸಮೀಪ ಪ್ರಯಾಣಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾರೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಪ್ರತಾಪ್ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕೇವಲ 33ನೇ ವಯಸ್ಸಿನಲ್ಲೇ ಅಕಾಲಿಕ ಮರಣಕ್ಕೀಡಾದ ಸುದ್ದಿ ತಿಳಿಯುತ್ತಿದ್ದಂತೆ ಸಹೋದ್ಯೋಗಿಗಳು ಯಸಳೂರು ಠಾಣೆಯ ಪೊಲೀಸ್ ಅಧಿಕಾರಿ ಪೆಕ್ಟರ್ ಸಲ್ಮಾನ್ ತಮ್ಮ ನೋವವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಮಗನಿಂದಲೇ ತಂದೆಯ ಹತ್ಯೆ
”ಪ್ರತಾಪ್ ಅವರು ಶಿಸ್ತಿನ ಸಿಪಾಯಿಯಾಗಿದ್ದರು. ಇಲಾಖೆಗೆ ನೀಡಿದ ಅವರ ಸೇವೆ ಸ್ಮರಣೀಯ,” ಎಂದು ಅವರ ಹಿತೈಷಿಗಳು ಸ್ಮರಿಸಿದ್ದಾರೆ. ಪ್ರತಾಪ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.





