ಹಾಸನ | ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

Date:

ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ.

ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್. ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆಂಬ ಆರೋಪವಿದೆ.

ಮಾಸ್ತಿಗೌಡ ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿ ಗ್ರಾಮದವನು ಎಂದು ತಿಳಿದುಬಂದಿದೆ. ಆತ ಚನ್ನರಾಯಪಟ್ಟಣ ಭಾಗದಲ್ಲಿ ರೌಡಿಯಾಗಿ ಕುಖ್ಯಾತಿ ಪಡೆದಿದ್ದ. ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ಪೊಲೀಸರು ರೌಡಿಶೀಟ್‌ ತೆರೆದಿದ್ದರು. ಕಾಲಕಾಲಕ್ಕೆ ಠಾಣೆಗೆ ಬಂದು ಸಹಿ ಹಾಕುವಂತೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಆತನನ್ನು ನಿಯಂತ್ರಿಸಲು ಯತ್ನಿಸಿದರೂ ಆತ ಹಿಂದೆ ಕಟ್ಟಿಕೊಂಡಿದ್ದ ದ್ವೇಷಗಳಿಂದ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನಡುರಸ್ತೆಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಮಾಸ್ತಿ ಗೌಡನಿಗೆ ಇರಬಹುದಾದ ವೈರಿಗಳನ್ನು ಗುರುತಿಸುವ ಕೆಲಸವೂ ನಡೆದಿದೆ. ಈಗಾಗಲೇ ಪೊಲೀಸರಿಗೆ ಕೆಲವರ ಮೇಲೆ ಸಂಶಯ ಬಂದಿದ್ದು, ಅವರನ್ನು ಕರೆದು ತಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ವನ ಮಹೋತ್ಸವಕ್ಕೆ ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ ಚಾಲನೆ

ಮಾಸ್ತಿ ಗೌಡನನ್ನು ದುಷ್ಕರ್ಮಿಗಳು ನೂರಾರು ಜನರ ನಡುವೆಯೇ ಅಟ್ಟಾಡಿಸಿಕೊಂಡು ಹೋಗಿದ್ದರಿಂದ ಸ್ಥಳದಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಕೊಲೆಯಾದ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರು. ಪೊಲೀಸರು ರಸ್ತೆ ಬಂದ್‌ ನಡೆಸಿ ಮಹಜರು ನಡೆಸಿದರು. ಈ ಘಟನೆಯ ಬಳಿಕ ನಗರದಾದ್ಯಂತ ನಾಕಾಬಂದಿ ಮಾಡಿ ದುಷ್ಕರ್ಮಿಗಳು ಪಟ್ಟಣ ಬಿಟ್ಟು ಹೊರಗೆ ಹೋಗುವುದನ್ನು ತಡೆಯಲು ಪ್ರಯತ್ನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...