ಹಾಸನ | ಇ-ಸ್ವತ್ತು ಮಾಡಲು ₹25 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ

Date:

ಲೋಕಾಯುಕ್ತ ದಾಳಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಹಾಸನ ನಗರಸಭೆ ವಾರ್ಡ್‌ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು ₹25,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ನಗರಸಭೆ ಅಧಿಕಾರಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟ ಅಧಿಕಾರಿಗಳ ಮೇಲೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಜೂನ್‌ 28ರಂದು ಕರ್ನಾಟಕದ 62 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ, ನಗದು, ಅಕ್ರಮ ಆಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ 62ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಒಟ್ಟು 4 ಕಡೆ ಲೋಕಾಯುಕ್ತ ದಾಳಿ ನಡೆದಿತ್ತು. ಜಿಲ್ಲಾ ನಿರ್ಮಿತಿ ಕೇಂದ್ರಗಳ ಯೋಜನಾ ವ್ಯವಸ್ಥಾಪಕ ಗಂಗಾಧರ್​ ಅವರ ಮನೆ, ಹೊಟೇಲ್​ ಮತ್ತು ಆತನಿಗೆ ಸಂಬಂಧಪಟ್ಟ ಪೆಟ್ರೋಲ್​ ಬಂಕ್​ ಮೇಲೆ ದಾಳಿ ಮಾಡಲಾಗಿತ್ತು. ಈ ವೇಳೆ ಕೋಟ್ಯಂತರ ಮೌಲ್ಯದ 16 ಮನೆಗಳು, 1 ರೆಸಾರ್ಟ್​, ಚಿನ್ನ, ಬೆಳ್ಳಿ ಸಿಕ್ಕಿತ್ತು. ಈ ಮೂಲಕ ಒಟ್ಟು 3.76 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಮನಗರ | ಹಾರೋಹಳ್ಳಿ ಪಟ್ಟಣ ಪಂಚಾಯತಿ ಆದಾಯ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಬಾಗಲಕೋಟೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್​ ಮನೆ ಮೇಲೆ ದಾಳಿ ಮಾಡಿ, ಬರೊಬ್ಬರಿ 32 ಲಕ್ಷ ನಗದು, ಚಿನ್ನಾಭರಣ, 31 ವ್ಯಾನಿಟಿ ಬ್ಯಾಗ್, ಬೆಳ್ಳಿ ಫ್ರೇಮ್​ಯಿರುವ ಫೋಟೋ, 10ಕ್ಕೂ ಹೆಚ್ಚು ಲಗೇಜ್​ ಬ್ಯಾಗ್, ಚಿನ್ನದ ಬಳೆ, ಸರ, ಎರಡು ಆಮೆಗಳು ಪತ್ತೆ ಆಗಿದ್ದವು. ಅಷ್ಟೇ ಅಲ್ಲದೇ ಬೀಳಗಿ ಸಹಾಯಕ ಕೃಷಿ ನಿರ್ದೇಶಕ ಕೃಷ್ಣಾ ಶಿರೂರು ಅವರಿಗೆ ಸೇರಿದ 4 ಕಡೆ ದಾಳಿ ಮಾಡಲಾಗಿತ್ತು. ಆತನ ಬಳಿ ₹71.88 ಲಕ್ಷ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...