ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

Date:

ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ ಸಿ ಡೋಂಗ್ರೆ ಮಾತನಾಡಿ, “ನ್ಯೂ ಮಿನರ್ವ ಮಿಲ್ ಸಂಸ್ಥೆಯು ನ್ಯಾಷನಲ್ ಟೆಕ್ಸ್‌ಟೈಲ್ಸ್ ಕಾರ್ಪೊರೇಷನ್(ಎನ್‌ಟಿಸಿ) ಭಾಗವಾಗಿದ್ದು, ದೇಶಾದ್ಯಂತ ಈ ರೀತಿಯ 23 ಘಟಕಗಳಿವೆ. ಈ ಎಲ್ಲ ಘಟಕಗಳು ಮಾರ್ಚ್ 2020ರಿಂದ ಸ್ಥಗಿತಗೊಂಡಿವೆ. 2020ರ ಏಪ್ರಿಲ್ 1ರಿಂದ ಕಾರ್ಮಿಕರಿಗೆ ಪೂರ್ತಿ ಸಂಬಳ ನೀಡದೆ ಶೇ.50ರಷ್ಟು ಸಂಬಳ ನೀಡುತ್ತ ಬಂದಿದ್ದಾರೆ” ಎಂದು ದೂರಿದರು.

“ಬಾಕಿ ಉಳಿದಿರುವ ವೇತನವನ್ನು ನಿರ್ದಿಷ್ಟ ಸಮಯದಲ್ಲಿ ನೀಡದೆ ಯಾವಾಗಲೋ ಒಮ್ಮೊಮ್ಮೆ ನೀಡುತ್ತಿದ್ದಾರೆ. 2024ರ ನವೆಂಬರ್‌ನಿಂದ ವೇತನವನ್ನೇ ನೀಡಿಲ್ಲ. ಇದರಿಂದಾಗಿ ಕಾರ್ಮಿಕರ ಜೀವನ ಆತಂತ್ರಗೊಂಡಿದೆ. ಇದರ ಪರಿಣಾಮವಾಗಿ ಕಾರ್ಮಿಕರ ಇಎಸ್‌ಐ, ಪಿಎಫ್ ಕಂತುಗಳು ಸಂದಾಯವಾಗದೆ, ಈ ಸೌಲಭ್ಯಗಳು ಇದ್ದೂ ಇಲ್ಲದಂತಾಗಿವೆ” ಎಂದು ಕಳವಳ ವ್ಯಕ್ತಪಡಿಸಿದರು.

“ಈ ವಿಚಾರಗಳ ಕುರಿತು ಅನೇಕ ಬಾರಿ ಮ್ಯಾನೇಜ್‌ಮೆಂಟ್ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆ ಕುರಿತು ಈ ವಿಚಾರಗಳನ್ನು ಮುಂದಿಟ್ಟುಕೊಂಡು ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಮುಂದೆ ಕಾರ್ಮಿಕರು ಸೇರಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ” ಎಂದರು.

“ಸರ್ಕಾರದ ಗಮನ ಸೆಳೆದರೂ ಕೂಡ ಈವರೆಗೂ ಯಾವುದೇ ರೀತಿಯ ಸಮಸ್ಯೆ ಬಗೆಹರಿಸಿಲ್ಲ. ಮಿನರ್ವ್ ಮಿಲ್ ಬಟ್ಟೆ ಪ್ಯಾಕ್ಟರಿ ಮ್ಯಾನೇಜ್‌ಮೆಂಟ್ ಅತ್ಯಂತ ಬೇಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೂಡಲೇ ಏಳು ತಿಂಗಳ ಸಂಬಳವನ್ನು ಕೊಡುವಂತೆ ಆಗ್ರಹಿಸಿ ಶನಿವಾರದಿಂದ ತೀವ್ರತರ ಹೋರಾಟ ಆರಂಭವಾಗಿದೆ. ನಮ್ಮ ಬೇಡಿಕೆ ಈಡೇರದಿದ್ದರೆ, ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಹೋಗಿ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ವೈಜ್ಞಾನಿಕ ಕೃಷಿ ಪದ್ಧತಿಯಿಂದ ಹೆಚ್ಚು ಇಳುವರಿ ಪಡೆಯಿರಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಗಮನಕ್ಕೆ ತೆಗೆದುಕೊಂಡು ಮಧ್ಯ ಪ್ರವೇಶಿಸಬೇಕು. 2020ರ ಮಾರ್ಚ್‌ನಿಂದ ಸ್ಥಗಿತಗೊಂಡಿರುವ ಘಟಕದ ಪುನರಾರಂಭಕ್ಕೆ ಹಾಗೂ ಕಾರ್ಮಿಕರಿಗೆ ಬಾಕಿ ವೇತನ ಕೊಡಿಸುವಂತಹ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಬಿ ಎಂ ಮಧು, ಉಪಾಧ್ಯಕ್ಷ ಜೆ ಆರ್ ಸಂತೋಷ್, ಕಾರ್ಯದರ್ಶಿ ಹೆಚ್ ಎಸ್ ಮಂಜೇಗೌಡ, ಖಜಾಂಚಿ ಜೆ ಸಿ ಲೋಕೇಶ್ ಸೇರಿದಂತೆ ನ್ಯೂ ಮಿನರ್ವ ಮಿಲ್‌ನ ಕಾರ್ಮಿಕರು ಇದ್ದರು.

cleardot
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...