ಹಾಸನ | ಸ್ವಚ್ಛತಾ ಕಾರ್ಮಿಕ ವೆಂಕಟೇಶ್‌ಗೆ ಗಣರಾಜ್ಯೋತ್ಸವ ಪ್ರಶಸ್ತಿ

Date:

ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಜಗತ್ತಿನ ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ರಾಷ್ಟ್ರ, ಭಾಷೆ, ಬಾಳ್ವೆ, ಉಡುಗೆ ತೊಡುಗೆಯಲ್ಲಿ ಎಷ್ಟೇ ಭಿನ್ನತೆ ಇದ್ದರೂ ಭಾವನಾತ್ಮಕವಾಗಿ ನಾವೆಲ್ಲರೂ ಒಂದಾಗಿ ಸಾಗುತ್ತಿದ್ದೇವೆ. ಮುಂದೆಯೂ ಹೀಗೆ ಐಕ್ಯತೆಯೊಂದಿಗೆ ದೇಶದ ಸಮಗ್ರತೆ ಉಳಿಸುತ್ತಾ ಭಾರತವನ್ನು ವಿಶ್ವದ ಶ್ರೇಷ್ಠ, ಬಲಿಷ್ಠ ರಾಷ್ಟ್ರವನ್ನಾಗಿಸಲು ಶ್ರಮಿಸಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದರು.

ಹಾಸನ ನಗರದ ಜಿಲ್ಲಾ ಹಾಕಿ ಮೈದಾನದಲ್ಲಿ ಶುಕ್ರವಾರದಂದು ನಡೆದ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಹಾಸನ 5

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಲಾಲ್ ಬಹುದ್ದೂರ್ ಶಾಸ್ತ್ರಿ, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಸರೋಜಿನಿ ನಾಯ್ಡು, ಜವಾಹ‌ರ್ ಲಾಲ್ ನೆಹರು ಸೇರಿದಂತೆ ನೂರಾರು ನೇತಾರರ ನೇತೃತ್ವದಲ್ಲಿ ಲಕ್ಷಾಂತರ ಚಳವಳಿಗಾರರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಭಾರತದಲ್ಲಿ ಸಂವಿಧಾನವೇ ಸರ್ವೊಚ್ಛವಾದುದು” ಎಂದರು.

“ನಮ್ಮ ಸಂವಿಧಾನದ ಮೂಲ ತತ್ವಗಳು, ಆಶಯಗಳು ಮತ್ತು ಸಿದ್ಧಾಂತಗಳು ಸಾರಾಂಶ ರೂಪದಲ್ಲಿ ತಿಳಿಸುವ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿ ಭಾರತೀಯರು ಅರ್ಥೈಸಿಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯದ 31 ಜಿಲ್ಲೆಗಳಲ್ಲಿ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅದರಂತೆ ಹಾಸನ ಜಿಲ್ಲೆಯಲ್ಲಿಯೂ ಇಂದು ಜಾಥಾಕ್ಕೆ ಚಾಲನೆ ನೀಡಲಾಗುತ್ತಿದೆ. ಸಂವಿಧಾನದಲ್ಲಿರುವಂತೆ ಮೂಲಭೂತ ಹಕ್ಕು, ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲ ಉದ್ದೇಶದಿಂದ ಈ ಜಾಥಾ ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರದ ಶಾಸಕರುಗಳು ತಮ್ಮ ಕ್ಷೇತ್ರದಲ್ಲಿ ಜಾಥ ರಥವನ್ನು ಬರಮಾಡಿಕೊಂಡು ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ತಮ್ಮೆಲ್ಲರ ಸಹಕಾರವನ್ನು ಕೋರಿದೆ” ಎಂದರು.

ಪೌರ ಕಾರ್ಮಿಕ

ಇದೇ ವೇಳೆ ಈ ಬಾರಿಯ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಹಾಸನ ಜಿಲ್ಲಾಡಳಿತದಿಂದ ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿನ ಸಾಧಕರಿಗೆ ಗಣರಾಜ್ಯೋತ್ಸವ ಪ್ರಶಸ್ತಿಯನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜ.29ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ

ಈ ಬಾರಿಯ ಪ್ರಶಸ್ತಿಯನ್ನು ಕಳೆದ ಮೂವತ್ತು ವರ್ಷಗಳಿಂದ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಎಚ್ ವೆಂಕಟೇಶ್ ಅವರಿಗೆ ಗಣರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಕಳೆದ ಮೂವತ್ತು ವರ್ಷಗಳಿಗಿಂತಲೂ ಹೆಚ್ಚಿನ ಸೇವೆ ಸಲ್ಲಿಸಿರುವ ಇವರು ಸಮಯ ಪ್ರಜ್ಷೆ, ಕೆಲಸದ ವಿಷಯದಲ್ಲಿ ಯಾವುದೇ ಚ್ಯುತಿ ಇಲ್ಲದೆ ತಮ್ಮ ವೃತ್ತಿಯನ್ನು ನಿರ್ವಹಿಸುತ್ತಾ ಬಂದಿದ್ದಾರೆ.‌

ವೆಂಕಟೇಶ್ ಅವರು ತಳ ಸಮುದಾಯದಿಂದ ಬಂದು ಈ ಕೆಲಸ ನಿರ್ವಹಿಸುತ್ತಿದ್ದರೂ ಕೂಡ ತಮ್ಮ ಇಬ್ಬರು ಮಕ್ಕಳನ್ನು ಪದವಿಗಳನ್ನು ಪೂರೈಸಲು ಸಹಕರಿಸಿ ವಿದ್ಯಾವಂತರನ್ನಾಗಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...