ಹಾಸನ | ಚಿಕ್ಕನಾಳು ಕನ್ನಡ, ಉರ್ದು ಸರ್ಕಾರಿ ಪ್ರಾಥಮಿಕ ಶಾಲೆ ಉಳಿಸಿ; AIDSO ಪ್ರತಿಭಟನೆ 

Date:

ಹಾಸನ ನಗರದ ಚಿಕ್ಕನಾಳು ಏರಿಯಾದ ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದನ್ನು ಒಪ್ಪುವುದಿಲ್ಲವೆಂದು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ಮಂಗಳವಾರ ನಡೆಸಿದರು.

KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನ ನಗರದ ಚಿಕ್ಕನಾಳುವಿನಲ್ಲಿರುವ ಕನ್ನಡ ಹಾಗೂ ಉರ್ದು ಹಿರಿಯ  ಪ್ರಾಥಮಿಕ ಶಾಲೆ ಶಾಲೆಯನ್ನು ಉಳಿಸಲು AIDSO ನೇತೃತ್ವದಲ್ಲಿ  ನಡೆದ ಹೋರಾಟದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ  ರಾಜ್ಯ ಖಜಾಂಚಿ ಸುಭಾಷ್ ರವರು ಮಾತನಾಡಿ  ಸರ್ಕಾರ KPS- ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000 ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲೊರಟಿದೆ. ಈ ಎರಡು ಶಾಲೆಗಳಲ್ಲಿ ಚಿಕ್ಕನಾಳು ಏರಿಯಾದ 30ಕ್ಕಿಂತ ಹೆಚ್ಚು ಮಕ್ಕಳು ಓದುತ್ತಿದ್ದಾರೆ.  ಈ ಶಾಲೆಗಳು ಉಳಿದರೆ ಮಾತ್ರ ಅವರಿಗೆ ಶಿಕ್ಷಣ, ಸರ್ಕಾರ ಈ ಶಾಲೆಯನ್ನು ಮುಚ್ಚಿ ನಗರದ ಚಿಪ್ಪಿನಕಟ್ಟೆಯಲ್ಲಿರುವ ಪ್ರೌಢಶಾಲೆಗೆ ಇಲ್ಲಿನ ಮಕ್ಕಳು ಹೋಗಿ ಓದಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಶಾಲೆ ವಿಲೀನ ಮಾಡಲಾಗುತ್ತದೆ ಎಂದು ಹೇಳುತ್ತಿರುವುದು ಬಹಳ ಖಂಡನೀಯ, ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ಬಡವರ , ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ. ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಕೂಡ ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂಬಾಗಿಲಿನಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು AIDSO ಪ್ರತಿಭಟನೆ ನಡೆಸಿದರು.

ಕಳೆದ ಎಂಟು  ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡದೆ ಖಾಸಗಿ ಶಾಲೆಗಳ ಪರ ಕೆಲಸ ಮಾಡಿದ್ದಾರೆ. 60,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ. 21,000ಕ್ಕೂ ಹೆಚ್ಚಿಗೆ ಕೊಠಡಿಗಳು ದುರಸ್ತಿಯಾಗಿಲ್ಲ. ಇನ್ನೂ ಹಲವಾರು ಸಮಸ್ಯೆಗಳು ಸರ್ಕಾರಿ ಶಾಲೆಗಳಲ್ಲಿ ಇವೆ. ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು. ಪೋಷಕರಾದ ಸಲ್ಮಾ ಬಾನು ರವರು ಮಾತನಾಡಿ “ಇಲ್ಲಿ ವಾಸವಾಗಿರುವುದು ಹಲವಾರು ಕಾರ್ಮಿಕರು, ಗಾರ್ಮೆಂಟ್ಸ್ ನಲ್ಲಿ ದುಡಿಯುವ ಹೆಣ್ಣು ಮಕ್ಕಳು ಅವರ ಮಕ್ಕಳು ಸ್ವಲ್ಪವಾದರೂ ಶಿಕ್ಷಣ ತೆಗೆದುಕೊಳ್ಳಬೇಕೆಂದರೆ ಸರ್ಕಾರಿ ಶಾಲೆ ಬೇಕೇ ಬೇಕು ಎಂದು ಆಗ್ರಹಿಸಿದರು. ನಾವು ಸಹ ಇದ ಶಾಲೆಯಲ್ಲಿ ಓದಿ ಬೆಳೆದವರು ಈ ಊರಿನ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ” AIDSOಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ಬೇರುಗಳು | ಹಾಸನದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು

ಈ ವೇಳೆ ಪ್ರತಿಭಟನೆಯಲ್ಲಿ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಜಿಲ್ಲಾಧ್ಯಕ್ಷರಾದ ಚೈತ್ರ, ಉಪಾಧ್ಯಕ್ಷರಾದ ಅಭಿಷೇಕ್,  ಪೋಷಕರಾದ ಆಯಿಷಾ, ಸಲ್ಮಾ ಬಾನು,ಸುಷ್ಮಾ ಅಮೀರ ಬಾನು, ಫಾತಿಮಾ ಜಹಾರ, ಸಮೀನಾ, ಜಮೀರ್ ಹಾಗೂ  ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...