ಹಾಸನ | ರಸ್ತೆ ಗುಂಡಿಗೆ ವಾಲಿದ ಶಾಲಾ ಬಸ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Date:

ಹಾಸನ ನಗರದ ವಿವೇಕಾನಗರ ಬಳಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಅಗೆದು ಸರಿಯಾಗಿ ಮುಚ್ಚದಿರುವ ಹಿನ್ನೆಲೆಯಲ್ಲಿ ಗುಂಡಿಗಳಾಗಿದ್ದು, ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಶಾಲಾ ಬಸ್ ಚಕ್ರ ಗುಂಡಿಗೆ ವಾಲಿದೆ. ಒಂದು ವೇಳೆ ಬಸ್‌ ಕೆಳಗೆ ಬಿದ್ದಿದ್ದರೆ ಅನಾಹುತ ಸಂಭವಿಸುತಿತ್ತು. ಅದೃಷ್ಠವಶಾತ್ ಇದೀಗ ಭಾರೀ ಅಪಾಯ ತಪ್ಪಿದೆ.

ನಗರದ ಮೈಲ್ ಸ್ಟೋನ್ ಆಕಾಡೆಮಿ ಶಾಲೆಯ ಬಸ್ ಇದಾಗಿದ್ದು, ಶಾಲೆ ಮುಗಿದ ಬಳಿಕ ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗಲು ಶಾಲೆಯಿಂದ ರಿಂಗ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

“ಯುಜಿಡಿ ಕಾಮಗಾರಿಗಾಗಿ ನಡು ರಸ್ತೆಯುದ್ದಕ್ಕೂ ಅಗೆದು ಗುಂಡಿ ಮಾಡಿದ್ದು, ಸರಿಯಾಗಿ ಮುಚ್ಚದೇ ಇರುವ ಹಿನ್ನೆಲೆಯಲ್ಲಿ, ಯುಜಿಸಿ ಸರ್ಕೆಯಾಗಿ ಗುಂಡಿಯಲ್ಲಿನ ಮಣ್ಣು ತೇವವಾಗಿತ್ತು. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ ಗುಂಡಿಗೆ ಜಾರಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಏನಾದರೂ ಅನಾಹುತವಾದರೇ ಇದಕ್ಕೆ ಯಾರು ಹೊಣೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಗುಂಡಿ ತೋಡಿದ ಮೇಲೆ ಕಾಮಗಾರಿ ಬೇಗ ಮುಗಿಸಬೇಕು. ಮುಗಿಸಿದ ಮೇಲೆ ಗುಂಡಿಯನ್ನು ಸರಿಯಾಗಿ ಮುಚ್ಚುವ ಕೆಲಸ ಮಾಡಬೇಕು” ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರ ಬಂಧನ

ಈ ಬಗ್ಗೆ ಸ್ಥಳೀಯ ನಿವಾಸಿ ವೈಭವ್ ಮಾತನಾಡಿ, “ವಿವೇಕನಗರದ ಮುಖ್ಯ ರಸ್ತೆಯುದ್ದಕ್ಕೂ ಹತ್ತಾರು ಶಾಲೆ ಕಾಲೇಜುಗಳಿವೆ. ದಿನಕ್ಕೆ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚಾರ ಮಾಡುವ ಪ್ರಮುಖ ರಸ್ತೆ ಇದಾಗಿದೆ. ಇಂತಹ ರಸ್ತೆಯಲ್ಲೇ ಗುಂಡಿ ತೆಗೆದು ಸರಿಯಾಗಿ ಮುಚ್ಚದಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ” ಎಂದರು.

“ಈಗಾಗಲೇ ಹಲವು ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಕಾಮಗಾರಿ ಮಾಡುವಾಗ ಸಮರ್ಪಕವಾಗಿ ಮಾಡಬೇಕು. ಕೂಡಲೇ ಸಂಬಂಧಿದಿಸಿದ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಶೀಘ್ರವಾಗಿ ರಸ್ತೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...