ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ತೇಜಸ್ವಿ ವೃತ್ತದ ಸಮೀಪದ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಯುವಕನೊರ್ವನ ಮೃತ ದೇಹ ಸಿಕ್ಕಿರುವ ಘಟನೆ ಮಂಗಳವಾರ ತಿಳಿದು ಬಂದಿದೆ.
ಮೃತ ಪಟ್ಟ ಯುವಕ ಜೀವನ್ (30) ಎಂಬಾತ, ಮಠನಸಾಗರ ಗ್ರಾಮದವನು ಎಂದು ಗುರುತಿಸಲಾಗಿದೆ. ಶಾಲೆಯ ಆಟದ ಮೈದಾನದಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನಗರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಜೊತೆಗೆ ಮಹಜರು ಕಾರ್ಯಾಚರಣೆ ನಡೆಸಲಾಗಿದೆ. ಮೃತ ಯುವಕನ ಬೈಕ್ ಹೇಮಗಂಗಾ ಸರ್ವಿಸ್ ಸ್ಟೇಷನ್ ಬಳಿ ನಿಲ್ಲಿಸಿರುವುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದೆ.
ಇದನ್ನೂ ಓದಿದ್ದೀರಾ?ಹಾಸನ | ವಿಷ ಸೇವಿಸಿ ಮಹಿಳೆ ಸಾವು
ಈ ಘಟನೆ ಕುರಿತು ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.





