ಹಾಸನ | ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮಕ್ಕೆ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ

Date:

ಪ್ರಸಕ್ತ ಸಾಲಿನಲ್ಲಿ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಕಡಿಮೆ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು ಹಂಚಿಕೆ ಮಾಡಿರುವುದರಿಂದ ಕೊರತೆಗೆ ಕಾರಣವಾಗಿದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಇಲಾಖೆ, “ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿತ್ತು. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡುಬಂದಿರಲಿಲ್ಲ” ಎಂದಿದೆ.

ರಾಜ್ಯದ ಬೆಳೆ ಪದ್ಧತಿಯನ್ನು ಆಧರಿಸಿ ಮುಂಗಾರು ಹಂಗಾಮಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಕ್ಕೆ 12.95 ಲಕ್ಷ ಮೆಗಾ ಟನ್ ಯೂರಿಯಾ ರಸಗೊಬ್ಬರ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ 11.17ಲಕ್ಷ ಮೆಗಾ ಟನ್ ಹಂಚಿಕೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 3.02 ಲಕ್ಷ ಮೆಗಾ ಟನ್ ಡಿಎಪಿ ರಸಗೊಬ್ಬರದ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ ಈವರೆಗೆ 2.21 ಲಕ್ಷ ಮೆಗಾ ಟನ್ ಸರಬರಾಜಾಗಿದೆ. ಇನ್ನೂ 81,000 ಮೆಗಾ ಟನ್ ಸರಬರಾಜು ಬಾಕಿ ಇದೆ. ರಾಜ್ಯದಲ್ಲಿ ಡಿಎಪಿ ಕೊರತೆ ಕಂಡುಬಂದಾಗ ಕೃಷಿ ಸಚಿವರ ನಿರ್ದೇಶನದಂತೆ ಪರ್ಯಾಯ ರಸಗೊಬ್ಬರಗಳ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಿ, ಪ್ರಸ್ತುತ, ಡಿಎಪಿ. ರಸಗೊಬ್ಬರದ ಕೊರತೆಯನ್ನು ನೀಗಿಸಲಾಗಿದೆ. ಏಪ್ರಿಲ್‌ನಿಂದ ಜುಲೈವರೆಗೆ 6.80 ಲಕ್ಷ ಮೆಗಾ ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ ಈವರೆಗೆ 5.35 ಲಕ್ಷ ಮೆಗಾ ಟನ್ ಸರಬರಾಜಾಗಿದೆ. ಇನ್ನೂ 1.45 ಮೆಗಾ ಟನ್ ಸರಬರಾಜು ಬಾಕಿ ಇರುತ್ತದೆ.

ಕೇಂದ್ರ ಸರ್ಕಾರದಿಂದ ಈವರೆಗೆ ಸರಬರಾಜು ಮಾಡಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಎಲ್ಲ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಭಾಯಿಸಲಾಗಿರುತ್ತದೆ.

ರಾಜ್ಯದಿಂದ ರಸಗೊಬ್ಬರ ಪೂರೈಕೆಗೆ ಆರು ಬಾರಿ ಮನವಿ: ಕೇಂದ್ರ ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆಯಿಂದ ಏಪ್ರಿಲ್ ಮಾಹೆಯಿಂದ ಇಲ್ಲಿಯವರೆಗೆ ಆರು ಬಾರಿ ಪತ್ರಗಳನ್ನು ಬರೆದು ಹಂಚಿಕೆಗೆ ಅನುಗುಣವಾಗಿ ಅವಶ್ಯವಿರುವ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಲಾಗಿರುತ್ತದೆ.

ರಾಜ್ಯದ ಕೃಷಿ ಸಚಿವರು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ ಅಗತ್ಯವಿರುವ ಡಿಎಪಿ ರಸಗೊಬ್ಬರದ ಪೂರೈಕೆಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ಅಲ್ಲದೇ, ಕೃಷಿ ಸಚಿವರೇ ಖುದ್ದಾಗಿ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನು ಇದೇ ಜುಲೈ 7ರಂದು ಭೇಟಿ ಮಾಡಿ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಡಿಎಪಿ ಮತ್ತು ಯೂರಿಯಾ ರಸಗೊಬ್ಬರದ ಕಡಿಮೆ ಪೂರೈಕೆಯನ್ನು ಮನಗಂಡು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ, ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಜುಲೈ 17 ಮತ್ತು 25ರಂದು ಪತ್ರದ ಮುಖೇನ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದಿಂದ ಹಂಚಿಕೆಗನುಗುಣವಾಗಿ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡದಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಕಂಡುಬಂದಿರುತ್ತದೆ. ಈ ಸಂಬಂಧವಾಗಿ ರೈತರು ವಿವಿಧ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರದ ಪೂರೈಕೆ ಬಗ್ಗೆ ಅಹವಾಲುಗಳನ್ನು ಸಲ್ಲಿಸಿರುತ್ತಾರೆ.

ಯೂರಿಯಾ ಬೇಡಿಕೆ ಪ್ರಮುಖ ಕಾರಣಗಳು: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮುಂಚಿತವಾಗಿ ಉತ್ತಮ ಮಳೆಯಾಗಿದ್ದು, ಸಾಮಾನ್ಯ ಅವಧಿಗಿಂತ ಮುಂಚೆ ಬಿತ್ತನೆ ಪ್ರಾರಂಭವಾಗಿದೆ. ಈವರೆಗೆ ಬಿತ್ತನೆ ವಿಸ್ತೀರ್ಣ ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಹೆಚ್ಚಾಗಿರುತ್ತದೆ. ಹೆಚ್ಚು ರಸಗೊಬ್ಬರ ಅವಶ್ಯವಿರುವ ಮುಸುಕಿನ ಜೋಳದ ವಿಸ್ತೀರ್ಣವು ಗಣನೀಯವಾಗಿ ಅಂದಾಜು 2 ಲಕ್ಷ ಹೆಕ್ಟೇರ್ ಹೆಚ್ಚಳವಾಗಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಂದಾಜು 13,000 ಹೆಕ್ಟೇರ್ ಪ್ರದೇಶದಲ್ಲಿ ಮರುಬಿತ್ತನೆ ಕೈಗೊಳ್ಳಲಾಗಿರುತ್ತದೆ. ತುಂಗಭದ್ರಾ, ಕೃಷ್ಣಾ, ಕಾವೇರಿ ಇತ್ಯಾದಿ ಪ್ರಮುಖ ಜಲಾಶಯಗಳಿಂದ ಅವಧಿಗೂ ಮುನ್ನವೇ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಬಿಟ್ಟಿರುವುದರಿಂದ ಮುಂಚಿತವಾಗಿ ನಾಟಿ ಕೈಗೊಳ್ಳಲಾಗಿರುವುದು. ಯೂರಿಯಾ ಮತ್ತು ರಸಗೊಬ್ಬರ ಬೇಡಿಕೆ ಪ್ರಮುಖ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಗ್ರಾ.ಪಂ. ನೌಕರರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಸಿಐಟಿಯು ಆಗ್ರಹ

ಇಲಾಖೆಯ ಅಧಿಕಾರಿಗಳು ಪ್ರತಿ ಮಂಗಳವಾರ ಕೇಂದ್ರ ಸರ್ಕಾರದಿಂದ ಜರುಗಿಸುವ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೇ, ಕೇಂದ್ರ ಸರ್ಕಾರದ ರಸಗೊಬ್ಬರ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ ಅವಶ್ಯವಿರುವ ರಸಗೊಬ್ಬರ ಪೂರೈಕೆಗೆ ಅವಶ್ಯ ಕ್ರಮ ವಹಿಸುತ್ತಿದ್ದಾರೆ.

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ನ್ಯಾನೋ ರಸಗೊಬ್ಬರ ಬಳಕೆಗೆ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಿ ಅರಿವು ಮೂಡಿಸಲಾಗುತ್ತಿದೆ. ಬೆಳೆ, ಮಣ್ಣು, ಮಾನವ, ಜಾನುವಾರು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆಯನ್ನು ಕಡಿತಗೊಳಿಸಲು ರೈತರಲ್ಲಿ ಮನವಿ ಮಾಡಲಾಗಿದೆ.

ಆರಂಭಿಕ ಶುಲ್ಕ ಪರಿಗಣಿಸದೆ ಕೊರತೆಯಾಗಿರುವ 81,000 ಮೆ.ಟನ್ ಡಿಎಪಿ ಮತ್ತು 1,45,000 ಮೆ.ಟನ್ ಯೂರಿಯಾ ರಸಗೊಬ್ಬರವನ್ನು ಕೇಂದ್ರ ಸರ್ಕಾರವು ಪೂರೈಸಿದಲ್ಲಿ ರೈತರ ಬವಣೆ ನೀಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಕೂಡ ಅಗತ್ಯ ಕ್ರಮ ಜರುಗಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...