ಕೌಟುಂಬಿಕ ಕಲಹಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ.
ಹತ್ಯೆಯಾದ ಮೃತ ವ್ಯಕ್ತಿ ಸತೀಶ್ (60), ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿರುವ ಆರೋಪಿ. ತಾಯಿ ಮತ್ತು ಮಗ ಕೆ.ಆರ್.ನಗರದಲ್ಲಿ ನೆಲೆಸಿದ್ದರು. ಸತೀಶ್ ಕುಟುಂಬವನ್ನು ಸರಿಯಾಗಿ ನಿರ್ವಹಣೆ ಮಾಡದೇ ಅಕ್ರಮ ಸಂಬಂಧ ಹೊಂದಿದ್ದರಿಂದ ಕುಟುಂಬದಲ್ಲಿ ನಿರಂತರ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸಿ; ಎಐಡಿಎಸ್‌ಓ ಪ್ರತಿಭಟನೆ
ಈ ಕುರಿತು ತಂದೆ, ಮಗನ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದು, ನಿನ್ನೆ ರಾತ್ರಿ ಗಲಾಟೆ ತಾರಕಕ್ಕೇರಿ ಜಗಳದ ವೇಳೆ ರಂಜಿತ್ ರಾಡ್‌ನಿಂದ ತಂದೆಯ ಹತ್ಯೆ ಗೈದಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.





