ಹಾಸನ | ರಾಜ್ಯ ಸರ್ಕಾರ ವರದಿ; 17ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ; ಸುಭಾಷ್ ಬೆಟ್ಟದ ಕೊಪ್ಪ

Date:

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು ಹಾಗೂ ನಿಟ್ಟೂರು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿದ್ಯಾರ್ಥಿಗಳು, ಪೋಷಕರ ಬೃಹತ್ ಪ್ರತಿಭಟನಾ ಸಮಾವೇಶವನ್ನು ಭಾನುವಾರ ನಡೆಸಲಾಯಿತು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ “ರಾಜ್ಯದಾದ್ಯಂತ 40,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಬಡ,ರೈತ,ಕೂಲಿ-ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಸಂಪೂರ್ಣವಾಗಿ ಕಿತ್ತುಕೊಳ್ಳುವ ಹುನ್ನಾರ ಈ ಯೋಜನೆಯದಾಗಿದೆ. ರಾಜ್ಯದಲ್ಲಿ 6000 ಗ್ರಾಮ ಪಂಚಾಯಿತಿ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್  ಶಾಲೆಯನ್ನಾಗಿ ಪರಿವರ್ತಿಸಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು AIDSO ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ” ಎಂದು ತಿಳಿಸಿದರು. 

ಮುಂದುವರೆಯುತ್ತಾ ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ವರದಿಯ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇನ್ನೊಂದೆಡೆ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ, ಪೋಷಕರ ಮೇಲೆ ಆರೋಪ  ಮಾಡಲಾಗುತ್ತಿದೆ. ರಾಜ್ಯದಲ್ಲಿ 60,000 ಕ್ಕೂ ಹೆಚ್ಚು  ಶಿಕ್ಷಕರ ಹುದ್ದೆಗಳು ಖಾಲಿ ಇವೆ , 21,000 ಕ್ಕೂ ಹೆಚ್ಚು ಶಾಲೆ ಕಟ್ಟಡಗಳು ದುರಸ್ತಿಗಾಗಿ ಕಾಯುತ್ತಿವೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಇಲ್ಲದೆ ಸಾವಿರಾರು ಸರ್ಕಾರಿ ಶಾಲೆಗಳು ನಶಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಶ್ರಮಿಸಬೇಕಾದ ಸರ್ಕಾರಗಳು ಹೀಗೆ ಬಣ್ಣ ಬಣ್ಣದ ಹೆಸರುಗಳಿಂದ ಗ್ರಾಮೀಣ ಭಾಗದ ಶಾಲೆಗಳಿಗೆ ಬೀಗ ಹಾಕಿ ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ಬಡವರ , ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ಬೇರುಗಳು | ಹಾಸನದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು

ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಕೂಡ ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂಬಾಗಿಲಿನಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಕಳೆದ ಎಂಟು  ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ 3500ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...