ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್

Date:

ಡಾ. ಬಿ ಆರ್ ಅಂಬೇಡ್ಕರ್ ಅವರು ಮಹಿಳಾ ವಿಮೋಚಕ ಎಂದರೆ ತಪ್ಪಾಗಲಾರದು. ಭಾರತದ ಮಹಿಳೆಯರಿಗೆ ಇವರ ಕೊಡುಗೆ ಅಪಾರ. ಹಾಗೆಯೇ ಇಂದು ಕಾರ್ಮಿಕರಿಗೆ ಕೂಲಿ ಸಿಗುತ್ತಿದೆಯೆಂದರೆ ಅದು ಡಾ.ಅಂಬೇಡ್ಕರ್ ಅವರಿಂದ ಮಾತ್ರ ಎಂದು ಅಕ್ಕಾ ಅಕಾಡೆಮಿಯ ಡಾ. ಶಿವಕುಮಾರ್ ಸ್ಮರಿಸಿದರು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಯಲಹಂಕ ದೇವಿಹಳ್ಳಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡ ಹಮ್ಮಿಕೊಂಡಿದ್ದ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಗ್ರಾಮದ ಮಕ್ಕಳೊಂದಿಗೆ ಸ್ವಲ್ಪ ಹೊತ್ತು ಡಾ. ಅಂಬೇಡ್ಕರ್ ಅವರ ಬಗ್ಗೆ ಮಾಹಿತಿ ಪ್ರಾಶ್ನಾಳಿಯೊಂದೆಗೆ ತಮ್ಮ ಮಾತನ್ನು ಆರಂಭಿಸಿ, “ದೇವಿಹಳ್ಳಿ ಗ್ರಾಮದದಲ್ಲಿ ಡಾ. ಅಂಬೇಡ್ಕರ್ ಅವರ ಸ್ಮರಣೆಯ ಮಾಡುತ್ತಿರುವುದು ಸಂತೋಷದ ಸಂಗತಿ. ಆದರೆ ಅವರನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ ಎಂಬುದೇ ನನ್ನ ಪ್ರಶ್ನೆಯಾಗಿದೆ. ಈಗಲೂ ನಮ್ಮ ಮನೆಗಳಲ್ಲಿ ಮಕ್ಕಳಿಗೆ ಅದರಲ್ಲೂ ಹೆಣ್ಣುಮಕ್ಕಳಿಗೆ ನಾವು ಶಿಕ್ಷಣ ಕೊಡಿಸುತ್ತಿಲ್ಲ. ಮಕ್ಕಳಿಗೂ ಶಿಕ್ಷಣದಿಂದ ದೂರ ಇಡುವಂತಹ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುಃಖದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್‌ ಬಗ್ಗೆ ಹೇಳುತ್ತ ಹೋದರೆ ಪಟ್ಟಿ ಬೆಳೆಯುತ್ತಲೇ ಇರುತ್ತದೆ. ನಾವುಗಳೂ ಕೂಡ ನಮ್ಮ ಮಕ್ಕಳಿಗೆ ಮುಂದಿನ ಪೀಳಿಗೆಗೆ ಸಂವಿಧಾನವನ್ನು ಅರ್ಥ ಮಾಡಿಸುವುದು ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ದಾರಿಗಳ ಬಗ್ಗೆ ಅರಿವು ಮೂಡಿಸಿ ಮಕ್ಕಳನ್ನು ಶಿಕದಷಿತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ದಲಿತ ಮುಖಂಡ ಹೆಚ್‌ ಕೆ ಸಂದೇಶ್ ಮಾತನಾಡಿ, “ದೇಶದ ಪ್ರತಿಯೊಬ್ಬರೂ ಬಾಬಾ ಸಾಹೇಬರು ನೀಡಿದ ಸಂವಿಧಾನದ ಆಶ್ರಯದಲ್ಲಿಯೇ ಬದುಕು ನಡೆಸುವ ಜತೆಗೆ ಸರ್ಕಾರದಿಂದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಬಾಬಾ ಸಾಹೇಬರ ಜಯಂತಿಯನ್ನು ಒಂದು ಜಾತಿಗೆ ಸೀಮಿತಗೊಳಿಸಿ ಆಚರಿಸುವಂತಾಗಬಾರದು” ಎಂದರು.

“ಶೋಷಣೆ, ಅಸಮಾನತೆಯ ವಿರುದ್ಧ ನಿರಂತರವಾಗಿ ಹೋರಾಟ ಮಾಡಿ ನೊಂದವರು, ಬಡವರು, ಅಸ್ಪಶ್ಯರು, ಮಹಿಳೆಯರು, ಕಾರ್ಮಿಕರ ಪರವಾಗಿ ನ್ಯಾಯ ಒದಗಿಸಿಕೊಡಲು ಶ್ರಮಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲಬೇಕು. ತಾವು ಓದಿದ 50 ಸಾವಿರಕ್ಕೂ ಹೆಚ್ಚು ಪುಸ್ತಕಗಳ ಅಂಶಗಳನ್ನು ನೆನಪಿನಲ್ಲಿಟ್ಟುಕೊಂಡಿದ್ದ ಜ್ಞಾನಭಂಡಾರ ಅಂಬೇಡ್ಕರ್ ಅವರದು” ಎಂದು ಬಣ್ಣಿಸಿದರು.

“ಭಾರತ ಬೆಳೆಯುತ್ತಿದ್ದರೂ ಎಲ್ಲ ವರ್ಗಗಳನ್ನು ಒಟ್ಟಾಗಿ ಕೊಂಡೊಯ್ಯುವಲ್ಲಿ ಇನ್ನೂ ಯಶಸ್ವಿಯಾಗಿಲ್ಲ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಸಾಧ್ಯವಾಗದಿದ್ದರೆ ಶ್ರೀಮಂತರ ಬೆಳವಣಿಗೆಯಾಗುತ್ತದೆಯೇ ಹೊರತು ಬಡವರ ಭಾರತವಾಗುವುದಿಲ್ಲ. ಆ ನಿಟ್ಟಿನಲ್ಲಿ ಅಂಬೇಡ್ಕರ್‌ ಅವರ ಆಶಯದಂತೆ ಭಾರತ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಬೇಕು” ಎಂದು ಸಲಹೆ ನೀಡಿದ ಅವರು, ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಹವಾಮಾನ ವೈಪರೀತ್ಯ | ರಾಜ್ಯದ ಹಲವೆಡೆ ಭಾರೀ ಮಳೆ; ಬೆಳೆಹಾನಿಯಿಂದ ಕಂಗಾಲಾದ ರೈತರು

ಕಾರ್ಯಕ್ರಮದಲ್ಲಿ ಶಾಸಕ ಎಚ್ ಕೆ ಸುರೇಶ್, ಮಾಜಿ ಅದ್ಯಕ್ಷ ಎಂ ಆರ್ ವೆಂಕಟೇಶ್, ಡಿಜೆ ಬ್ರಹ್ಮೇಶ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆಶಾ ಶಾಂತಯ್ಯ, ಹರೀಶ್, ಮಂಜುಳಾ ಸುನಿಲ್ ಕುಮಾರ್, ಮಹಾ ನಾಯಕ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕರ ಬಳಗದವರು ಹಾಗೂ ದೇವಿಹಳ್ಳಿ ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...