ಹಾಸನ ದುರಂತ | ಮೃತಪಟ್ಟವರ ಸಂಖ್ಯೆ 9ಕ್ಕೇರಿಕೆ: ಆರೋಪಿ ಚಾಲಕ ಸೇರಿ 20 ಮಂದಿ ಗಾಯಾಳು

Date:

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ ಸೇರಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದ್ದಾರೆ.

ಆರೋಪಿ ಚಾಲಕ ಭುವನೇಶ್(25) ಸೇರಿದಂತೆ 20 ಮಂದಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಮೂರು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ಮೃತರ ವಿವರ ಹೀಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
  2. ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
  3. ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು
  4. ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
  5. ಕುಮಾರ (25) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
  6. ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
  7. ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
  8. ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
  9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು

ಗಣಪತಿ ವಿಸರ್ಜನಾ ಮೆರವಣಿಗೆ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಕುಟುಂಬದ ಸದಸ್ಯರನ್ನು ಮಾತನಾಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸ್ವರೂಪ್ , ಒಕ್ಕಲಿಗರ ರಾಜ್ಯ ಕಾರ್ಯದರ್ಶಿ ಸುಮುಖ ರಘು ಉಪಸ್ಥಿತರಿದ್ದರು.

ತಡರಾತ್ರಿಯಲ್ಲೇ ಕಾರ್ಯಪ್ರವೃತ್ತರಾದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ

ಹಾಸನ ದುರಂತದಲ್ಲಿ ಮೃತಪಟ್ಟ ಎಲ್ಲರ ಮೃತ ದೇಹಗಳನ್ನು ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿರುವ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಬೆಳಗಿನ ಬೆಳಗಿನ ಜಾವ ಮೂರು ಗಂಟೆಯವರೆಗೂ ಎಲ್ಲ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದರು.

ಎಲ್ಲ ಮೃತದೇಹಗಳು ಮರಣೋತ್ತರ ಪರೀಕ್ಷೆಯಾಗಿ ಅವರ ಕುಟುಂಬಸ್ಥರಿಗೆ ಹಸ್ತಾಂತರ ಮಾಡುವಂತೆ ಎಲ್ಲರ ಜೊತೆ ಸತತ ಸಂಪರ್ಕದಲ್ಲಿದ್ದು, ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿದೆ.

1002214051
ಗಾಯಾಳುಗಳ ವಿವರ

ರಾತ್ರಿ ಇಡೀ ಮುಖ್ಯಮಂತ್ರಿಗಳ ಜೊತೆ ಸಂಪರ್ಕದಲ್ಲಿದ್ದ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಎಲ್ಲ ನಿಮಿಷದ ಅಪ್ಡೇಟ್ ಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದರು.

ಆಗಲೇ ಹಾಸನದತ್ತ ಹೊರಟಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಮೊದಲು ಐಬಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ದುರಂತ ಸ್ಥಳಕ್ಕೆ ಭೇಟಿ ನೀಡಿ ನಂತರ ಗಾಯಾಳುಗಳನ್ನು ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ನಂತರ ಮೃತರ ಮನೆಗಳಿಗೂ ಕೂಡ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ವಲಯ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...