ಹಾಸನ | ವಿಷ ಸೇವಿಸಿ ಮಹಿಳೆ ಸಾವು

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹೆಚ್.ಮೈಲಳ್ಳಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ಮಹಿಳೆ ಹೆಚ್.ಎಲ್.ಇಂದ್ರ (24) ಎಂಬಾತೆ, ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್.ಮೈಲಳ್ಳಿ ಗ್ರಾಮದ ಎಂ.ಹೆಚ್ ಸ್ವಾಮಿ ಜೊತೆ ವಿವಾಹವಾಗಿದ್ದರು ಎನ್ನಲಾಗಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60ಗ್ರಾಂ. ಚಿನ್ನ ಹಾಗೂ 1.30 ಲಕ್ಷ ರೂ. ಹಣವನ್ನು ಹೆಚ್.ಎಲ್.ಇಂದ್ರ ಪೋಷಕರು ನೀಡಿದ್ದರು. ಪತಿ ಸ್ವಾಮಿ ಬೇಕರಿ ನಡೆಸುತ್ತಿದ್ದ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಗ್ರಾಮಕ್ಕೆ ಬಂದು ನೆಲೆಸಿದ್ದ. ಆಗಿನಿಂದ ವರದಕ್ಷಿಣೆ ಹಣ ತರುವಂತೆ ಹೆಂಡತಿಗೆ ಪೀಡಿಸುವುದರ ಜೊತೆಗೆ ಸಂದೇಹ ಪಡುತ್ತಿದ್ದ ಎನ್ನಲಾಗಿದೆ.

ಮದುವೆಯಾಗಿ ನಾಲ್ಕು ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ. ಒಂದೆರಡು ಬಾರಿ ರಾಜಿ ಪಂಚಾಯ್ತಿ ಕೂಡ ಮಾಡಿದ್ದರು. ಆದರೆ ದಂಪತಿ ಮಧ್ಯೆ ಜಗಳವಾಗಿ, ಪತ್ನಿ ವಿಷ ಸೇವಿಸಿದ್ದಳು. ಆಕೆಯನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ಈ ಘಟನೆ ಕುರಿತು ದುದ್ದ ಹೋಬಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎಫ್‌ಐಆ‌ರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...