ಹಾಸನ | ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಮಹಿಳಾ ಅಧಿಕಾರಿಗಳದ್ದೇ ಸಿಂಹಪಾಲು

Date:

ಶಿಲ್ಪಕಲೆ, ವಾಣಿಜ್ಯ ಬೆಳೆ, ಕೃಷಿ ಪ್ರವಾಸೋದ್ಯಮ, ತಂತ್ರಜ್ಞಾನ ಮತ್ತು ರಾಜಕಾರಣಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯಲ್ಲಿ ಇದೀಗ ಸರ್ಕಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಮೂಲಕ ಸಿಂಹಪಾಲು ಪಡೆದಿದ್ದಾರೆ.

ಕಂದಾಯ, ಪೊಲೀಸ್, ಕೃಷಿ, ಆರೋಗ್ಯ, ನ್ಯಾಯಾಲಯ, ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರದ್ದೇ ಸಿಂಹಪಾಲು. ಕಾನೂನುಗಳನ್ನು ಸಮರ್ಪಕವಾಗಿ ಬಳಸುವ, ಅನುಷ್ಠಾನಗೊಳಿಸುವ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವ, ಪ್ರಾಮಾಣಿಕತೆ, ಮಾನವೀಯತೆ, ಸಭ್ಯತೆ, ಸ್ವಚ್ಛತೆ, ಪರಿಸರ ಪ್ರೇಮ, ಶಾಂತಿ ಸೌಹಾರ್ದವನ್ನು ಮೈಗೂಡಿಸಿಕೊಂಡಿರುವ ಹಲವು ಮಹಿಳಾ ಅಧಿಕಾರಿಗಳು ‌ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಜಿಲ್ಲಾದ್ಯಂತ ಉನ್ನತ ಮಟ್ಟದ ಹುದ್ದೆಗಳಲ್ಲಿ ಮಹಿಳೆಯರೇ ಮುಖ್ಯಸ್ಥರು: ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಹಾಸನ ತಹಶೀಲ್ದಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ, ಕಾರ್ಮಿಕ ಅಧಿಕಾರಿ, ನ್ಯಾಯಧೀಶರು ಸೇರಿದಂತೆ ಬಹುತೇಕ ಅಧಿಕಾರಿಗಳು ಮಹಿಳೆಯರೇ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಯಾಗಿ ಸತ್ಯಭಾಮಾ ಅವರು ಅಧಿಕಾರ ವಹಿಸಿಕೊಂಡಿದ್ದು, ಜಿಪಂ ಸಿಇಒ ಬಿ ಆರ್ ಪೂರ್ಣಿಮಾ ಅಧಿಕಾರದಲ್ಲಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಶಾಂತಲಾ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಸನ ತಾಲೂಕು ತಹಶೀಲ್ದಾರ್ ಆಗಿ ಶ್ವೇತಾ ಕೆಲ ತಿಂಗಳ ಹಿಂದೆ ನೇಮಕಗೊಂಡಿದ್ದು, ಕೃಷಿ ಇಲಾಖೆ ಜಂಟಿ ನಿರ್ದೇಶಕಿಯಾಗಿ ಡಾ. ರಾಜಸುಲೋಚನಾ, ಕಾರ್ಮಿಕ ಅಧಿಕಾರಿ ಯಮುನಾ ನೇಮಕಗೊಂಡಿದ್ದಾರೆ. ಜಿಲ್ಲಾ ನ್ಯಾಯಾಧೀಶೆಯಾಗಿ ಕಾವ್ಯಶ್ರೀ ರಾಧಾರೂಪ ರಾಮ್‌ರಾವ್ ಕುಲಕರ್ಣಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಪ್ರಮುಖ ಹುದ್ದೆಗಳಿಗೆ ಮಹಿಳೆಯರ ನೇಮಕ

ಹಾಸನದ ಜಿಲ್ಲಾಧಿಕಾರಿ ಸತ್ಯಭಾಮಾ ಅವರು 2002ರಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಯಾಗಿದ್ದು, ಈ ಹಿಂದೆ ಕೋಲಾರದಲ್ಲಿ‌ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕಿ, ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ ಬಳಿಕ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

ಹಾಸನ : ಹಾಸನ ಜಿಪಂ ಸಿಇಒ ಆಗಿ ಬಿ ಆರ್ ಪೂರ್ಣಿಮಾ ಅವರು ಕಾರ್ಯ ನಿರ್ವಹಿಸುತ್ತಿದ್ದು, ನಗರಸಭೆಯಲ್ಲಿ ಕವಿತಾ ಅವರು ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಪ್ರಸೂತಿ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಸಾವಿತ್ರಿ, ಡಾ. ಪೂರ್ಣಿಮಾ ತಮ್ಮ ಸೇವಾ ಮನೋಭಾವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಸಕಲೇಶಪುರ : ತಾಲೂಕಿನಲ್ಲಿ ತಹಶೀಲ್ದಾರ್ ಮೇಘನಾ, ಅರಣ್ಯ ಇಲಾಖೆ ಅಧಿಕಾರಿ ಶಿಲ್ಪಾ, ಬಿಇಒ ಪುಷ್ಪಾ, ತೋಟಗಾರಿಕೆ ಇಲಾಖೆಯಲ್ಲಿ ವಿಜಯ ಚಿತ್ರ, ಕಾರ್ಮಿಕ ಇಲಾಖೆಯಲ್ಲಿ ಸ್ವರ್ಣ ಗೌರಿ, ನ್ಯಾಯಧೀಶೆಯಾಗಿ ಧನಲಕ್ಷ್ಮೀ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಅರಸಿಕೇರೆ : ತಾಲೂಕಿನಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರ ಸಬ್ ಇನ್ಸ್‌ಪೆಕ್ಟರ್ ಲತಾ ಎಂ ಜಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೊಳೆನರಸೀಪುರ : ತಾಲೂಕಿನಲ್ಲಿ ಸಿಡಿಪಿಒ ಭಾಗ್ಯಮ್ಮ, ಕೃಷಿ ಇಲಾಖೆ ಅಧಿಕಾರಿ ಸಪ್ನ, ಮೀನುಗಾರಿಕೆ ಇಲಾಖೆ ಅಧಿಕಾರಿಯಾಗಿ ಪದ್ಮ ಕಾರ್ಯನಿರ್ವಹಿಸುತ್ತಿದ್ದಾರೆ.

ಚನ್ನರಾಯಪಟ್ಟಣ : ತಾಲೂಕಿನ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರೇಖಾ ಬಾಯಿ, ಅಬಕಾರಿ ನಿರೀಕ್ಷಕಿಯಾಗಿ ಅನಿತಾ, ಅರಣ್ಯ ಇಲಾಖೆ ಅಧಿಕಾರಿ ಪಲ್ಲವಿ, ಚುನಾವಣಾಧಿಕಾರಿ ಅನಿತಾ, ಬಿಇಒ ದೀಪ, ಕೃಷಿ ಇಲಾಖೆ ಅಧಿಕಾರಿ ರಶ್ಮಿ, ನ್ಯಾಯಧೀಶರಾಗಿ ಎಸ್ ರಶ್ಮಿ, ಮಮತಾ, ಸುನೀತಾ ಕರ್ತವ್ಯ ನಿರ್ವಸಿಸುತ್ತಿದ್ದಾರೆ. 

ಆಲೂರು : ತಾಲೂಕಿನ ಸಬ್ಇನ್ಸ್‌ಪೆಕ್ಟರ್ ಜನಬಾಯಿ ಕಡಪಟ್ಟಿ, ನ್ಯಾಯವಾದಿ ನಿರ್ಮಲ ಎಂ ಸಿ ಕಾರ್ಯನಿರ್ಹಿಸುತ್ತಿದ್ದಾರೆ.

ಬೇಲೂರು ತಾಲೂಕಿನ ಸರ್ಕಾರಿ ತಹಶೀಲ್ದಾರ್ ಎಂ‌ ಮಮತಾ, ಅಬಕಾರಿ ನಿರೀಕ್ಷಕಿ ಚಂದನ, ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಕಾವ್ಯ, ಸಾಮಾಜಿಕ ಅರಣ್ಯಾಧಿಕಾರಿ ಶೃತಿ, ಬಿಇಒ ಸುನೀತಾ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಅರಕಲಗೂಡು : ತಾಲೂಕಿನ ನ್ಯಾಯಾಧೀಶೆಯಾಗಿ ಚೇತನಾ ಮಳವಳ್ಳಿ, ಕೃಷಿ ಅಧಿಕಾರಿಯಾಗಿ ಕವಿತಾ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. 

ಹಾಸನ ಜಿಪಂ ಸಿಇಒ ಆಗಿರುವ ಬಿ ಆರ್ ಪೂರ್ಣಿಮಾ ಅವರು, ಮಂಡ್ಯ ಜಿಲ್ಲೆಯ ಬೆಸಗರಹಳ್ಳಿ ಗ್ರಾಮದವರು. ರಾಜ್ಯದ ಪ್ರಮುಖ ಕಥೆಗಾರರಲ್ಲಿ ಒಬ್ಬರಾದ ಬೆಸಗರಹಳ್ಳಿ ರಾಮಣ್ಣನವರ ಪುತ್ರಿಯಾದ ಇವರು, ಮೈಸೂರು ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಎಂಎ ಪದವಿ ಪಡೆದು ಮೊದಲಿಗೆ ಉಪನ್ಯಾಸಕರಾಗಿ ಮತ್ತು ಅಬಕಾರಿ ಇಲಾಖೆಯಲ್ಲಿ ಅಬಕಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದು, 2004ರಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 2006ರಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ, ಮಂಡ್ಯ ಜಿಲ್ಲೆಯ ಭೂಸ್ವಾಧೀನ ಅಧಿಕಾರಿ, ರಾಮನಗರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಹಾಸನ ನಗರ ಸಭೆಯಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಅವರು ತಮ್ಮದೆ ಕಾರ್ಯಶೈಲಿಯ ಮೂಲಕ ಜಿಲ್ಲೆಗೆ ಚಿರಪರಿಚಿತರಾಗಿದ್ದು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಇವರು, ಕರ್ತವ್ಯ ನಿಷ್ಠೆಯ ಜೊತೆಗೆ ಜನಸೇವೆಗೂ ಸೈ ಎನಿಸಿ ಕೊಂಡಿದ್ದಾರೆ. ಯಾವುದೇ ರಾಜಕಾರಣಿಗಳಿಗೆ ಬಗ್ಗದೆ ಉನ್ನತ ಅಧಿಕಾರಿಗಳ ಮುಲಾಜಿಗೆ ಒಳಗಾಗದೆ ಕಾಮಾಗಾರಿಗಳನ್ನು ಅಚ್ಚುಕಟ್ಟಾಗಿ ಮಾಡಿಸುವುದರಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ದುಡಿದ ಹಣ ಖರ್ಚುಮಾಡುವುದು ಇವರ ಹವ್ಯಾಸವಾಗಿದೆ.

ಸಕಲೇಶಪುರ ವಲಯ ಅರಣ್ಯ ಅಧಿಕಾರಿ ಶಿಲ್ಪಾ ಅವರು ಉತ್ತಮ ಸೇವೆಗಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮುಖ್ಯಮಂತ್ರಿ ಪ್ರಶಸ್ತಿ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಇವರು, ಈ ಹಿಂದೆ ಚಿಕ್ಕಮಗಳೂರಿನಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಬಿಜೆಪಿಯ ಸರ್ಕಾರದಲ್ಲಿ ಮಂತ್ರಿ ಆಗಿದ್ದ ಸಿ‌ ಟಿ ರವಿ ಅವರೊಂದಿಗೆ ಪ್ರಾಮಾಣಿಕ ಕಾರ್ಯನಿರ್ವಹಣೆ ಸಂಬಂಧ ಘರ್ಷಣೆ ಉಂಟಾಗಿಗಿದ್ದು, ಅಲ್ಲಿಂದ ಸಕಲೇಶಪುರಕ್ಕೆ ವರ್ಗಾವಣೆಗೊಂಡಿದ್ದಾರೆ.

ಅರಸಿಕೆರೆಯ ನಗರ ಠಾಣೆ ಸಬ್ ಇನ್‌ಸ್ಪೆಕ್ಟರ್ ಆಗಿ ಕಾರ್ಯನಿರ್ವ ಹಿಸುತ್ತಿರುವ ಲತಾ ಎಂ ಜಿ ಅವರು ಮಂಡ್ಯ ಜಿಲ್ಲೆಯ ಜಿನುಕುರುಳಿ ಗ್ರಾಮದವರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ.

ಹೊಳೆನರಸೀಪುರದ ಕೃಷಿ ಇಲಾಖೆಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆ ಎಂ ಸಪ್ನಾ ಅವರು ರೈತರಿಗೆ ಬೆಳೆಯ ಬಗ್ಗೆ, ನೀರಿನ ಬಳಕೆ, ರೋಗ ನಿರೋಧಕ ಔಷಧಿ, ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ಸರ್ಕಾರದ ಸಬ್ಸಿಡಿಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ ರೈತರಿಗೆ ತಲುಪಿಸುವಲ್ಲಿ ಶ್ರಮವಹಿಸುತ್ತಾರೆ. ಹೋಬಳಿ ಮಟ್ಟದಲ್ಲಿರುವ ರೈತ ಮಿತ್ರ ಕೇಂದ್ರಗಳು ಜನಪರವಾಗಿ ಕೆಲಸ ಮಾಡುವಂತೆ ಆಸಕ್ತಿ ವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

ಚನ್ನರಾಯಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ‌ ಅವರು ಸ್ಥಳೀಯರಾಗಿದ್ದು, ಸಹ ಶಿಕ್ಷಕಿಯಾಗಿ ಕೆಲಸ ಮಾಡಿ ಈಗ ಅಧಿಕಾರಿಯಾಗಿದ್ದಾರೆ. ಚನ್ನರಾಯಪಟ್ಟಣ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಹಿಂದುಳಿದಿದ್ದು ಮುಖ್ಯ ವಾಹಿನಿಗೆ ಬರಬೇಕೆಂದು ಶ್ರಮಪಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೇಲೂರಿನ ತಹಶೀಲ್ದಾರ್ ಮಮತಾ ಅವರು ಶಿಸ್ತಿನ ಸಿಫಾಯಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಕಾರ್ಯಕರ್ತರು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಮೊಕದ್ದಮೆಗಳನ್ನು ದಾಖಲಿಸಿದ್ದರು. ತಾಲೂಕಿನಲ್ಲಿ ಪ್ರಾಮಾಣಿಕ ಅಧಿಕಾರಿ ಇದ್ದಾರೆ ಎಂಬುವಂತೆ ಕೆಲಸ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...