ಹಾಸನ | ಗಾಂಜಾ ಮತ್ತಿನಲ್ಲಿ ಯುವಕನ ಹತ್ಯೆ; ಘಟನೆ ಬಳಿಕ Video ಹರಿಬಿಟ್ಟ ಆರೋಪಿ

Date:

ಗಾಂಜಾ ಮತ್ತಿನಲ್ಲಿ ಇಬ್ಬರು ಸ್ನೇಹಿತರ ನಡುವೆ ನಡೆದ ಗಲಾಟೆ ಹತ್ಯೆಯಲ್ಲಿ ಕೊನೆಗೊಂಡಿರುವ ಘಟನೆ ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಹತ್ಯೆ ಮಾಡಿದ ಬಳಿಕ Video ಮಾಡಿ ಹರಿಬಿಟ್ಟಿರುವ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಹೂವಿನಹಳ್ಳಿ ಗ್ರಾಮದ ನಿವಾಸಿ ಕೀರ್ತಿ (24) ಕೊಲೆಯಾದವ. ದೊಡ್ಡಕಣಗಾಲ್ ಗ್ರಾಮದ ನಿವಾಸಿ ಉಲ್ಲಾಸ್ ಎಂಬಾತ ಕೊಲೆ ಆರೋಪಿ. ಜೊತೆಗಿದ್ದ ಸ್ನೇಹಿತನನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ಸ್ಥಳೀಯರಲ್ಲಿ ಭೀತಿ ಉಂಟು ಮಾಡಿದೆ.

ಇನ್ನು, ಹತ್ಯೆಯ ನಂತರ ಆರೋಪಿ ಘಟನೆಯ ವಿಡಿಯೋ ಮಾಡಿ ವಿಕೃತಿ ಮೆರೆದಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಶ್ರೀನಿಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾಸನ | ಡಿ.6ರಂದು ನಡೆದ ಸರ್ಕಾರಿ ಸಮಾವೇಶಕ್ಕೆ 5 ಕೋಟಿ ರೂ. ವೆಚ್ಚ: ಸಿ ಪುಟ್ಟಯ್ಯ ಹಂದನಕೆರೆ ಖಂಡನೆ

ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಗಾಂಜಾ ವ್ಯಸನ ಮತ್ತು ಅದರಿಂದ ಉಂಟಾಗುತ್ತಿರುವ ಅಪರಾಧ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸುತ್ತಿದ್ದು, ಈ ಹಿನ್ನೆಲೆ ಅಪರಾಧ ಕೃತ್ಯಗಳಿಗೆ ವಿಧಿಸುವ ಶಿಕ್ಷೆಯ ಪ್ರಮಾಣ ಹಾಗೂ ಕಾನೂನುಗಳು ಇನ್ನಷ್ಟು ಕಠಿಣವಾಗಬೇಕಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...