ಹಾಸನದ ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Date:

ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವೆಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಈ ದೇಗುಲ ಚಿಕ್ಕ ತಿರುಪತಿ ಇಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದರು.

ಖಾಸಗಿ ಸಂಸ್ಥೆಯೊಂದರ ವತಿಯಿಂದ ಭಕ್ತರಿಗೆ ಮೊಸರನ್ನ ಹಾಗೂ ಬಿಸಿಬೇಳೆ ಬಾತ್ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30 ರಿಂದ ಆಹಾರ ವಿತರಣೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಜಾತ್ರೆಯಲ್ಲಿ ಆಹಾರ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ಭಕ್ತರಲ್ಲಿ ಸೋಮವಾರ ಮುಂಜಾನೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಸ್ವಸ್ಥರಾದವರ ಪೈಕಿ 20 ಮಂದಿ ಗುಣಮುಖರಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಭಕ್ತರಿಗೆ ನೀಡಿದ್ದ ಆಹಾರದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ. ತಕ್ಷಣವೇ ಚಿಕಿತ್ಸೆ ದೊರೆತಿದ್ದರಿಂದ ಅನೇಕ ಭಕ್ತರು ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯದಲ್ಲಿ ಹಲವು ದೇಗುಲಗಳಲ್ಲಿ ಪ್ರಸಾದ ಅಥವಾ ಆಹಾರ ಸೇವಿಸಿ ಭಕ್ತರು ಅಸ್ವಸ್ಥರಾದ ಮತ್ತು ಮೃತಪಟ್ಟ ಘಟನೆಗಳು ಈ ಹಿಂದೆ ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಚಿಕ್ಕ ತಿರುಪತಿ ಘಟನೆ ಭಕ್ತರಲ್ಲಿ ತೀವ್ರ ಆತಂಕ ಮೂಡಿಸಿತ್ತು.
2018 ರಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ್ದ ನೂರಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದರು. 17 ಜನರು ಸಾವನ್ನಪ್ಪಿದ್ದರು. ಆದರೆ, ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಘಟನೆಯಲ್ಲಿ ಪ್ರಸಾದಕ್ಕೆ ಉದ್ದೇಶಪೂರ್ವಕ ವಿಷ ಬೆರೆಸಿರುವುದು ತನಿಖೆಯಲ್ಲಿ ದೃಢಪಟ್ಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರಾಜ್ಯ ಸರ್ಕಾರ ವರದಿ; 17ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ; ಸುಭಾಷ್ ಬೆಟ್ಟದ ಕೊಪ್ಪ

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು...

ಹಾಸನ | ಚಿಕ್ಕನಾಳು ಕನ್ನಡ, ಉರ್ದು ಸರ್ಕಾರಿ ಪ್ರಾಥಮಿಕ ಶಾಲೆ ಉಳಿಸಿ; AIDSO ಪ್ರತಿಭಟನೆ 

ಹಾಸನ ನಗರದ ಚಿಕ್ಕನಾಳು ಏರಿಯಾದ ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ...

ಅನುದಾನ ಕೊರತೆ: 20 ವರ್ಷಗಳಿಂದ ತೆವಳುತ್ತಿದೆ ಹಾಸನದ ವಿಮಾನ ನಿಲ್ದಾಣ ಕಾಮಗಾರಿ

ಉಡಾನ್ (UDAN) ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ 'ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ'ದ ಕಾಮಗಾರಿಯು...

ಹಾಸನ | ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ ಒಕ್ಕಲಿಗರ ಸಂಘ

ಜಿಲ್ಲೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ಹಾಸನ...