ಹಾಸನ | ಆಕಸ್ಮಿಕ ಬೆಂಕಿ; ನೂರಾರು ಎಕರೆ ಕಾಫಿ ತೋಟ ಬೆಂಕಿಗಾಹುತಿ

Date:

  • 100 ಎಕರೆಗೂ ಹೆಚ್ಚು ಪ್ರದೇಶದ ಕಾಫಿ ಗಿಡಗಳಿಗೆ ಹಾನಿ
  • ಅಗ್ನಿ ಅವಘಡ ಕಂಡು ಕಣ್ಣೀರಿಟ್ಟ ತೋಟದ ಮಾಲೀಕರು  

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣ ಕಾಫಿ ತೋಟ ಸುಟ್ಟುಹೋಗಿರುವ ಘಟನೆ ಹಾಸನ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ನೂರಾರು ಎಕರೆ ಕಾಫಿ ತೋಟ ಬೆಂಕಿಗೆ ಆಹುತಿಯಾಗಿದೆ.

ಸಕಲೇಶಪುರ

ಹೊಸಹಳ್ಳಿ ಗ್ರಾಮದ ಕಾಫಿ ಬೆಳೆಗಾರರಾದ ಮಲ್ಲೇಶ್, ಪಾರ್ವತಮ್ಮ, ಹಾದಿಮನೆ ಜಗ, ಚೀರಿ ಸುರೇಶ್, ತಮ್ಮಣ್ಣ ಎಂಬುವರಿಗೆ ಸೇರಿದ ಅಂದಾಜು 100 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳು ಸುಟ್ಟು ಹೋಗಿವೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟವುಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸಹಳ್ಳಿ ಗ್ರಾಮದ ಥಾಳನೇರಿ ಗುಡ್ಡದ ಸುತ್ತಮುತ್ತ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ತೋಟದಲ್ಲಿ ವ್ಯಾಪಿಸಿದೆ. ಅಕ್ಕಪಕ್ಕದವರ ತೋಟಗಳಿಗೂ ಬೆಂಕಿ ತಗುಲಿದೆ.

ಸಕಲೇಶಪುರ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಲೀಕರು ಬೆಂಕಿ ನಂದಿಸಲು ಪ್ರಯತ್ನಿಸುವ ಹೊತ್ತಿಗಾಗಲೇ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಕಾಫಿ ಗಿಡಗಳ ಜೊತೆಗೆ ಬೆಲೆ ಬಾಳುವ ಮರಗಳು, ಕಾಳು ಮೆಣಸಿನ ಬಳ್ಳಿ ಬೆಂಕಿಗೆ ಆಹುತಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಫಸಲು ನೀಡುವಷ್ಟು ಮಟ್ಟಕ್ಕೆ ಬೆಳೆದು ನಿಂತಿದ್ದ ಕಾಫಿ ಗಿಡಗಳು ಬೆಂಕಿಗೆ ಆಹುತಿಯಾಗಿರುವುದು ಕಂಡು ಕಾಫಿ ತೋಟದ ಮಾಲೀಕರು ಕಣ್ಣೀರಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...