ಹಾಸನ | ಮಹಾನೀಯರ ಜಯಂತಿ ಮತ್ತು ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ

Date:

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯೂ ಬೇಲೂರು ತಾಲೂಕು ಪಂಚಾಯಿತಿ ಸಂಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ, ಶಿವಯೋಗಿ ಸಿದ್ಧರಾಮ ಜಯಂತಿ ಹಾಗೂ ಮಹಾಯೋಗಿ ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿಯ ಪೂರ್ವಭಾವಿ ಸಭೆಯನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜ.10ರಂದು ಬೆಳಗ್ಗೆ 9:00ಗಂಟೆಗೆ ನಿಗದಿಯಾಗಿದ್ದ ಸಭೆ 10.30ಕ್ಕೆ ಪ್ರಾರಂಭಿಸಲಾಯಿತು. ‌ಶಾಸಕ ಎಚ್‌.ಕೆ. ಸುರೇಶ್ ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬೇಲೂರು ತಾಲೂಕು ತಹಸೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿ ಮಮತಾ ಗಣರಾಜ್ಯೋತ್ಸವ ಮತ್ತು ಮಹನೀಯರ ಜಯಂತಿಯ ಕಾರ್ಯಕ್ರಮದ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಜೇಗೌಡ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಒರ್ವ ವ್ಯಕ್ತಿಗೆ ಗೌರವಿಸಬೇಕು ಎಂದು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಾತನಾಡಿದ ಶಿಕ್ಷಕ ಪಾಲಾಕ್ಷರವರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಶಾಲಾ, ಕಾಲೇಜು ಕ್ರೀಡಾಪಟುಗಳಿಗೆ ಗೌರವಿಸಬೇಕು ಎಂದು ಮನವಿ ಮಾಡಿಕೊಂಡರು.

ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ನೂರ್ ಅಹಮದ್, ಈ ಹಿಂದೆ ಆಯೋಜಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳಿಗಿಂತ ಪ್ರಸ್ತುತ ಉತ್ತಮ ರೀತಿಯಲ್ಲಿ ಅರ್ಥ ಪೂರ್ಣವಾಗಿ ಇಂದಿನ ತಹಸೀಲ್ದಾರ್  ಮತ್ತು ಶಾಸಕರು ಆಯೋಜಿಸುತ್ತಿದ್ದಾರೆ. ಆದರೆ, ಶಾಸಕರು ಕೇವಲ ಭಾಷಣಗಳಲ್ಲಿ ಮಾತ್ರ ಪಾರದರ್ಶಕತೆ ಇದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ನ್ಯಾಯ ಕೊಡಿಸುವಲ್ಲಿ ನಾನು ಶ್ರಮಿಸುತ್ತಿದ್ದೇನೆ ಎನ್ನುತ್ತಾರೆ. ಆದರೆ, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದ್ದಾರೆ.

ರಾಷ್ಟ್ರೀಯ ಹಬ್ಬ ಆಚರಣೆ ಸಮಿತಿ ವತಿಯಿಂದ ಕೊಡಮಾಡುವ ಪ್ರಶಸ್ತಿಗೆ ಶಾಸಕರ ಶಿಫಾರಸ್ಸು ಇದ್ದವರಿಗೆ ಮಾತ್ರ ಬೇಲೂರು ತಾಲೂಕಿನಲ್ಲಿ ಪ್ರಶಸ್ತಿ ಲಭ್ಯವಾಗುತ್ತಿದೆ. ನೈಜ ಫಲಾನುಭವಿಗಳಿಗೆ ಗೌರವ ಸಲ್ಲುತ್ತಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ತಪ್ಪು ಆಗದಂತೆ ಎಚ್ಚರ ವಹಿಸ ಬೇಕೆಂದು ಸಲಹೆ ನೀಡಿದರು.

ಮಾತನಾಡಿದ ಶಾಸಕರು, ನಿಮಗೆ ಮಾಹಿತಿಯ ಕೊರತೆ ಇದೆ. 224ಕ್ಷೇತ್ರಗಳಲ್ಲಿ ಬೇಲೂರು ಕ್ಷೇತ್ರದಲ್ಲಿ ನಾನು ಪಾರದರ್ಶಕವಾಗಿ, ಜಾತ್ಯತೀತ ಹಾಗೂ ಪಕ್ಷತೀತವಾಗಿ ಕಾರ್ಯನಿರಸಿಕೊಂಡು ಬರುತ್ತಿದ್ದೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು  ಏರುಧ್ವನಿಯಲ್ಲೇ ಉತ್ತರಿಸಿದರು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೊಡ ಮಾಡುವ  ಪ್ರಶಸ್ತಿಗೆ ಬೇಲೂರು ತಾಲೂಕಿನ ಸಾರ್ವಜನಿಕರು, ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಬಹುದು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರ ಪರವಾಗಿ ನಾಗರಿಕರು ಸಹ ಅರ್ಜಿಯ ಮೂಲಕ ಮಾಹಿತಿ ನೀಡಬಹುದು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ  ತಹಸೀಲ್ದಾರ್ ಪುರಸಭೆ ಅಧ್ಯಕ್ಷೆ ತೀರ್ಥ್ ಕುಮಾರಿ ಎಂ.ಆರ್. ವೆಂಕಟೇಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣ ಅಧಿಕಾರಿ ಸತೀಶ್, ಸರ್ಕಲ್ ಇನ್ಸ್ಪೆಕ್ಟರ್ ಜಯರಾಮ್, ಪುರಸಭೆ ಮುಖ್ಯ ಅಧಿಕಾರಿ ಸುಜಯ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಗೌಡ, ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ತಾಲೂಕ ಮಟ್ಟದ ಎಲ್ಲಾ ಅಧಿಕಾರಿವರ್ಗದವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...