ಹಾಸನ | ಬಾಲ್ಯ ವಿವಾಹ, ಬಾಲ ಗರ್ಭಾವಸ್ಥೆ ವಿರುದ್ಧ ಜಾಗೃತಿ: ಕಿರುನಾಟಕ

Date:

ಭಾರತವು ವೈವಿಧ್ಯತೆಯಲ್ಲೂ ಏಕತೆ ಹೊಂದಿರುವ ದೇಶವಾಗಿದ್ದು, ಈ ಭಾವನೆಯನ್ನು ಯುವಜನರ ಮೂಲಕ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲ ಗರ್ಭೀಣಿ ಹಾಗೂ ಪೋಕ್ಸೊ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಇಂತಹ ಸಾಮಾಜಿಕ ಅನಿಷ್ಟಗಳನ್ನು ತಡೆಯಲು ಬೀದಿ ನಾಟಕಗಳ ಮೂಲಕ ಸಂದೇಶ ನೀಡಲಾಗುತ್ತಿದೆ. ಜತೆಗೆ ಹಾಸನವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿ ಘೋಷಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎಸ್ ಲತಾಕುಮಾರಿ ಹೇಳಿದರು.

ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಿಮ್ಸ್ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಹಾಗೂ ಪ್ರಾಂತೀಯ ನಿರ್ದೇಶನಾಲಯ ಬೆಂಗಳೂರು ಇವರ ಆಶ್ರಯದಲ್ಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿ ಕುರಿತ ಜಾಗೃತಿ ಕಿರುನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲ್ಯವಿವಾಹ ಹಾಸನ

“ದೇಶದ ವಿವಿಧ ರಾಜ್ಯಗಳಿಂದ ಸುಮಾರು 200 ಮಂದಿ ಯುವಜನರು ಭಾಗವಹಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ. ಜನವರಿ 5ರಿಂದ 11ರವರೆಗೆ ನಡೆಯಲಿರುವ ಶಿಬಿರದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು ನಗರ ಪಾಲಿಕೆ ಎದುರು ಕೊರಗರ ಪ್ರತಿಭಟನೆ: ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಮುನೀರ್‌ ಕಾಟಿಪಳ್ಳ ಕಿಡಿ

ಕಾರ್ಯಕ್ರಮದಲ್ಲಿ ಸರ್ಕಾರದ ಜಿಲ್ಲಾ ಉಸ್ತುವಾರಿ ನವೀನ್ ರಾಜ್ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ ಆರ್ ಪುರ್ಣಿಮಾ, ಹಿಮ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಾಧಿಕಾರಿ ನಿಚಿತ ಕುಮಾರಿ, ತೇಜಸ್ವಿನಿ, ಡಾ. ಪ್ರಕಾಶ್, ಶಶಿಧರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...