ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

Date:

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು ದೇವಾಲಯವು ವಿಶ್ವ ಪರಂಪರೆ ಪಟ್ಟಿಗೆ ಸೇರಿದ ಕೆಲವೇ ವಾರಗಳಲ್ಲಿ ಈ ಗಲಾಟೆ ನಡೆದಿದ್ದು, ಸ್ಥಳೀಯರಲ್ಲಿ ಅಸಮಾಧಾನ ಮೂಡಿಸಿದೆ.

ಉತ್ಸವದಲ್ಲಿ ಅಡ್ಡೆ ಹೊರುವ ಅಡ್ಡಗಾರರಿಗೆ ದೇವಾಲಯ ಅಡಳಿತ ಮಂಡಳಿಯು ಅಗೌರವ ತೋರುತ್ತಿದೆ ಎಂದು ಆರೋಪಿ ಅಡ್ಡೆಗಾರರು ಆಡ್ಡೆ ಹೊರಲು ನಿರಾಕರಿಸಿದ್ದರು. ಅವರು ಗೈರಾಗಿದ್ದರಿಂದ ಅಧಿಕಾರಗಳೇ ಅಡ್ಡೆ ಹೊತ್ತು ಉತ್ಸವ ನಡೆಸಿದ್ದಾರೆ.

ಅಲ್ಲದೆ, ಅಡ್ಡೆಗಾರರು ಬಾರದ ಹಿನ್ನೆಲೆಯಲ್ಲಿ ಅಡ್ಡೆಯನ್ನು ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲು ತಹಶೀಲ್ದಾರ್ ಮುಂದಾಗಿದ್ದರು. ಅದಕ್ಕಾಗಿ, ಟ್ರ್ಯಾಕ್ಟರ್‌ಅನ್ನು ದೇವಾಲಯದ ಆವರಣಕ್ಕೆ ಕರೆಸಿದ್ದರು. ಅವರ ನಡೆಯನ್ನು ದೇವಾಲಯದ ಅರ್ಚಕರು ಮತ್ತು ಭಕ್ತರು ಖಂಡಿಸಿದ್ದಾರೆ. ಬಳಿಕ, ಕಂದಾಯ ಇಲಾಖೆಯ ಅಧಿಕಾರಿಗಳೇ ಅಡ್ಡೆ ಹೊತ್ತು ಉತ್ಸವ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳು ಅಡ್ಡೆ ಹೊತ್ತಿದ್ದನ್ನು ಖಂಡಿಸಿ ಅಡ್ಡೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅಡ್ಡೆಗಾರರೇ ಅಡ್ಡೆ ಹೊರುವ ಸಂಪ್ರದಾಯ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ, ತಹಶೀಲ್ದಾರ್ ಮಮತಾ ಅವರು ಸಂಪ್ರದಾಯವನ್ನು ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿವರ್ಷ ಬೇಲೂರಿನ ಪ್ರಮುಖ ನಾಲ್ಕು ಬೀದಿಗಳಲ್ಲಿ ಉತ್ಸವ ಸಾಗುತ್ತಿತ್ತು. ಆದರೆ, ಈ ವರ್ಷ ಅಡ್ಡೆಗಾರರ ಬಾರದ ಹಿನ್ನೆಲೆಯಲ್ಲಿ ದೇವಾಲಯದ ಅರವಣದಲ್ಲಿಯೇ ಉತ್ಸವ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...