ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹಾರನಹಳ್ಳಿಯ ಮಂಜುನಾಥ್(30) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆ ಫಲಿಸದೆ
ಹ್ಯುಂಡೈ ಐ-20 ಕಾರು ಅತಿ ವೇಗವಾಗಿ ಚಲಿಸುತ್ತಿತ್ತು. ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಲವು ಬಾರಿ ಉರುಳಿ ಪಕ್ಕದ ಲೇನ್‌ಗೆ ಬಿದ್ದಿದೆ. ವಿದ್ಯುತ್ ಕಂಬವೂ ನೆಲಕ್ಕುರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಜಖಂಗೊಂಡ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಹುತೇಕ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸ್ಥಳೀಯರು ಸಹಕರಿಸಿದ್ದಾರೆ ಎನ್ನಲಾಗಿದೆ.
ಹಾರನಹಳ್ಳಿಯ ಮಂಜುನಾಥ್ ಅವರ ಮೃತದೇಹವನ್ನು ಅರಸೀಕೆರೆ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ತಂದೆ, ತಾಯಿ, ಮಗ ಸಾವು
ನವೀನ್ ಮತ್ತು ಪವನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಹಾಸನದ MMM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ದುರಂತಕ್ಕೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬಾಣಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





