ಹಾಸನ | ಬೆಲೆ ಬಾಳುವ ಮರಗಳ ಮಾರಣಹೋಮ; ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ – ಪರಿಶೀಲನೆ

Date:

ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಗ್ರಾಮಕ್ಕೆ ರೆವೆನ್ಯೂ ಇನ್‌ಸ್ಪೆಕ್ಟರ್‌ ಮತ್ತು ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾಗ ಮರ ಕಡಿದಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರು ತಹಶೀಲ್ದಾರ್‌ಗೆ ಮಾಹಿತಿ ನೀಡಿದ್ದು, ತಹಶೀಲ್ದಾರ್‌ ಮಮತಾ ಸ್ಥಳಕ್ಎಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮದ ಸರ್ವೆ ನಂ.16ರ ಸರ್ಕಾರಿ ಭೂಮಿಯಲ್ಲಿ ಬೆಳೆದಿದ್ದ ಸುಮಾರು 300ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ. ಅವುಗಳಲ್ಲಿ ಬೆಲೆ ಬಾಳುವ ಸಾಗವಾನಿ, ಹೊನ್ನೆ, ಬೀಟೆ ಮರಗಳೂ ಕೂಡ ಸೇರಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಗಳು 1

ಸರ್ಕಾರಿ ಭೂಮಿಯಲ್ಲಿದ್ದ ಬೆಲೆ ಬಾಳುವ ಮರಗಳನ್ನು ಕಡಿದು ಹಾಕಿದ್ದರೂ, ಅರಣ್ಯ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

“ಮರಗಳ್ಳರು ದಿನನಿತ್ಯ ಮರಗಳನ್ನು ಕಡಿದು, ಹೊತ್ತೊಯ್ದಿದ್ದಾರೆ. ಆದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೆಲವ ಪ್ರಭಾವಿಗಳು ಕೂಡ ಮರಗಳ್ಳತನ ಮಾಡಿದ್ದು, ಅವರೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ತಹಶೀಲ್ದಾರ್‌ ಅವರನ್ನು ಒತ್ತಾಯಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...