ಹಾಸನ | ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

ಅಕ್ರಮವಾಗಿ ಮದ್ಯ ಮಾರಾಟ ನಡೆಯದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳಡಿ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ಸಂತ್ರಸ್ತರ ಪುನರ್ವಸತಿ ಕಾಲೋನಿಗೆ ನಿವೇಶನ ಹಕ್ಕುಪತ್ರ ನೀಡಲು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಭೆಯಲ್ಲಿ ಚರ್ಚಿಸಿದಂತ ವಿಷಯಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಬೇಕು” ಎಂದು ಸೂಚಿಸಿದರು.

“ಹಾಸ್ಟೆಲ್‌ಗಳಲ್ಲಿರುವ ಮಕ್ಕಳಿಗೆ ತಿಳಿವಳಿಕೆ ನೀಡುವ ಮೂಲಕ ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ವಿದ್ಯಾಭ್ಯಾಸ ಮಾಡಿ ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ನೀತಿ ಪಾಠ ಹೇಳಿ ಜಾಗೃತಿ ಮೂಡಿಸಬೇಕು” ಎಂದು ಸಮಿತಿ ಸದಸ್ಯರು ತಿಳಿಸಿದರು.

“ಒಳ್ಳೆಯದಕ್ಕಿಂತ ಕೆಟ್ಟ ವಿಷಯಗಳಿಗೆ ಬೇಗ ಆಕರ್ಷಣೆಗೆ ಒಳಗಾಗಿ ದಾರಿ ತಪ್ಪುತ್ತಿದ್ದಾರೆ. ಮನಸ್ಸು ಪರಿವರ್ತನೆಯಾಗಿ ಓದುವ ಛಲ ಬೆಳೆಸಿಕೊಳ್ಳುವಂತೆ ತಿಳಿವಳಿಕೆ ನೀಡಿ” ಎಂದರು.

ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದಲ್ಲಿ ಒಂದು ದಿನ ವಾಸ್ತವ್ಯ ಆಯೋಜಿಸುವುದರ ಜತೆಗೆ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸುವಂತೆ ಅಧಿಕಾರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಆರ್ ಪೂರ್ಣಿಮಾ ಮಾತನಾಡಿ, “ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಈ ಜಾಗಕ್ಕೆ ಬೇಲಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಹಿಮ್ಸ್ ನಿರ್ದೇಶಕ ಡಾ.ಸಂತೋಷ, ಉಪ ವಿಭಾಗಾಧಿಕಾರಿ ಶ್ರುತಿ, ಸಮಾಜ ಕಲ್ಯಾಣಕ್ಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ, ಸಮಿತಿ ಸದಸ್ಯರುಗಳಾದ ಮರಿಜೋಸೆಫ್, ವಿಜಯ ಕುಮಾರ್, ಕೃಷ್ಣದಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿಯೋಜನೆ

“ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ ಕಾದಿರಿಸಿರುವ ಜಾಗಕ್ಕೆ ನಿವೇಶನ ರಚಿಸಿ ವಿನ್ಯಾಸ ಅನುಮೋದನೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸತ್ಯಭಾಮಾ ಸೂಚಿಸಿದರು.

 “ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಸಲಕರಣೆ ಬೆಳಗಿನ ಉಪಾಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ವಸ್ತ್ರ ಬದಲಾವಣೆ ಮಾಡಿಕೊಳ್ಳಲು ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಸಕಲೇಶಪುರ ಸುಭಾಷ್ ಮೈದಾನದ ಬಳಿಯಿರುವ ಹಿಂದೂ ಸ್ಮಶಾನಕ್ಕೆ ರಸ್ತೆ ಮಾಡಿಕೊಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ “ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಮತ್ತು ಹಿರೀಸಾವೆ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನ ವೇತನ ಪಾವತಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಶ್ರುತಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್ ಸಮಿತಿ ಸದಸ್ಯರಾದ ಪಳನಿ ಶಂಕರ್ ಶ್ರೀನಿವಾಸ್ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...