ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

Date:

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ, ವೇತನ ಹೆಚ್ಚಳ ಮತ್ತು ಸೇವೆ ಖಾಯಂಗೊಳಿಸುವಂತೆ  ಒತ್ತಾಯಿಸಿ ಹಾಸನ ಜಿಲ್ಲಾ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಹಾಸನ ನಗರದ ಗಂಧದ ಕೋಟಿ ಕಾಲೇಜಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಕಳೆದ 15ರಿಂದ 20 ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೆ, ಕಾಯಮಾತಿ ಇಲ್ಲದೆ, ತಾತ್ಕಾಲಿಕ ವ್ಯವಸ್ಥೆಯಲ್ಲೇ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸ್ಥಿತಿ ದುಸ್ತರವಾಗಿದೆ. ಅವರ ಕಾಯಮಾತಿ ಸೇರಿದಂತೆ ವೇತನ ಹೆಚ್ಚಳ ಮತ್ತು ಉದ್ಯೋಗ ಭದ್ರತೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಕಳೆದ ಹಲವು ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ನೀಡದೆ ಕೇವಲ ತಾತ್ಕಾಲಿಕ ಪರಿಹಾರ ನೀಡಿ ಸರ್ಕಾರಗಳು ಮುಖ್ಯವಾದ ಬೇಡಿಕೆಗಳನ್ನು ಮರೆಮಾಚುತ್ತಾ ಬಂದಿವೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಹೋರಾಟ

“ಪ್ರಸ್ತುತ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಕಾಯಮಾತಿಗೆ ಕಾರ್ಯಯೋಜನೆ ರೂಪಿಸಲಾಗುವುದೆಂದು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದು ಅತಿಥಿ ಉಪನ್ಯಾಸಕರಿಗೆ ಮಾಡಿದ ದ್ರೋಹವಾಗಿರುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ

“ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಭದ್ರತೆ ಒದಗಿಸಬೇಕು. ವೇತನ ಹೆಚ್ಚಳ ಮಾಡಬೇಕು ಜತೆಗೆ ಅವರ ಸೇವೆಯನ್ನು ಖಾಯಂಗೊಳಿಸುವ ಮೂಲಕ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಭೆ; 50 ಸಾಮೂಹಿಕ ವಿವಾಹದ ತೀರ್ಮಾನ

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಎಂ ಜಿ, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್‌ ಹಾಸನ್‌, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸು, ಸಂಘಟನಾಕಾರುಗಳಾದ ಶಶಿ, ವಿವೇಕ್‌, ಸ್ವರೂಪ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...