ಹಾಸನ | ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಶ್ರವಣಬೆಳಗೊಳ

Date:

ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಗದಗ ಜಿಲ್ಲೆಯ ಲಕ್ಕುಂಡಿಯ ಸ್ಮಾರಕಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಗೆ ಸೇರಿಸಲು ರಾಜ್ಯ ಪುರಾತತ್ವ ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಪ್ರಸ್ತಾವನೆ ಸಿದ್ದಪಿಡಿಸುತ್ತಿದೆ. ಅದಕ್ಕಾಗಿ, ದಸ್ತಾವೇಜನ್ನು ತಯಾರಿಸಲು, ಸ್ಥಳದ ಅಧ್ಯಯನ ನಡೆಸಲು ಹಾಗೂ ವರದಿಯನ್ನು ಸಿದ್ದಪಡಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸಲ್ಲಿಸಲು ಸಿದ್ದತೆ ನಡೆಯುತ್ತಿದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಕಮಿಷನರ್ ಎ. ದೇವರಾಜ್ ಮಾಹಿತಿ ನೀಡಿದ್ದಾರೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಯಾವುದೇ ಸ್ಮಾರಕವನ್ನು ಸೇರಿಬೇಕೆಂದರೆ, ಅದಕ್ಕೂ ಮುಂಚೆ ಆ ಸ್ಮಾರಕಗಳನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಲು ನಾಮನಿರ್ದೇಶನ ಮಾಡಬೇಕು. ಹಾಗಾಗಿ, ಶ್ರವಣಬೆಳಗೊಳ ಮತ್ತು ಲಕ್ಕುಂಡಿ ಸ್ಮಾರಕಗಳನ್ನು ಶಿಫಾರಸ್ಸು ಮಾಡಲು ಸಿದ್ದತೆ ನಡೆಯುತ್ತಿದೆ ಎಂದು ದೇವರಾಜ್ ಹೇಳಿರುವುದಾಗಿ ‘ದಿ ಹಿಂದು’ ವರದಿ ಮಾಡಿದೆ.

“ಯುನೆಸ್ಕೋ ತಾತ್ಕಾಲಿಕ ಪಟ್ಟಿಗೆ ಸೇರಿಸುವುದು ಮೊದಲ ಹಂತವಾಗಿದೆ. ಯಾವುದೇ ಸ್ಮಾರಕವನ್ನು ಅಂತಿಮ ಶಾಸನಕ್ಕಾಗಿ ಪರಿಗಣಿಸುವ ಮೊದಲು ಕನಿಷ್ಠ ಒಂದು ವರ್ಷದ ಕಾಯುವ ಅವಧಿ ಇರುತ್ತದೆ. ಈಗ ಮೊದಲ ಹೆಜ್ಜೆ ಇಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾತ್ಕಾಲಿಕ ಪಟ್ಟಿಯಲ್ಲಿ ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದರೂ, ಅಂತಿಮ ಶಾಸನಕ್ಕೆ ನಾಮನಿರ್ದೇಶನಗೊಳ್ಳುವುದು ವಿಳಂಬವಾಗಬಹುದು. ಏಕೆಂದರೆ, ಒಂದು ರಾಷ್ಟ್ರವು ಒಂದು ವರ್ಷದಲ್ಲಿ ಒಂದು ಸ್ಮಾರಕವನ್ನು ಮಾತ್ರ ಅಂತಿಮ ಶಾಸನಕ್ಕೆ ನಾಮನಿರ್ದೇಶನ ಮಾಡಬಹುದು ಎಂಬ ನಿಯಮವಿದೆ” ಎಂದು ಅವರು ವಿವರಿಸಿದ್ದಾರೆ.

ಈ ಹಿಂದೆ, 2014ರಲ್ಲಿ ಬೇಲೂರು ಮತ್ತು ಹಳೇಬೀಡು ದೇವಾಲಯಗಳನ್ನು ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ತಾತ್ಕಾಲಿಕ ಪಟ್ಟಿಗೆ ನಾಮನಿರ್ದೇಶನ ಗೊಂಡಿದ್ದವು. ಈ ವರ್ಷ ಸೆಪ್ಟಂಬರ್‌ನಲ್ಲಿ ಅವುಗಳನ್ನು ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಖಾಯಂ ಪಟ್ಟಿಗೆ ಸೇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಪಾಳು ಬಿದ್ದಿರುವ ಸುರಪುರ ಸಂಸ್ಥಾನದ ವನದುರ್ಗ ಕೋಟೆ

ಜೈನರ ಪುಣ್ಯ ಕ್ಷೇತ್ರ ಎಂದು ಹೇಳಲಾಗಿರುವ ಶ್ರವಣಬೆಳಗೊಳ, ಗಂಗರ ಕಾಲದ ಇತಿಹಾಸ ಹೊಂದಿದೆ. ಗಂಗರ ಅವಧಿಯಲ್ಲಿ ಕ್ರಿ.ಶ 981ರಲ್ಲಿ ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಮೂರ್ತಿಯನ್ನು ಚಾವುಂಡರಾಯ ಕೆತ್ತಿಸಿದ್ದರು. ಮೌರ್ಯ ಚಕ್ರವರ್ತಿ ಚಂದ್ರಗುಪ್ತ ಮೌರ್ಯ ಕೂಡ ಶ್ರವಣಬೆಳಗೊಳದಲ್ಲಿ ಸಲ್ಲೇಖನ ವ್ರತ ಸ್ವೀಕರಿಸಿದ್ದರು. ಇಲ್ಲಿ 800ಕ್ಕೂ ಹೆಚ್ಚು ಶಾಸನಗಳಿವೆ.

ಲಕ್ಕುಂಡಿಯಲ್ಲಿ ಸೋಮೇಶ್ವರ, ಕುಂಬರೇಶ್ವರ, ಮಾಣಿಕೇಶ್ವರ, ನಾಗನಾಥ, ನಾಗೇಶ್ವರ, ಕಾಶಿವಿಶ್ವೇಶ್ವರ, ಶಂಕರಲಿಂಗ, ಲಕ್ಷ್ಮೀನಾರಾಯಣ, ಗಣಪತಿ, ಚಂದ್ರಮೌಳೇಶ್ವರ, ಜೈನ ಬಸದಿ, ಬ್ರಹ್ಮ ಜಿನಾಲಯ ಮುಂತಾದ ಹಲವಾರು ಪುರಾತನ ದೇವಾಲಯಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...