ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

Date:

ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60) ಅವರ ಪ್ರಾಣ ತೆಗೆದು ಹೊಂಡದಲ್ಲಿ ಮುಳುಗಿಸಿ ಚಿನ್ನಾಭರಣ ದೋಚಿರುವ ಪಾತಕಿಗಳು ಪರಾರಿಯಾಗಿದ್ದಾರೆ. ಹಾಡಹಗಲಿನಲ್ಲೇ ನಡೆದ ಅಮಾನುಷ ಹತ್ಯೆಗೆ ಊರಿಗೆ ಊರೇ ಬೆಚ್ಚಿಬಿದ್ದಿದೆ. ಕೊಲೆಗಡುಕರ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವೃದ್ಧೆಯ ಮೈಮೇಲಿದ್ದ 80 ಗ್ರಾಂ ಚಿನ್ನಕ್ಕಾಗಿ ಆಕೆಯನ್ನು ಕೊಂದಿರುವ ದುಷ್ಕರ್ಮಿಗಳು ಅಲ್ಲೇ ಇದ್ದ ನೀರಿನ ತೊರೆಗೆ ಮೃತದೇಹ ಬಿಸಾಕಿದ್ದಾರೆ. ಮೃತದೇಹದ ಮೇಲೆ ದೊಡ್ಡ ಮರದ ದಿಮ್ಮಿಯನ್ನು ಹೇರಿ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಮಧ್ಯಾಹ್ನ ತನ್ನ ಕುರಿಗಳನ್ನ ಮೇಯಿಸಲೆಂದು ಮನೆಯಿಂದ ಹೊರ ಹೋಗಿದ್ದ ಗ್ರಾಮದ ಸುಶೀಲಮ್ಮ ಸಂಜೆಯಾದರೂ ಮನೆಗೆ ಹಿಂದಿರುಗಲಿಲ್ಲ. ಕುರಿಗಳು ಮನೆಗೆ ಬಂದರೂ ವೃದ್ಧೆಯ ಸುಳಿವು ಇಲ್ಲದನ್ನು ಕಂಡ ಮನೆಯವರು ಸುತ್ತಮುತ್ತಲೆಲ್ಲಾ ಹುಡುಕಾಡಿದ್ದಾರೆ. ಆಕೆಯ ಫೋನ್‌ಗೆ ಕರೆ ಮಾಡಿದರೂ ಫೋನ್ ಸ್ವಿಚ್ ಆಫ್ ಆಗಿದೆ. ಎಲ್ಲಿ ಹುಡುಕಾಡಿದ್ರು ಆಕೆಯ ಸುಳಿವು ಸಿಕ್ಕಿಲ್ಲ. ಕೂಡಲೇ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದು, ಎಲ್ಲಿಯಾದರೂ ಹೋಗಿರಬಹುದೆಂಬ ಅನುಮಾನದಿಂದ ಬೆಳಿಗ್ಗೆಯವರೆಗೂ ಸುಮ್ಮನಿದ್ದಾರೆ.

ಮರು ದಿನ ಬೆಳಿಗ್ಗೆ ಮತ್ತೆ ಸುಶೀಲಮ್ಮಳನ್ನು ಹುಡುಕಿ ಹೊರಟ ಕುಟುಂಬ ಸದಸ್ಯರಿಗೆ ಘನ ಘೋರ ದೃಶ್ಯ ಕಂಡಿದ್ದು, ಆಕೆ ಕುರಿ ಮೇಯಿಸಲು ಹೋಗಿದ್ದ ಪ್ರದೇಶದಲ್ಲಿರೋ ತೊರೆಯ ನೀರಿನಲ್ಲಿ ಮರದ ದಿಮ್ಮಿಯ ಕೆಳಗೆ ಸುಶೀಲಮ್ಮನ ಮೃತದೇಹ ಕಾಣಿಸಿದೆ. ಆಕೆಯ ಮೈಮೇಲಿದ್ದ ಚಿನ್ನದ ಸರ, ಚಿನ್ನದ ಬಳೆ, ಓಲೆ ಎಲ್ಲವೂ ಮಾಯವಾಗಿವೆ. ಚಿನ್ನಾಭರಣಕ್ಕಾಗಿಯೇ ಸುಶೀಲಮ್ಮರನ್ನು ಹಿಂಬಾಲಿಸಿರುವ ಪಾತಕಿಗಳು ಆಕೆಯನ್ನು ಕೊಂದು ಚಿನ್ನಾಭರಣ ದೋಚಿದ್ದಾರೆಂದು ಮೃತರ ಸಂಬಂಧಿ ಮೋಹನ್ ಅವಲತ್ತುಕೊಂಡಿದ್ದಾರೆ.

ವೃದ್ಧೆಯ ಮೈಮೇಲೆ ಚಿನ್ನಾಭರಣ ಗಮನಿಸಿದ ಪಾತಕಿಗಳು ಆಕೆಯನ್ನು ಹಿಂಬಾಲಿಸಿ ಹತ್ಯೆ ಮಾಡಿರಬಹುದು ಎನ್ನೊ ಶಂಕೆ ವ್ಯಕ್ತವಾಗಿದ್ದು, ಯಾರೋ ಗುರುತು ಪರಿಚಯ ಇರುವವರೇ ಈಕೆಯನ್ನು ಟಾರ್ಗೆಟ್ ಮಾಡಿರಬಹುದೆಂಬ ಅನುಮಾನ ಮೂಡಿದೆ.

ವೃದ್ಧೆ ಕೊಲೆ ನಡೆದಿರುವ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು, ಶ್ವಾನ ದಳ, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ಮೂಲಕ ಪರಿಶೀಲನೆ ನಡೆಸಿದ್ದಾರೆ. ಹಾಸನದ ವೈದ್ಯಕೀಯ ಕಾಲೇಜಿನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ವೃದ್ಧೆಯ ಸಾವು ಊರಿಗೆ ಊರನ್ನೆ ಬೆಚ್ಚಿಬೀಳಿಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಆರೋಪಿಗಳ ಬಂಧನದ ಬಳಿಕ ಕೊಲೆ ಹಿಂದಿನ ಸತ್ಯಾಸತ್ಯತೆಗಳು ಬಯಲಾಗಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...