ಹಾಸನ | ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ಟ್ರಂಪ್ ನಡೆ ವಿರುದ್ಧ ಸಿಪಿಐಎಂ ಪ್ರತಿಭಟನೆ

Date:

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಮತ್ತು ಅವರ ಪತ್ನಿಯನ್ನು ಏಕಾಏಕಿ ಅಪಹರಿಸುವ ಮೂಲಕ ಒಂದು ಸ್ವತಂತ್ರ ರಾಷ್ಟ್ರದ ಸಾರ್ವಭೌಮತೆಯ ಮೇಲೆ ದಾಳಿ ನಡೆಸಿರುವ ಅಮೆರಿಕ ಸರ್ಕಾರದ ಕೃತ್ಯ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಭಾರತ ಕಮ್ಯೂನಿಸ್ಟ್‌ ಪಕ್ಷ(ಮಾರ್ಕ್ಸ್‌ವಾದಿ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಸೇರಿದಂತೆ ಇತರೆ ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

“ಈ ಅಕ್ರಮ ಹಾಗೂ ಏಕಪಕ್ಷೀಯ ಕ್ರಮಕ್ಕೆ ಹೊಣೆಗಾರರಾಗಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡೆ ಅಂತಾರಾಷ್ಟ್ರೀಯ ಕಾನೂನು, ಯುಎನ್‌ ಘೋಷಿತ ರಾಷ್ಟ್ರಗಳ ಸ್ವಾಯತ್ತತೆ ಮತ್ತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಸಂಪೂರ್ಣ ವಿರೋಧವಾಗಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ದೇಶದ ರಾಜಕೀಯ ವ್ಯವಸ್ಥೆ ಹಾಗೂ ನಾಯಕತ್ವವನ್ನು ಮತ್ತೊಂದು ದೇಶ ತನ್ನ ಸೈನಿಕ ಶಕ್ತಿ, ಬಲವಂತ ಅಥವಾ ಅಪಹರಣದ ಮೂಲಕ ನಿರ್ಧರಿಸುವುದು ಸಾಮ್ರಾಜ್ಯವಾದಿ ಮನೋಭಾವದ ಅಪಾಯಕಾರಿ ರೂಪವಾಗಿದ್ದು, ಇದು ಜಾಗತಿಕ ಶಾಂತಿ ಮತ್ತು ವಿಶ್ವದ ಸ್ಥಿರತೆಗೆ ಗಂಭೀರ ಬೆದರಿಕೆಯಾಗಿದೆ” ಎಂದು ಹೇಳಿದರು.

“ಜನರಿಂದ ಆಯ್ಕೆಯಾದ ರಾಷ್ಟ್ರಾಧ್ಯಕ್ಷನನ್ನು ಅಪಹರಿಸಿರುವುದು ಅಂತಾರಾಷ್ಟ್ರೀಯ ಅಪರಾಧವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ವಿಶ್ವ ಸಮುದಾಯ ಮೌನ ವಹಿಸುವುದು ಭವಿಷ್ಯದಲ್ಲಿ ಇನ್ನಷ್ಟು ದೌರ್ಜನ್ಯಗಳಿಗೆ ದಾರಿ ಮಾಡಿಕೊಡುತ್ತದೆ. ಅಮೆರಿಕ ಸರ್ಕಾರವು ತಕ್ಷಣವೇ ಈ ಕಾನೂನುಬಾಹಿರ ಕ್ರಮವನ್ನು ನಿಲ್ಲಿಸಿ, ವೆನಿಜುವೆಲಾದ ಅಧ್ಯಕ್ಷ ನಿಕೋಲಾಸ್ ಮಧುರೋ ಅವರನ್ನು ಗೌರವಪೂರ್ವಕವಾಗಿ ಬಿಡುಗಡೆ ಮಾಡಿ ವೆನಿಜುವೆಲಾದ ಸಾರ್ವಭೌಮತೆಯನ್ನು ಗೌರವಿಸಬೇಕು ಹಾಗೂ ಈ ಘಟನೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೊರಬೇಕು” ಎಂದು ‌ಪ್ರತಿಭಟನಾಕಾರರು ಒತ್ತಾಯಿಸಿದರು.

“ನ್ಯಾಯ, ಶಾಂತಿ ಮತ್ತು ರಾಷ್ಟ್ರಗಳ ಸ್ವಯಂನಿರ್ಣಯ ಹಕ್ಕಿನ ಪರವಾಗಿ ನಿಲ್ಲುವ ಎಲ್ಲ ಪ್ರಗತಿಪರ ಶಕ್ತಿಗಳು ಈ ದಾಳಿಯನ್ನು ಏಕಸ್ವರದಲ್ಲಿ ಖಂಡಿಸಬೇಕಿದೆ. ಈ ವಿಚಾರದಲ್ಲಿ ಭಾರತ ಸರ್ಕಾರ ದೃಢವಾದ ನಿಲುವು ಕೈಗೊಂಡು ಸಾಮ್ರಾಜ್ಯಶಾಹಿ ನೀತಿಯನ್ನು ಬಲವಾಗಿ ಖಂಡಿಸಬೇಕ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಜನಾಂದೋಲನಗಳು: ಸರ್ಕಾರಗಳಿಗೆ ಜನರ ಅಸಮಾಧಾನದ ಬಿಸಿ ತಾಕುವುದೇ?

“ಅಮೆರಿಕ ಆಮದು ಸುಂಕದ ಮೇಲೆ ಶೇಕಡಾ 500ರಷ್ಟು ಹೆಚ್ಚಳಮಾಡಿರುವುದು ಭಾರತದಂತಹ ಕೃಷಿ ಉತ್ಪನ್ನಗಳ ಮೇಲೆ ದೊಡ್ಡಮಟ್ಟದ ದುಷ್ಪರಿಣಾಮ ಬೀರುತ್ತದೆ. ಕೂಡಲೇ ಇದನ್ನು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್ ಆರ್ ನವೀನ್ ಕುಮಾರ್, ಸಾಹಿತಿ ಮೇಟಿಕೆರೆ ಹಿರಿಯಣ್ಣ, ರೈತ ಮುಖಂಡರಾದ ಎಚ್ ಎಸ್ ಮಂಜುನಾಥ್, ವಾಸುದೇವ್ ಕಲ್ಕೆರೆ, ತೇಜಸ್ ಗೌಡ, ಲೋಕೇಶ್, ದೊರೆ, ಮಂಜೇಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...