ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

Date:

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್‌ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಹಾಸನ ಜಿಲ್ಲಾ ಸಮಿತಿಯ ಕರ್ನಾಟಕ ಪ್ರಾಂತ ರೈತ ಹಾಗೂ ಕೆಪಿಆರ್‌ಎಸ್ ಸಂಘ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೋಮವಾರ ಅಗ್ರಹಿಸಿದೆ.

ರಾಜ್ಯದಲ್ಲಿ ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಇದನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು, ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುಲು ಸಾಧ್ಯವಾಗದೆ ಪ್ರಯಾಸ ಪಡುತ್ತಿದೆ. ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್‌ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸದಿದ್ದರೆ ಅಮೇಜಾನ್ ಕಛೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತಸಂಘ ಕೆಪಿಆರ್‌ಎಸ್ ಹಾಸನ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ.

ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ, ಕೇಂದ್ರ ಸಹಕಾರಿ ಸಚಿವ ಅಮಿತ್‌ಷಾರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್‌ಎಸ್ ಹಾಸನ ಜಿಲ್ಲಾ ಸಮಿತಿಯಿಂದ ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ರಿಲಯನ್ಸ್ ಕಂಪನಿ ಜಿಯೋ ಮೊಬೈಲ್ ಸಿಮ್‌ಗಳನ್ನು ಉಚಿತವಾಗಿ ಕೊಟ್ಟು ಅತ್ಯಂತ ಕಡಿಮೆ ದರದಲ್ಲಿ ಆಕರ್ಷಕ ಡಾಟಾ ಪ್ಯಾಕ್‌ಗಳನ್ನು ಘೋಷಿಸಿ, ಗ್ರಾಹಕರನ್ನು ಸೆಳೆದು ಸರ್ಕಾರಿ ದೂರ ಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್‌ನ್ನು ನಷ್ಟಕ್ಕೆ ತಳ್ಳಿ ಕ್ರಮೇಣ ಅದನ್ನು ಮುಚ್ಚುವಂತೆ ಮಾಡುವ ಹುನ್ನಾರ ನಡೆದಿದೆ ಜೊತೆಗೆ ಖಾಸಗೀ ದೂರಸಂಪರ್ಕ ಕಂಪನಿಗಳು ಡಾಟಾ ಪ್ಯಾಕ್‌ಗಳ ದರವನ್ನು ಹೆಚ್ಚಳ ಮಾಡಿ ಗ್ರಾಹಕರಿಂದ ಸುಲಿಗೆ ಮಾಡುತ್ತಿವೆ. ಇದೇ ರೀತಿ ಒಂದು ರೂ ದರದಲ್ಲಿ ಒಂದು ಲೀಟರ್ ಹಾಲನ್ನು ಮಾರಾಟ ಮಾಡುವುದು ಮುಂದೊAದು ದಿನ ರೈತರ ಜೀವನಾಡಿಗಳಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳನ್ನು ಸಂಪೂರ್ಣ ನಾಶ ಮಾಡುವುದೇ ಆಗಿದೆ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಮಧ್ಯಪ್ರವೇಶ ಮಾಡಿ ರೈತರ ಹೈನುಗಾರಿಕೆಯನ್ನು ಉಳಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್‌ಎಸ್ ಆಗ್ರಹಿಸಿದೆ.

ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಈ ವೇಳೆ ಹೆಚ್.ಎಸ್. ಮಂಜುನಾಥ್, ಹೆಚ್.ಆರ್. ನವೀನ್ ಕುಮಾರ್ ಹಾಗೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...