ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

Date:

ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಳಿಕ ಜೆಡಿಎಸ್‌ನ ಹಲವಾರು ಮುಖಂಡರು ಪಕ್ಷ ತೊರೆದಿದ್ದಾರೆ. ತಮ್ಮ ನಿಲುವೇನು ಎಂಬುದರ ಕುರಿತು ಮಾತನಾಡದಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಸೋಮವಾರ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಆಗ್ರಹ ಕೇಳಿಬಂದಿದೆ ಎಂದು ಇಬ್ರಾಹಿಂ ಹೇಳಿದ್ದರು.

ಅವರ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, “ಪಕ್ಷದ ರಾಷ್ಟ್ರಾಧ್ಯಕ್ಷ ಎಚ್‌.ಡಿ ದೇವೇಗೌಡರು ಯಾರನ್ನ ಉಚ್ಛಾಟನೆ ಮಾಡುತ್ತಾರೆ ನೋಡೋಣ. ಜೆಡಿಎಸ್‌ ಇಬ್ಬಾಗ ಆಗಲ್ಲ. 19 ಮಂದಿ ಶಾಸಕರು ಕುಮಾರಸ್ವಾಮಿ ಅವರೊಂದಿಗೆ ಇದ್ದಾರೆ. ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಹೋಗಲಿ, ನಮ್ಮದೇನು ಅಭ್ಯಂತರವಿಲ್ಲ” ಎಂದು ಹೇಳಿದ್ದಾರೆ.

“ಇಬ್ರಾಹಿಂ ಮಾತಿಗೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಾ?ಕುಮಾರಸ್ವಾಮಿ ಮಗನನ್ನು ಸೋಲಿಸಿದವರು ಯಾರು? ಅಂತಹ ಕಾಂಗ್ರೆಸ್‌ಗೆ ಹೋಗುತ್ತಾರೆ ಅಂದರೆ ಹೋಗಲಿ. ಕಾಂಗ್ರೆಸ್​ ಅನ್ನು ಇಬ್ರಾಹಿಂ ಮುಗಿಸಿ ಆಗಿದೆ. ಈಗ ನಮ್ಮ ಹತ್ತಿರ ಬಂದಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಇಬ್ರಾಹಿಂ ಪರವಾಗಿ ಬ್ಯಾಟಿಂಗ್ ಮಾಡಿರುವ ಎಂಎಲ್‌ಸಿ ವಿಶ್ವನಾಥ್‌, “ಸಿ.ಎಂಇಬ್ರಾಹಿಂ ನಿಲುವು ಸರಿಯಾಗಿದೆ. ನಾನು‌ ರಾಜ್ಯಾಧ್ಯಕ್ಷನಾಗಿದ್ದರೆ ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡುತ್ತಿದ್ದೆ. ಕುಮಾರಸ್ವಾಮಿ ವೈಯಕ್ತಿಯವಾಗಿ ಮೈತ್ರಿ ಬಗ್ಗೆ ಮಾತಾಡಿಕೊಂಡಿದ್ದಾರೆ. ಜ್ಯಾತ್ಯಾತೀತ ಅನ್ನೋ ಅರ್ಥವನ್ನೇ ತೆಗೆದು‌ ಹಾಕಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...