ಅರಣ್ಯಾಧಿಕಾರಿಗಳ ವಶಕ್ಕೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

Date:

ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ ಅವರನ್ನು ವಶಕ್ಕೆ ಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ‘ಯಾರೇ ತಪ್ಪು ಮಾಡಿದರೂ ಶಿಕ್ಷೆಯಗುತ್ತದೆ’ ಎಂದಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಜಯಮ್ಮ ಎಂಬವರಿಗೆ ಸೇರಿದ ಸರ್ಕಾರಿ ಗೋಮಾಳ ಜಮೀನನ್ನು ವಿಕ್ರಮ್ ಸಿಂಹ ಗುತ್ತಿಗೆಗೆ ಪಡೆದುಕೊಂಡಿದ್ದರು. ಜಮೀನಿನ ಪಕ್ಕದಲ್ಲಿದ್ದ ಸರ್ಕಾರಿ ಭುಮಿಯಲ್ಲಿನ ಬೆಲೆ ಬಾಳುವ ಸುಮಾರು 126 ಮರ ಕಡಿದು ಸಾಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೇಲೂರು ತಹಶೀಲ್ದಾರ್ ಮಮತಾ ಅವರು ಸ್ಥಳಕ್ಕೆ ಭೇಟಿ ನೀಡಿ ಮರ ಕಡಿಯುವುದನ್ನು ತಡೆದಿದ್ದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ದೌಡಾಯಿಸಿದ ಅರಣ್ಯಾಧಿಕಾರಿಗಳು ಎರಡು ಹಿಟಾಚಿ, ಎರಡು ಪವರ್ ಚೈಣ್, ಒಂದು ಟ್ರೈಲರ್ ಯಂತ್ರಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ವಿಕ್ರಮ್ ಸಿಂಹ ಅವರೇ ಮುಖ್ಯ ಆರೋಪಿಯೆಂದು ಪರಿಗಣಿಸಿದ್ದ ಅಧಿಕಾರಿಗಳು ಮತ್ತು ಪೊಲೀಸರು ಡಿಸೆಂಬರ್ 25ರಂದು ವಿಕ್ರಂ ಅವರ ಮನೆಗೆ ಭೇಟಿ ನೀಡಿದ್ದರು. ಆದರೆ, ವಿಕ್ರಂ ಪರಾರಿಯಾಗಿದ್ದರು. ಇದೀಗ, ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

“ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ. ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧ” ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...