ಹಾವೇರಿ | ₹12 ಸಾವಿರ ಲಂಚ: ಶಿರಸ್ತೆದಾರ ಸೇರಿ ಮೂವರು ಲೋಕಾಯುಕ್ತ ಬಲೆಗೆ

Date:

ಆರ್ ಟಿ ಸಿ ದುರಸ್ಥಿಗಾಗಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ಲ ತಹಸೀಲ್ದಾರ್ ಕಚೇರಿಯಲ್ಲಿ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗೂಳೆಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಅವರ ಆರ್‌ಟಿಸಿ ದುರಸ್ಥಿ ಅರ್ಜಿಯ ಪ್ರಕ್ರಿಯೆ ಮಾಡಲು ಲಂಚ ಬೇಡಿಕೆಯಿಟ್ಟಿದ್ದ ಮೂವರೂ, ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರಸ್ತಿ ಮಾಡಲು ಆರೋಪಿಗಳು ₹ 12 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಪುರಾವೆ ಸಮೇತ ಸೆರೆ ಹಿಡಿಯಲಾಗಿದೆ”  ಎಂದು ಲೋಕಾಯುಕ್ತರು ಹೇಳಿದರು.

ಈ ಸುದ್ದಿ ಓದಿದ್ದೀರಾ?

ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸನಗೌಡ ಪಾಟೀಲ ಎಂಬುವವರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...