ಹಾವೇರಿ | ಮಳೆಯಿಂದ 349 ಮನೆಗಳಿಗೆ ಹಾನಿ; 161 ಅರ್ಜಿ ತಿರಸ್ಕಿರಿಸಿದ ಆಡಳಿತ

Date:

ಈ ವರ್ಷದ ಮುಂಗಾರು ಋತುವಿನಲ್ಲಿ ಸುರಿದ ಮಳೆಯಿಂದಾಗಿ ಹಾವೇರಿ ಜಿಲ್ಲೆಯಲ್ಲಿ 349 ಮನೆಗಳು ಹಾನಿಯಾಗಿವೆ ಎಂದು ವರದಿಯಾಗಿದೆ. ಮನೆ ಕಳೆದುಕೊಂಡವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಒಟ್ಟು 349 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೂಕಿ, ಕೇವಲ 188 ಅರ್ಜಿಗಳನ್ನು ಮಾತ್ರವೇ ತಾಲೂಕು ಆಡಳಿತಗಳು ಅನುಮೋದಿಸಿದ್ದು, 161 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಮನೆ ಕಳೆದುಕೊಂಡಿವರು ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲಿಸಿ, ಪರಿಹಾರ ಮಂಜೂರು ಮಾಡುವ ಜವಾಬ್ದಾರಿಯನ್ನು ಆಯಾ ತಾಲೂಕುಗಳ ತಹಶೀಲ್ದಾರ್‌ಗಳಿಗೆ ನೀಡಲಾಗಿತ್ತು. ಜಿಲ್ಲೆಯ 8 ತಾಲೂಕುಗಳಲ್ಲಿ ಒಟ್ಟು 349 ಮಂದಿ ತಮ್ಮ ಮನೆ ಹಾನಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ, 161 ಅರ್ಜಿಗಳನ್ನು ತಹಶೀಲ್ದಾರರು ತಿರಸ್ಕರಿಸಿದ್ದಾರೆ. ಮಾನ್ಯ ಮಾಡಲಾದ ಅರ್ಜಿಗಳಲ್ಲಿ ಕೆಲವರಿಗೆ ಈಗಾಗಲೇ ಪರಿಹಾರವನ್ನೂ ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಳೆಯಿಂದ ಮನೆಗಳು ಹಾನಿಯಾಗಿದ್ದು, ಪರಿಹಾರಕ್ಕೆ ಅರ್ಹವೇ ಎಂಬುದನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ನಿರ್ಧರಿಸಲಾಗುತ್ತದೆ. ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ಪರಿಹಾರವನ್ನು ಬಿಡುಗಡೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಲ್ಲಿಸಲಾಗಿದ್ದ ಹಲವು ಅರ್ಜಿಗಳು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ನಿಯಮಗಳ ಅಡಿಯಲ್ಲಿ ಪರಿಹಾರಕ್ಕೆ ಅರ್ಹವಲ್ಲ ಎಂದು ಹಲವು ಅರ್ಜಿಗಳನ್ನು ತಹಶೀಲ್ದಾರರು ತಿರಸ್ಕರಿಸಿದ್ದಾರೆ. ನಿಯಮಾವಳಿಗಳ ಅಡಿಯಲ್ಲಿ ಮನೆಗೆ ಹಾನಿಯನ್ನು ಪರಿಶೀಲಿಸಿ, ಅರ್ಜಿ ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸಂಚಾರ್ ಸಾಥಿ | ‘ಡಿಜಿಟಲ್ ಗೂಢಾಚಾರಿಕೆ’ಗೆ ಹೊರಟಿತ್ತೇ ಮೋದಿ ಸರ್ಕಾರ?

ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮನೆ ಹಾನಿ ಸಂಬಂಧ 89 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ, 77 ಅರ್ಜಿಗಳನ್ನು ತಿರಸ್ಕರಿಸಿ, ಕೇವಲ 12 ಅರ್ಜಿಗಳನ್ನು ಮಾತ್ರ ಅಂಗೀಕರಿಸಲಾಗಿತ್ತು. ಮಾನ್ಯವಾದ ಫಲಾನುಭವಿಗಳಿಗೆ 7.54 ಲಕ್ಷ ರೂ. ಪರಿಹಾರ ಪಾವತಿಸಲಾಗಿದೆ ಎಂದು ವರದಿಯಾಗಿದೆ.

“ಪರಿಪೂರ್ಣ ಮನೆಗಳನ್ನು ಹೊಂದಿಲ್ಲದ, ತಗಡಿನ ರೀತಿಯ ಶೆಡ್‌ಗಳಲ್ಲಿ ವಾಸಿಸುತ್ತಿದ್ದವರೂ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಪರಿಹಾರ ಪಡೆದವರೂ ಮತ್ತೆ ಅರ್ಜಿ ಸಲ್ಲಿಸಿದ್ದರು. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ” ಎಂದು ತಹಶೀಲ್ದಾರ್‌ವೊಬ್ಬರು ತಿಳಿಸಿದ್ದಾರೆ.

ಇನ್ನು, ಮುಂಗಾರು ಮಳೆ ಅವಧಿಯಲ್ಲಿ ಜಿಲ್ಲೆಯ 18,821 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಳೆ ಹಾನಿ ಅನುಭವಿಸಿದ್ದ 40,554 ರೈತರನ್ನು ಪರಿಹಾರಕ್ಕೆ ಪಟ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಮಳೆ, ಸಿಡಿಲು, ಕಟ್ಟಡ ಮತ್ತು ಮರ ಕುಸಿತದಿಂದಾಗಿ 11 ಮಂದಿ ಮೃತಪಟ್ಟಿದ್ದಾರೆ. ಮೃತ ಕುಟುಂಬಗಳಿಗೆ ಒಟ್ಟು 55 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...