ಹಾವೇರಿ | 43 ಇಲಾಖೆ: ಖಾಲಿ ಹುದ್ದೆಗಳ ಭರ್ತಿಗೆ ಡಿವೈಎಫ್ಐ ಆಗ್ರಹ

Date:

“ರಾಜ್ಯದ 43 ಇಲಾಖೆಗಳಲ್ಲಿ ಖಾಲಿ ಇರುವ 2,76,386  ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಬೇಕು ಹಾಗೂ ಕನಿಷ್ಠ ಐದು ವರ್ಷ ವಯೋಮಿತಿಯನ್ನು ಸಡಲಿಕೆ ಮಾಡಬೇಕು” ಎಂದು ಹಾವೇರಿ ನಗರದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರ ಡಿವೈಎಫ್ಐ ಕಾರ್ಯಕರ್ತರು ತಹಶೀಲ್ದಾರ ಶರಣಮ್ಮ ಅವರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. 

ಮನವಿ ಸಲ್ಲಿಸಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಈ ಮೊದಲು ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿಜೆಪಿ ಸರಕಾರವು ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಉದ್ಯೋಗಾಕಾಂಕ್ಷಿ ಯುವಜನರನ್ನು ವಂಚಿಸಿತ್ತು. ಬಿಜೆಪಿಯ ವೈಫಲ್ಯಗಳನ್ನು ಎತ್ತಿತೋರಿಸಿದ ತಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದ್ದೀರಿ. ಆದರೆ ತಮ್ಮ ನೇತೃತ್ವದ ಕಾಂಗ್ರೇಸ್ ಸರಕಾರ ರಾಜ್ಯದಲ್ಲಿ‌ ಆಡಳಿತ ಚುಕ್ಕಾಣಿ ಹಿಡಿದು ಎರಡೂವರೆ ವರ್ಷವಾಗುತ್ತ ಬಂದರೂ ಖಾಲಿ ಹುದ್ದೆ ಭರ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳದಿರುವುದನ್ನು ಡಿವೈಎಫ್ಐ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದರು.

“ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಸಾಕ್ಷರತಾ ಇಲಾಖೆಗಳಲ್ಲಿ 70,727 ಹುದ್ದೆಗಳು, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227 ಹುದ್ದೆಗಳು, ಆರೋಗ್ಯ ಇಲಾಖೆಯಲ್ಲಿ 37,069 ಹುದ್ದೆಗಳು, ಒಳಾಡಳಿತದಲ್ಲಿ 26128 ಹಾಗೂ ಪೋಲಿಸ್ ಇಲಾಖೆಯಲ್ಲಿ‌ 8000 ಕ್ಕೂ‌ಅಧಿಕ ಹುದ್ದೆಗಳು ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ 2,76,386 ಹುದ್ದೆಗಳು ಖಾಲಿಯಿವೆ! ಶಿಕ್ಷಕರು, ಪೋಲಿಸ್ ಹಾಗೂ ಇತರೆ ಹಲವು ಹುದ್ದೆಗಳು ಭರ್ತಿಯಾಗದಿರುವುದರಿಂದ ಉದ್ಯೋಗಾಕಾಂಕ್ಷಿ ಯುವಜನತೆ ಭರವಸೆ ಕಳೆದುಕೊಂಡು ಹತಾಶರಾಗುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದರೆ  ಉದ್ಯೋಗದ ಗ್ಯಾರಂಟಿಯಲ್ಲಿ ಯುವಜನರು ಉದ್ಯೋಗ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯದ ಯುವಜನರ ನಿರೀಕ್ಷೆ ಹುಸಿಯಾಗಿದೆ. ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ತಮ್ಮ ಸರಕಾರವು ಅಗತ್ಯ ಪ್ರಯತ್ನ ಮಾಡದೇ ಕುಂಟು ನೆಪಗಳನ್ನು ಹೇಳುತ್ತಾ ನೇಮಕಾತಿಯನ್ನು ಮುಂದೂಡುತ್ತಿರುವುದು ರಾಜ್ಯದ ಯುವಜನರನ್ನು ವಂಚಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

“ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು, ಸರಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದೆಂದು ಹಲವಾರು ವರ್ಷಗಳಿಂದ ಪರೀಕ್ಷೆ ತಯಾರಿ ನಡೆಸುತ್ತಿದ್ದಾರೆ. 4-5 ವರ್ಷಗಳಿಂದ ನೇಮಕಾತಿ ನಡೆಯದೇ ಇರುವುದರಿಂದ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ನೋವಿನ ಹಾಗೂ ಕಠಿಣ ನಿರ್ಧಾರಕ್ಕೆ ಮೊರೆ ಹೋಗುತ್ತಿದ್ದಾರೆ. ಸರಕಾರ ಈ ಸಮಸ್ಯೆಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು.  ಇನ್ನೊಂದೆಡೆ ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮಗಳು ಬಡ ಸಾಮಾನ್ಯ ಉದ್ಯೋಗಾಂಕ್ಷಿಗಳನ್ನು ಕಂಗೆಡಿಸಿದೆ. ನೇಮಕಾತಿಯಲ್ಲಿ ಅಕ್ರಮ ತಡೆಗಟ್ಟಿ ಪಾರದರ್ಶಕತೆ ಕಾಪಾಡಬೇಕು” ಎಂದು ಡಿವೈಎಫ್ಐ ಆಗ್ರಹಿಸುತ್ತದೆ.

“ರಾಜ್ಯ ಸರಕಾರ ಪ್ರಸ್ತುತ ಮೂರು ವರ್ಷದ ವಯೋಮಿತಿ ಸಡಲಿಕೆಯನ್ನು ಮಾಡಿರುವುದು ಹಲವು ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವುದಿಲ್ಲ. ಪೊಲೀಸ್ ಕಾನ್ಸ್ಟೇಬಲ್ ಸೇರಿ ಎಲ್ಲ ನೇಮಕಾತಿಗೆ ಕನಿಷ್ಠ 5 ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ಒತ್ತಾಯಿಸುತ್ತದೆ.

“ಇಲ್ಲವಾದಲ್ಲಿ ರಾಜ್ಯವ್ಯಾಪಿ ತೀವ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂಬುದನ್ನು ಸರಕಾರದ ಗಮನಕ್ಕೆ ತರಬಯಸುತ್ತದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಅರುಣ ನಾಗವತ್, ಫಕ್ಕಿರೇಶ ಮ್ಯಾಗಳಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...