ಹಾವೇರಿ | ವಿದ್ಯಾರ್ಥಿಗಳ ಐಕ್ಯತೆಗಾಗಿ ಶ್ರಮಿಸುತ್ತಿರುವ ಎಸ್ಎಫ್ಐ ಚಳುವಳಿಗೆ 56ರ ಸಂಭ್ರಮ: ಬಸವರಾಜ ಎಸ್

Date:

“ಸರ್ವರಿಗೂ ಶಿಕ್ಷಣ, ಉದ್ಯೋಗ ಮೂಲಭೂತ ಹಕ್ಕಿಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ, ವಿದ್ಯಾರ್ಥಿ ಸಮುದಾಯದ ಐಕ್ಯತೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಎಸ್ಎಫ್ಐ ವಿದ್ಯಾರ್ಥಿ ಚಳುವಳಿಯು 56 ವರ್ಷದ ಸಂಭ್ರಮಾಚರಣೆಯಲ್ಲಿದೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

ಹಾವೇರಿ ಪಟ್ಟಣದ ಎಸ್ಎಫ್ಐ ವಿದ್ಯಾರ್ಥಿ ಚಳುವಳಿಗೆ ೫೬ ರ ಸಂಭ್ರಮಾಚರಣೆ ಪ್ರಯುಕ್ತ ನಗರದ ಶಿವಾಜಿ ನಗರದ ಎಸ್ಎಫ್ಐ ಕಚೇರಿ ಎದುರು ಶೇತಾ ಪತಾಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

“ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ದೇಶದ ಉದ್ದಗಲಕ್ಕೂ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದ ಆಶಯಗಳಿಗಾಗಿ ಎಸ್ಎಫ್ಐ 56 ವಸಂತಗಳ ಕಾಲ ನಿರಂತರ ಹೋರಾಡುತ್ತಿರುವ ಏಕೈಕ ವಿದ್ಯಾರ್ಥಿ ಸಂಘಟನೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್ಎಫ್ಐ ಹಲವಾರು ಸಮಸ್ಯೆಗಳನ್ನು ಇಟ್ಟುಕೊಂಡು ನಿರಂತರ ಹೋರಾಟ ಮಾಡುತ್ತಾ, ವಿದ್ಯಾರ್ಥಿ ಯುವಜನರ ಮದ್ಯ ಚಳುವಳಿ ಸಂಘಟಿಸುತ್ತಾ ತ್ಯಾಗ ಬಲಿದಾನದ ಮೂಲಕ ದೇಶದ ಸೌಹಾರ್ದತೆ, ಸಾಮರಸ್ಯ, ಶಿಕ್ಷಣದ ಉಳಿವಿಗಾಗಿ, ಹೋರಾಟ ನಡೆಸಿದೆ. ಸ್ವಾತಂತ್ರ‍್ಯ ಭಾರತದಿಂದ ಇಲ್ಲಿಯವರೆಗೂ ದೇಶದ ಮೂಲ ಸಮಸ್ಯೆಗಳ ವಿರುದ್ಧ ಹೋರಾಡುತ್ತಾ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಲ್ಲಿ ಬಹುಮುಖ್ಯ ಪಾತ್ರವಹಿಸಿದೆ” ಎಂದರು.

“ಶಿಕ್ಷಣವು ಉಳ್ಳವರ ಸ್ವತ್ತಾಗದೆ, ಎಲ್ಲರಿಗೂ ಸಿಗುವಂತಾಗಲಿ. ವಿದ್ಯಾರ್ಥಿಗಳು ಸಮಾಜವನ್ನು ಅಧ್ಯಯನ ಮಾಡುವ ಮೂಲಕ ಭಗತ್ ಸಿಂಗ್ ಕಂಡ ಕನಸನ್ನು ನನಸ್ಸು ಮಾಡಬೇಕು. 23ನೇ ಎಳೆಯ ವಯಸ್ಸಿನಲ್ಲಿಯೇ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಭಗತ್ ಸಿಂಗ್, ಹಾವೇರಿ ನೆಲದ ಸ್ವಾತಂತ್ರ‍್ಯ ಹೋರಾಟಗಾರ ಮೈಲಾರ ಮಹಾದೇವಪ್ಪರ ಜೀವನ ಚರಿತ್ರೆಯನ್ನು ಓದಿ. ವಿದ್ಯಾರ್ಥಿ – ಯುವಜನರು ಅರಿವಾಗಿ ಇಟ್ಟುಕೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಗವತ್, ಚೈತ್ರಾ ಕೋರವಾರ, ಪದ್ಮ ಜಾಲಮ್ಮನವರ, ಫಕ್ಕಿರೇಶ್ ಮ್ಯಾಗಳಮನಿ, ಸುದೀಪ್ ಲಮಾಣಿ, ಅರ್ಜುನ್ ಲಮಾಣಿ, ಸಂಜೀವ್ ಕೆ, ಮರಿಯಮ್ಮ, ಪದ್ಮ ಹರಿಜನ, ಮೈತ್ರಿ ಹರಿಜನ, ರಕ್ಷಿತಾ ತಳವಾರ್, ಅಮೂಲ್ಯ ಸಂಗೂರು, ಮಹೇಶ್ವರಿ ಎನ್, ಮಂಜುಳಾ ಎಸ್,ಭೂಮಿಕಾ ಹರಿಜನ, ಅಶ್ವಿನೀ ಹರಿಜನ, ಸಾವಿತ್ರಿ ವಾಲ್ಮೀಕಿ, ಕಾವ್ಯ ಹರಿಜನ, ಶ್ರೇಯಸ್ ಎಂ, ಮಣಿಕಂಠ ಪಾಟೀಲ್, ಬಾಲ  ಸಂಘಂನ ಧನುಸ್ ದೊಡ್ಡಮನಿ, ತೇಜಸ್ ಎನ್ ಡಿ, ಶಾಹೀದ್ ಡಿ, ಹಮಜಾ ವಾಲಿಕಾರ, ಅಯಾನ್ ಎಂ, ಮೈನುದ್ದೀನ್ ಇಲ್ಲಿಬುಡಿ,  ತೋಹಾ ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...