“ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ಸ್ವಾಗತಿಸುತ್ತದೆ. ಇದು ನಮ್ಮ ಸಂಘಟನೆಯ ಹೋರಾಟಕ್ಕೆ ದೊರೆತ ಜಯ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಹಿಂದುಳಿದ ಸಮುದಾಯಕ್ಕೆ ಸೇರಿದ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಬರುವರು. ಬರವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ನಿರಂತರವಾಗಿ ಹಾಸ್ಟೆಲ್ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ಪ್ರತಿಭಟನೆ ನಡೆಸಿದೆ” ಎಂದು ತಿಳಿಸಿದ್ದಾರೆ.
“ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ಮಾಡಿ, ಹಾವೇರಿಯಲ್ಲಿ ನಡೆದ ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೂತನ ಹಾಸ್ಟೆಲ್ ಮಂಜೂರು ಮಾಡುಂತೆ ಆಗ್ರಹಿಸಿ ಹೋರಾಟದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಘಟನೆ ಹೋರಾಟದ ಫಲವಾಗಿ ಈ ಹಿನ್ನೆಲೆಯಲ್ಲಿ ಬಿಸಿಎಮ್ ಇಲಾಖೆಯ 62 ನೂತನ ಹಾಸ್ಟೆಲ್ ಮಂಜೂರು ಮಾಡಿದ್ದನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದ್ದಾರೆ.
“ಇದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ” ಎಂದು ಎಸ್ಎಫ್ಐ ಹಾಸ್ಟೆಲ್ ಉಪ ಸಮಿತಿಯ ರಾಜ್ಯ ಸಂಚಾಲಕ ಅರುಣ್ ನಾಗವತ್, ಸದಸ್ಯರಾದ ಚೈತ್ರಾ ಕೊರವರ ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.





