ಹಾವೇರಿ | ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಪಘಾತ; ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

Date:

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಕ್ಕೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತಕ್ಕೆ ಕಾರಣರಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.

ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಸೋಮವಾರ, ಹಾವೇರಿ ಜಿಲ್ಲೆಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಬಸ್‌ ಹತ್ತುವಾಗ, ಹತ್ತುವ ಮುನ್ನವೇ ಬಸ್‌ ಮುಂದೆ ಚಲಿಸಿದ್ದು, ವಿದ್ಯಾರ್ಥಿಗಳು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೆ, ಮುಂದೆ ನಿಂತಿದ್ದ ಆಟೋಗೆ ಬಸ್‌ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳಾದ ರೇವಣಸಿದ್ದೇಶ್ ವಿ, ಆರ್ ಕಿರಣ, ಮೋಹನ್ ಎಚ್, ಪ್ರವೀಣ್ ರಾಠೋಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಸ್ಆರ್‌ಟಿಸಿ ಡ್ರೈವರ್‌ ಹಾಗೂ ಕಂಡಕ್ಟರ್ ನಿರ್ಲಕ್ಷ್ಯತನದಿಂದಾಗಿ ಘಟನೆ ಸಂಭವಿಸಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಉಚಿತ ಚಿಕಿತ್ಸೆ ನೀಡಬೇಕು. ಅವರಿಗೆ 1 ಲಕ್ಷ ರೂ. ಪರಿಹಾರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿದ್ಯಾರ್ಥಿಗಳಿಗೆ ಹಿಂದಿನಿಂದಲೂ ಬಸ್‌ ವ್ಯವಸ್ಥೆಯ ಸಮಸ್ಯೆ ಇದೆ. ಈ ಹಿಂದೆ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅರ್ಧ ಗಂಟೆಗೊಮ್ಮೆ ಬಸ್‌ ಸಂಚಾರ ಒದಗಿಸಲಾಗಿತ್ತು. ಆದರೆ, ಕಳೆದ ಮೂರು ತಿಂಗಳಿಂದ ಬಸ್‌ ಸಂಚಾರ ನಿಲ್ಲಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಮರ್ಪಕವಾಗಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಎಸ್ಎಫ್ಐ ಮುಖಂಡ ಅಮರೇಶ್ ಕಡಗದ ಮಾತನಾಡಿ, “ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್ಸುಗಳನ್ನು ಬಿಡಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಸಿನ ಸೌಲಭ್ಯ ಒದಗಿಸಬೇಕು. ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ರಾಜ್ಯ ಈ ವಿಚಾರದಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, “ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯಕ್ಕೆ ಪ್ರತಿ ನಿತ್ಯವು ಕನಿಷ್ಠ 20 ಬಸ್ಸುಗಳನ್ನು ಬಿಡಬೇಕು. ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶಿಸ್ತು ಕ್ರಮ ಜರುಗಿಸಬೇಕು. ಗಾಯಗಳು ವಿದ್ಯಾರ್ಥಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ಪರಿಹಾರ ಕೊಡಬೇಕು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಭೆ ಕರೆದು ಇಡೀ ಜಿಲ್ಲೆಯ ಬಸ್ಸಿನ ಸಮಸ್ಯೆಗಳನ್ನು ಪರಿಹಾರಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್ ಮರೋಳ, ಕಿರಣ ಬಿ, ಅಭಿಷೇಕ ಹಲಗೇರಿ, ನವೀನ್ , ಪ್ರಥಮೇಶ್, ಕುಮುದಾ ಯಶೋದಾ, ಅಕ್ಷತಾ ಕೆ ಆರ್, ಕೀರ್ತನಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...