ಹಾವೇರಿ | ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು: ಕವಿ ಸತೀಶ ಕುಲಕರ್ಣಿ

Date:

“ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು, ಅದನ್ನು ಸೃಜನಶೀಲ ಕಾವ್ಯದ ಮೂಲಕ ಬಂಡಾಯವನ್ನು ಕಾಣಬಹುದು ” ಎಂದು ಸತೀಶ್ ಆನ್ ಸ್ಕ್ರೀನ್ ಕಾರ್ಯಕ್ರಮದಲ್ಲಿ ಕವಿ ಸತೀಶ್ ಕುಲಕರ್ಣಿ ಅವರು ಸಂವಾದದಲ್ಲಿ ಹೇಳಿದರು.

ಹಾವೇರಿ ಪಟ್ಟಣದ ಸರಕಾರಿ ನೌಕರರ ಭವನದಲ್ಲಿ ಸಾಹಿತಿ ಕಲಾವಿದರ ಬಳಗ ಹಾಗಿ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಅಭಿಮಾನಿ ಬಳಗ ಸಹಯೋಗದಲ್ಲಿ ಸತೀಶ್ ON SCREEN ಶೀರ್ಷಿಕೆಯ ಅಡಿಯಲ್ಲಿ ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಅವರು ಬರೆದ ಚಲನ ಚಿತ್ರಗೀತೆಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಸಂವಾದದಲ್ಲಿ ಕವಿ ಸತೀಶ್ ಕುಲಕರ್ಣಿ ಅವರು ಮಾತನಾಡಿ, “1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಮಾಡಿದ ಸಂದರ್ಭದಲ್ಲಿ ಜನರ ನಡುವೆ ವೈಮನಸ್ಸು, ಕಂದಕ ಹುಟ್ಟಿತ್ತು. ಈ ವೈಮನಸ್ಸು, ಕಂದಕ ಹೊಡೆದೋಡಿಸಿ, ಸಹಬಾಳ್ವೆ ಕಟ್ಟುವ ಉದ್ದೇಶ ಒಳಗೊಂಡು ‘ಕಟ್ಟುತ್ತೇವ ನಾವು ಕಟ್ಟುತ್ತೇವ ನಾವು ಒಡೆದ ಮನಸುಗಳ ಕಂಡ ಕನಸುಗಳ…’ ಹಾಡನ್ನು ಬರೆದು ಎಲ್ಲ ಕಡೆ ಹಾಡಿದೆ. ಗೌರಿ ಲಂಕೇಶ್, ಡಾ. ಎಂ ಎಂ ಕಲಬುರ್ಗಿ ಕೊನೆಯುಸಿರೆಳೆದಾಗ ಈ ಹಾಡು ಹಾಡುತ್ತಿದ್ದರು ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ್ ಕರಿಗಾರ ಚಾಲನೆ ನೀಡಿ ಮಾತನಾಡಿದ ಅವರು, ” ಹಾವೇರಿ ಜಿಲ್ಲೆಯ ಸಾಹಿತ್ಯ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ತಂದಂತಹ ಸಾಹಿತಿ ಸತೀಶ್ ಕುಲಕರ್ಣಿ ಅವರು ಚಳವಳಿ, ಹೋರಾಟಗಳಲ್ಲಿ ತೊಡಗಿಸಿಕೊಂಡು ಕ್ರಾಂತಿಗೀತೆಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದವರು. ಸಮಾಜದ ಒರೆಕೋರೆಗಳನ್ನು ಸಾಹಿತ್ಯದ ಮೂಲಕ ತಿದ್ದುತ್ತಾ ಬಂದಿದ್ದಾರೆ. ಸಮಾಜದ ವರ್ತಮಾನ ಸಂಕಟಗಳಿಗೆ ತಕ್ಷಣವೇ ಪ್ರತಿಕ್ರಿಯೆ ಕೊಡುವ ಜವಾಬ್ದಾರಿ ಹೊಂದಿರುವವರು. ಬೀದಿ ನಾಟಕಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಶಾಲೆಗಳ ಆರಂಭದ ದಿನವೇ ಶಾಲಾ ಬಸ್‌ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಹಿರಿಯ ಸಾಹಿತಿ ಸರಜೂಕಾಟ್ಕರ ಅವರ ಕಾದಂಬರಿ ಆಧಾರಿತ ಸಾವಿತ್ರಿಬಾಯಿ ಪುಲೆ, ಇಂಗಳೆ ಮಾರ್ಗ ಚಲನಚಿತ್ರಗಳಿಗೆ ಸತೀಶ್ ಕುಲಕರ್ಣಿ ಅವರ ರಚಿಸಿದ ಚಲನಚಿತ್ರ ಗೀತೆಗಳು ‘ಜಿಯಾ ಗಾಳಿಯು ಹಾಡುತಿದೆ ಕೇಳಾ…’, ‘ಕಟ್ಟುತ್ತೇವ ನಾವು ಕಟ್ಟುತ್ತೇವ ನಾವು ಕಟ್ಟೇ ಕಟ್ಟುತ್ತೇವ…’, ‘ಕುಂತ ಭೂಮ್ಯಾಗ ನಿಂತ ಹೇಳತೇನಿ ಭರತನ ದೇಶದ ಕತಿಯನ್ನ…’, ‘ಕನಸುಗಳು ಬಲಿ  ದಾರಿಯಲಿ ಬರೀ ಬೇಲಿಗಳು ನೂರು…’, ‘ಮೇಲು ಕೀಳು ಎಂಬುದಿಲ್ಲ ನೀನು ತಾನು ಒಂದೇ…’ ಸಿನಿಮಾ ಹಾಡುಗಳ ವಿಡಿಯೋ ಪ್ರದರ್ಶನ on Screen ನಡೆಯಿತು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಜಿ. ಎಂ. ಒಂಕಾರಣ್ಣನವರ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...