ಹಾವೇರಿ | ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕ್ರಮಕ್ಕೆ ಮನವಿ

Date:

“ಇಂದಿನ ಡಿಜಿಟಲ್ ಯುಗದಲ್ಲಿ ಯುಪಿಐ, ಇಂಟರ್ನೆಟ್ ಬ್ಯಾಂಕಿಂಗ್, ಇ-ಕಾಮರ್ಸ್ ಮತ್ತು ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಿದಂತೆ, ಜನರು ಸೈಬರ್ ಅಪರಾಧಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಅನಭಿಜ್ಞತೆ, ನಂಬಿಕೆ ಮತ್ತು ಜಾಗೃತಿಯ ಕೊರತೆಯಿಂದ ಅಪಾರ ಪ್ರಮಾಣದ ಹಣ ವಂಚನೆಗೆ ಒಳಗಾಗುತ್ತಿದೆ. ಸೈಬರ್ ಅಪರಾಧಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮುಖಂಡರು ಜೇಬ್ರಾನ್ ಖಾನ್ ತಿಳಿಸಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕ್ರಮಕ್ಕೆ ಕೈಗೊಳ್ಳುವಂತೆ ತಹಸಿಲ್ದಾರ್ ರಿಯಾಜುುದ್ದಿನ್ ಭಗವಾನ್ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರರಿಗೆ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕರ್ನಾಟಕವು ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳ ತಡೆಗೆ ತುರ್ತು ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕವು ದೇಶದಲ್ಲಿ ಎರಡನೇ ಅತಿ ಹೆಚ್ಚು ಸೈಬರ್ ಅಪರಾಧಗಳು ನಡೆಯುವ ರಾಜ್ಯವಾಗಿದೆ. 2024ರಲ್ಲಿ 22,472 ಪ್ರಕರಣಗಳು, ಮತ್ತು 2025 ಜುಲೈ ವರೆಗೆ 8,620 ಪ್ರಕರಣಗಳು ದಾಖಲಾಗಿವೆ. ಬಂಧನಗಳ ಸಂಖ್ಯೆ ಅತ್ಯಂತ ಕಡಿಮೆ—2024ರಲ್ಲಿ 771 ಬಂಧನ, 2025 ಜುಲೈವರೆಗೆ 357 ಬಂಧನವಾಗಿವೆ. ಜನರು ಕಳೆದುಕೊಂಡ ಹಣ 2024ರಲ್ಲಿ ₹2,515 ಕೋಟಿ, 2025 ಜುಲೈವರೆಗೆ ₹1,287 ಕೋಟಿ ದಾಟಿದೆ. ಅನೇಕರು ದೂರು ನೀಡಲು ಹೆದರುತ್ತಿರುವ ಕಾರಣ ನಿಜವಾದ ಹಾನಿ ಅಧಿಕೃತ ಅಂಕಿ-ಅಂಶಗಳಿಗಿಂತ ಬಹಳ ಹೆಚ್ಚು” ಎಂದು ತಿಳಿಸಿದರು.

“ಜನರ ಹಣ, ವೈಯಕ್ತಿಕ ಮಾಹಿತಿ ಮತ್ತು ಭವಿಷ್ಯವನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಕ್ಷಣ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನ ಬೇಡಿಕೆಗಳು:

1) ಡಿಸೆಂಬರ್ 8ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಅತ್ಯಂತ ಪ್ರಾಮುಖ್ಯತೆಯಿಂದ ಚರ್ಚಿಸಬೇಕು.

2) ಸೈಬರ್ ವಂಚನೆಗೆ ಬಲಿಯಾದ ನಾಗರಿಕರಿಗೆ ಸ್ಪಷ್ಟವಾದ ಆರ್ಥಿಕ ರಕ್ಷಣಾ ವ್ಯವಸ್ಥೆ ಒದಗಿಸಬೇಕು.

3) ರಾಷ್ಟ್ರೀಯ ಸಹಾಯವಾಣಿಯ ಜೊತೆಗೆ ರಾಜ್ಯ ಮಟ್ಟದ ವಿಶೇಷ ಸೈಬರ್ ಸಹಾಯವಾಣಿ ಸ್ಥಾಪಿಸಬೇಕು.

4) ಯುವಕರು ಮತ್ತು ನಾಗರಿಕರಿಗೆ ಸೈಬರ್ ಜಾಗೃತಿ ಅಭಿಯಾನಗಳನ್ನು ವಿಸ್ತರಿಸಬೇಕು.

5) ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಶೀಘ್ರದಲ್ಲೇ ನೀಡಲಿರುವ ತಾಂತ್ರಿಕ ಶಿಫಾರಸ್ಸುಗಳನ್ನು ಪರಿಗಣಿಸಿ ಅನುಷ್ಠಾನಗೊಳಿಸಬೇಕು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಸದಸ್ಯರು ಜೈದ್ ಖಾನ್, ಜೈಬ್, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಲ್ಮಾನ್ ಖತೀಬ್, ಮತ್ತು ಸ್ಥಳೀಯ ಘಟಕದ ನಾಯಕ ಜೆಬ್ರಾನ್‌ ಖಾನ್ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...