ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕರಸಾಸಂ ಬಸ್ ಶಿಗ್ಗಾವಿ ಪೊಲೀಸ್ ವ್ಯಾಪ್ತಿಯಲ್ಲಿ ಅಪಘಾತವಾದ ಘಟನೆ ನಡೆಡಿದ್ದು, ಬಸ್‌ನಲ್ಲಿದ್ದ 23 ಜನರಿಗೆ ಗಾಯಗೊಂಡಿದ್ದಾರೆ.
ಹುಬ್ಬಳ್ಳಿ-ಹಾನಗಲ್ ಮಾರ್ಗದ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಹೆದ್ದಾರಿಯಲ್ಲಿ ಹೊರಟಿದ್ದ ಬಸ್ ಏಕಾಏಕಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಪಕ್ಕದ ತಗ್ಗಿನಲ್ಲಿ ಬಿದ್ದಿದೆ.
ಸ್ಥಳೀಯ ಜನರು ಬಸ್ಸಿನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಶಿಗ್ಗಾವಿ ತಾಲ್ಲೂಕು ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ. ಕೆಲವರಿಗೆ ಗಂಭೀರ ಗಾಯಗಳಾಗಿವೆ.
ಈ ಸುದ್ದಿ ಓದಿದ್ದೀರಾ? ಗದಗ | ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ: ಹಸನಸಾಬ ತಟಗಾರ
ಅಪಘಾತದ ಬಗ್ಗೆ ಶಿಗ್ಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





