ಹಾವೇರಿ | ಮಕ್ಕಳು ಸಮುದಾಯವನ್ನು ಬೆಳಗಿಸಬೇಕು: ವಿನ್ಸೆಂಟ್ ಜೇಸನ್‌

Date:

“ಮಕ್ಕಳು ತಮ್ಮ ಬಾಲ್ಯದ ಕೆಲವು ದಿನವನ್ನು ಹಬ್ಬದ ರೂಪದಲ್ಲಿ ಕಳೆಯಬೇಕು. ಮಕ್ಕಳು ನಿಮ್ಮ ಸಮುದಾಯವನ್ನು ಬೆಳಗಿಸಬೇಕು” ಎಂದು ಲೊಯೋಲ ವಿಕಾಸ ಕೇಂದ್ರ ನಿರ್ದೇಶಕರು ವಿನ್ಸೆಂಟ್ ಜೇಸನ್‌ರವರು ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದಲ್ಲಿ ವಿಶ್ವ ಮಕ್ಕಳ ದಿನಾಚರಣೆಯ ಪ್ರಯುಕ್ತ, ಸಮಗ್ರ ಮತ್ತು ಸುಸ್ಥಿರ ಯೋಜನೆಯ ಅಡಿಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

“ಮಕ್ಕಳು ದೀಪವಿದ್ದಂತೆ ಪ್ರಜ್ಜಲವಾಗಿ ಬೆಳೆಯುವ ಮೂಲಕ ತಮ್ಮ ಮನೆ, ಸಮೂದಾಯವನ್ನು ಬೆಳೆಗಿಸಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಡಗೋಡಿನ ಲೊಯೋಲ ಸಂಸ್ಥೆಗಳ ಮುಖ್ಯಸ್ಥರಾದ ಪಾ|| ಮೇಲ್ವಿನ್ ಲೋಬೊರವರು ಮಕ್ಕಳು ಸಮಾಜದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಣ ಮುಂಬಾ ಮುಖ್ಯ ಅದನ್ನು ಶುದ್ಧ ಮನಸ್ಸಿನಿಂದ ಕಲಿಯಬೇಕು, ಆಸಕ್ತಿ ಮತ್ತು ದೃಢ ವಿಶ್ವಾಸದಿಂದ ಎಲ್ಲಾ ತರಹದ ವಿದ್ಯೆಯನ್ನು ಕಲಿಯಬಹುದು ಎಂದರು.

ಮಕ್ಕಳ ಬುದ್ಧಿಮಟ್ಟ ಹೆಚ್ಚಿಸಲು ಸಂಸ್ಥೆಯ ಆವರಣದಲ್ಲಿ ೧೦ ವಿಭಿನ್ನ ಆಟವನ್ನು ಏರ್ಪಡಿಸಿ ಮಕ್ಕಳು ಸಂತೋಷದಲ್ಲಿ ಪಾಲ್ಗೊಂಡರು.

ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧತೆಯಲ್ಲಿ ಏಕತೆ ತೋರುವ ಹಲವಾರು ವೇಷಭೂಷಣ, ನೃತ್ಯ, ನಾಟಕ, ಹಾಡಿನಲ್ಲಿ ಭಾಗಿಯಾಗಿದ್ದರವರು ಮಕ್ಕಳ ಮನಸೆಳೆದರು.

ಸಂಪನ್ಮೂಲ ವ್ಯಕ್ತಿ ವಕೀಲರು ರವಿ ಬಾಬು ಪೂಜಾರ ಅವರು ಮಾತನಾಡಿ, “ಮಕ್ಕಳು ಕೇವಲ ಶಿಕ್ಷಣ ಅಲ್ಲದೆ ಈ ತರಹದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು. ಶಿಕ್ಷಣದ ಹಕ್ಕು ಮತ್ತು ಬದುಕುವ ಹಕ್ಕಿನ ಬಗ್ಗೆ” ವಿವರಿಸಿದರು.

“ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಇಂದಲ್ಲಾ ನಾಳೆ ಫಲಕೊಡುವುದು. ಮಕ್ಕಳಿಗಾಗಿ ಇರುವ ಕಾನೂನಿನ ಬಗ್ಗೆ ತಿಳಿಸಿ, ಪೋಕ್ಸೋ ಕಾಯ್ದೆಯ ಬಗ್ಗೆ” ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ನಿರ್ದೇಶಕರಾದ ಜೇಸನ್ ಪಾಯ್ಸ್, ಕಾರ್ಯಕ್ರಮದ ಸಂಯೋಜಕರಾದ ಪಿರಪ್ಪ ಶಿರ್ಶಿ   ಮತ್ತು ಸಿಬ್ಬಂದಿ ವರ್ಗದವರು, ೧೪ ಸಮುದಾಯ ಕಲಿಕಾ ಕೇಂದ್ರದ ಶಿಕ್ಷಕಿಯರು, ಸುಮಾರು ೧೮೮ ಮಕ್ಕಳು ಸೇರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...