ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜನವರಿ 7 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜ.7 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11-40ಕ್ಕೆ ಹಾವೇರಿ ಪಾಲಿಟೆಕ್ನಿಕ್ ಆವರಣದ ಹೆಲಿಪ್ಯಾಡ್ ಗೆ ಆಗಮಿಸಿ. ಹಾವೇರಿ ನಗರದ ಹುಕ್ಕೇರಿಮಠಕ್ಕೆ ಭೇಟಿ ನೀಡುವರು.
ನಂತರ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾದ ಹಾವೇರಿ ನೂತನ ವಿ.ವಿ.ಐ.ಪಿ ಸರ್ಕ್ಯೂಟ್ ಹೌಸ್ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ನೆಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕ್ಯೂಟ್ ಹೌಸ್ ಕಟ್ಟಡದ ಅಡಿಗಲ್ಲು ಸಮಾರಂಭ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.





