ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಂದು ಸಾವಿರ ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿ ಪಟ್ಟಣದಲ್ಲಿ ನಾಳೆ ಫೆ.14ಕ್ಕೆ ಭೂ ಗ್ಯಾರಂಟಿ ಸಾಧಾನಾ ಸಮಾವೇಶ ಸಮಾರಂಭಕ್ಕೆ ವಿವಿಧ ಜಿಲ್ಲೆಗಳ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸರ್ಕಾರ ಒಂದು ಸಾವಿರ ದಿನಗಳು ಪೂರೈಸಿದ ಹಿನ್ನಲೆಯಲ್ಲಿ, ಹಾಡಿ, ಹಟ್ಟಿ, ತಾಂಡಾಗಳಲ್ಲಿ ಹಲವಾರು ವರ್ಷಗಳಿಂದ ದಾಖಲೆ ರಹಿತವಾಗಿ ವಾಸಿಸುವವರಿಗೆ, ಕಂದಾಯ ಗ್ರಾಮ, ಇ-ಪೋತಿ, ದರಖಾಸ್ತ್ ಪೋಡಿ ಸೇರಿದಂತೆ ಕಂದಾಯ ಇಲಾಖೆಯ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ.
ಈ ಸಮಾವೇಶದಲ್ಲಿ ಮುಖ್ಯಮಂತ್ರಿಗಳು. ಉಪ ಮುಖ್ಯಮಂತ್ರಿಗಳು, ಕಂದಾಯ ಮಂತ್ರಿಗಳು ಸೇರಿದಂತೆ ಸಂಪುಟದ ಎಲ್ಲ ಸಚಿವರು, ಜಿಲ್ಲೆಯ ಶಾಸಕರು, ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
130 ಎಕರೆ ಪ್ರದೇಶದಲ್ಲಿ ಸಮಾವೇಶ: ನಗರದ ಹೊರವಲಯದ ಅಜ್ಜಯ್ಯನ ಗುಡಿ ಹತ್ತಿರ, ಸುಮಾರು 130 ಎಕರೆ ಜಾಗದಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮಕ್ಕೆ ಸಿದ್ಧತೆಮಾಡಿಕೊಳ್ಳಲಾಗಿದೆ. ಈ ಪೈಕಿ 18 ಎಕರೆ ಜಾಗದಲ್ಲಿ ಮುಖ್ಯ ವೇದಿಕೆ ನಿರ್ಮಾಣವಾಗುತ್ತಿದೆ. 94 ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ. 8 ಎಕರೆ ಜಾಗದಲ್ಲಿ ಒಟ್ಟು 4 ಹೆಲಿಪ್ಯಾಡ್. 10 ಎಕರೆ ಜಾಗದಲ್ಲಿ ಊಟದ ವ್ಯವಸ್ಥೆ ಕೈಗೊಳ್ಳಲಾಗಿದೆ. 200 ಅತಿಥಿಗಳು ಕುಳಿತುಕೊಳ್ಳುವ 140860 ಅಡಿ ವಿಸ್ತೀರ್ಣದ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಜನರು ಕುಳಿತುಕೊಳ್ಳಲು 2.76.000 ಅವಕಾಶವಿರುವ ಒಟ್ಟು 2.76.000 ಚದರ ಅಡಿಯ ಜರ್ಮನ್ ಟೆಂಟ್ ಅಳವಡಿಸಲಾಗಿದೆ.
ಲಕ್ಷಕ್ಕೂ ಅಧಿಕ ಫಲಾನುಭವಿಗಳು: ಹಾವೇರಿ ಜಿಲ್ಲೆಯ ಕಂದಾಯ ಗ್ರಾಮ-20.186, ಇ-ಪೋತಿ-7825, ದಾಖಾಸ್ತ್ ಪೋಡಿ-1.675. 2-16 0 30.204 2. ಚಿತ್ರದುರ್ಗ-5,500. ದಾವಣಗೆರೆ-20ಸಾವಿರ. ಶಿವಮೊಗ್ಗ-10 ಸಾವಿರ, ಚಿಕ್ಕಮಗಳೂರು-7ಸಾವಿರ, ಧಾರವಾಡ, ಗದಗ, ಹಾಗೂ ಕೊಪ್ಪಳ ಜಿಲ್ಲೆಯ ತಲಾ 10 ಸಾವಿರ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದು ಸಾವಿರ ಫಲಾನುಭವಿಗಳು ಸೇರಿ 1.23 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿದ್ದಾರೆ.
2,550 ವಾಹನಗಳು: ಫಲಾನುಭವಿಗಳನ್ನು ಕರೆತರಲು ಸರ್ಕಾರಿ ಸೌಮ್ಯದ ಎನ್ ಡಬ್ಲ್ಯೂಕೆಆರ್‌ಟಿಸಿ. ಕೆಕೆಆರ್ ಟಿಸಿ ಮತ್ತು ಕೆ ಎಸ್ ಆರ್ ಟಿ ಸಿಯ 2.140 ಬಸ್ಸುಗಳು, 195 ಖಾಸಗಿ ಬಸ್ ಗಳು ಹಾಗೂ 215 ಶಾಲಾ ಕಾಲೇಜು ಬಸ್ಸುಗಳು ಸೇರಿ 2,550 ವಾಹನಗಳನ್ನು ಬಳಸಲಾಗುತ್ತಿದೆ. ಪ್ರತಿ ಬಸ್ಸಿಗೆ ಎರಡು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ವಿವಿಧ ಸಮಿತಿ: ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಸಮಿತಿಹಣಕಾಸು ಸಮಿತಿ, ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ಸಮಿತಿ ಮುಖ್ಯ ವೇದಿಕೆ ನಿರ್ಮಾಣ ಸಮಿತಿ, ಆಹಾರ ಮತ್ತು ಕುಡಿಯುವ ನೀರಿನ ಸಮಿತಿ. ಸಾರಿಗೆ ಮತ್ತು ಪಾಕಿರ್ಂಗ್ ವ್ಯವಸ್ಥೆ ಸಮಿತಿ, ಹೆಲಿಪ್ಯಾಡ್ ನಿರ್ಮಾಣ ಸಮಿತಿ, ಕಾರ್ಯಕ್ರಮ ನಿರ್ವಹಣಾ ಮತ್ತು ಮುಖ್ಯ ವೇದಿಕ ಶಿಷ್ಟಾಚಾರ ಸಮಿತಿ, ಫಲಾನುಭವಿಗಳ ಆಸನ ವ್ಯವಸ್ಥೆ ಸಮಿತಿ, ಸ್ವಚ್ಛತೆ ಮತ್ತು ನೈರ್ಮಲ್ಯ ಸಮಿತಿ, ವಸತಿ ಸಮಿತಿ ಆರೋಗ್ಯ ಸಮಿತಿ ಒಳಗೊಂಡಂತೆ 15 ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ.
ಮೂರು ಸಾವಿರ ಪೊಲೀಸ್: ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತೆಯ ಸಲುವಾಗಿ ಸುಮಾರು 300 ವಿವಿಧ ಹಂತದ ಅಧಿಕಾರಿಗಳನ್ನು ಹಾಗೂ ಹೋಂ ಗಾರ್ಡ್ ಒಳಗೊಂಡಂತೆ 3,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಫಲಾನುಭವಿಗಳಿಗೆ 200 ಊಟದ ಕೌಂಟರ್: ಸುಮಾರು 200 ತಾತ್ಕಾಲಿಕ ಶೌಚಾಲಯಗಳು, ಶುದ್ಧ ಕುಡಿಯುವ ನೀರು, ಅಂಬ್ಯುಲನ್ಸ್, ತುರ್ತು ಆರೋಗ್ಯ ಸೇವೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ.





