ಹಾವೇರಿ | ವಿಶ್ವಾಸದಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ: ಶ್ರೀನಿವಾಸ ಮಾನೆ

Date:

“ಪರಸ್ಪರ ಸಹಕಾರ, ನಂಬಿಕೆ, ವಿಶ್ವಾಸದಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಆಡಳಿತ ಮಂಡಳಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಸಹಕಾರಿ ಸಂಘಗಳು ಅಭಿವೃದ್ಧಿಯತ್ತ ಮುಖ ಮಾಡಲಿವೆ” ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ಇಲ್ಲಿ ಹೊಸದಾಗಿ ಆರಂಭಿಸಲಾಗಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.

“ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ. ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರೀಕ ಸೇವೆಗಳನ್ನೂ ಸಹ ನೀಡಲು ಮುಂದೆ ಬರಬೇಕಿದೆ. ಸಾಲ ಮಂಜೂರಾತಿ ಪ್ರಕ್ರಿಯೆ ಸರಳಗೊಳಿಸಿ ಅರ್ಹರಿಗೆ ಸುಲಭವಾಗಿ ಸಾಲ ಸೌಲಭ್ಯ ದೊರಕುವಂತೆ ಕಾಳಜಿ ವಹಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಲಗಾರರೂ ಸಹ ಪಡೆದ ಸಾಲವನ್ನು ನಿಗದಿತ ಉದ್ದೇಶಕ್ಕೆ ಸದ್ಬಳಕೆ ಮಾಡಿಕೊಂಡು ಸಕಾಲಕ್ಕೆ ಸಾಲ ಮರುಪಾವತಿ ಮಾಡಿದರೆ ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಆರ್ಥಿಕ ಪ್ರಗತಿ ಕಾಣಲಿದ್ದು, ಇನ್ನಷ್ಟು ಜನರಿಗೆ ಸಾಲ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದ ಅವರು ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಶಾಖೆಗಳನ್ನು ಹೊಂದಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾನಗಲ್ ನಗರದಲ್ಲಿ ಸಹ ಶಾಖೆ ತೆರೆಯುತ್ತಿರುವುದು ಖುಷಿ ತಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್

ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಸ್.ಎ.ಪೀರಜಾದೆ, ಮುಖಂಡರಾದ ಮುಜೀಬ್ ಬಾಳೂರ, ದುದ್ದು ಅಕ್ಕಿವಳ್ಳಿ, ನಾಸೀರ್ ಖಾಜಿ, ನಿಸಾರ ಪಾನವಾಲೆ, ಮುಸ್ತಾಕ್ ಸುತಾರ, ಇರ್ಫಾನ್ ಮಿಠಾಯಿಗಾರ, ಚಮನಸಾಬ ಕಿತ್ತೂರ, ಎಂ.ಎಂ.ಮುಲ್ಲಾ, ಇಲಿಯಾಸ್ ಶಿರಸಿ, ಬಾಬಾಜಾನ್ ಕೊಂಡವಾಡಿ, ಹನೀಫ್ ಜಾಲೆಗಾರ, ತನ್ನೀ‌ರ್ ಮಾಸೂರ, ನವೀದ್ ಯಾವಗಲ್ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...