ಹಾವೇರಿ | ರೈತರಿಗೆ ಪರಿಹಾರ ವಿಳಂಬ; ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ

Date:

ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ  ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದ ಆರೋಪದಡಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಉಪ ವಿಭಾಗಾಧಿಕಾರಿ ಚನ್ನಬಸಪ್ಪ ಅವರ ಕಾರುಗಳನ್ನು ಬುಧವಾರ ಜಪ್ತಿ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕೆರೂಡಿ ಗ್ರಾಮದ ರೈತ ರುದ್ರಪ್ಪ ಬಸಪ್ಪ ಗುತ್ತಲ ಎಂಬುವವರಿಗೆ ಪರಿಹಾರ ನೀಡಲು ವಿಳಂಬವಾಗಿತ್ತು. ಇದಕ್ಕೆ ಬೇಸತ್ತಿದ್ದ ಅವರ ಸಂಬಂಧಿಕರು, ಬ್ಯಾಡಗಿ ತಾಲ್ಲೂಕಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಕಾರುಗಳ ಜಪ್ತಿಗೆ ಆದೇಶ ಹೊರಡಿಸಿತ್ತು.

ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ, 2 ಎಕರೆ 29 ಗುಂಟೆ ಜಮೀನನ್ನು 1970ರಂದು ಸ್ವಾಧೀನಪಡಿಸಿಕೊಂಡಿತ್ತು. ಪ್ರತಿ ಎಕರೆಗೆ ₹ 1.30 ಲಕ್ಷ ನಿಗದಿ ಮಾಡಲಾಗಿತ್ತು. ಆದರೆ, ಇದುವರೆಗೂ ಪರಿಹಾರ ನೀಡಿರಲಿಲ್ಲ. ಬೇಸತ್ತ ರೈತನ ಸಂಬಂಧಿಕರು, ನ್ಯಾಯಾಲಯದ ಮೊರೆ ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದ ಆದೇಶ ಹಾಗೂ ವಕೀಲರ ಸಮೇತ ಕಚೇರಿಗೆ ಬಂದಿದ್ದ ರೈತರ ಸಂಬಂಧಿಕರು, ಎರಡೂ ಕಾರುಗಳನ್ನು ಜಪ್ತಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋಯಾ ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಸಿಗುತ್ತಿಲ್ಲ: ಸಂಸದ ಸಾಗರ್‌ ಖಂಡ್ರೆ

ಜಪ್ತಿ ಬಗ್ಗೆ ಪ್ರತಿಕ್ರಿಯಿಸಿದ ಉಪ ವಿಭಾಗಾಧಿಕಾರಿ ಚನ್ನಪ್ಪ, ‘ಸಣ್ಣ ನೀರಾವರಿ ಇಲಾಖೆಯವರಿಂದ ಕಾಮಗಾರಿ ನಡೆದಿತ್ತು. ಜಮೀನು ಸ್ವಾಧೀನಪಡಿಸಿಕೊಡುವುದು ಮಾತ್ರ ನಮ್ಮ ಕೆಲಸವಾಗಿತ್ತು. ರೈತರಿಗೆ ಪರಿಹಾರ ನೀಡುವಂತೆಯೂ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ’ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...