ಹಾವೇರಿ | ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಹಿಂಪಡೆಯಲು ಒತ್ತಾಯ

Date:

“ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಅತ್ಯಗತ್ಯವಾಗಿರುವ ಕೊಠಡಿಗಳನ್ನು ಕಟ್ಟಿಸಿಕೊಡಿ ಎಂದು ಪ್ರಜಾಸತ್ತಾತ್ಮಕ‌ ನೆಲೆಯಲ್ಲಿ ಧ್ವನಿ ಎತ್ತಿದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತು ಮಾಡಿರುವುದು ತೀವ್ರ ಖಂಡನೀಯವಾದುದು. ಕೂಡಲೇ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು” ಎಂದು ಪ್ರಗತಿಪರ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ರಾಜ್ಯ ಸರಕಾರವನ್ನು ಆಗ್ರಹಿಸಿದೆ.

ಹಾವೇರಿ ಪಟ್ಟಣದಲ್ಲಿ ಪ್ರಗತಿಪರ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಖಂಡಿಸಿ ತಹಶೀಲ್ದಾರರವರ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ನಂತರ ಬಸವರಾಜ್ ಪೂಜಾರ್ ಮಾತನಾಡಿ, “ಶಿಕ್ಷಕ ವೀರಣ್ಣ ಮಡಿವಾಳರ ತಮ್ಮ ಶಾಲೆಯ ಬಗ್ಗೆ ಅನನ್ಯ ಪ್ರೀತಿ ಇಟ್ಟುಕೊಂಡು ಕಳೆದ 10 ವರ್ಷಗಳಿಂದ ಶಾಲೆಯ ಅಭಿವೃದ್ಧಿಗಾಗಿ ಹಗಲಿರುಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ದಾನಿಗಳನ್ನು ಹುಡುಕಿ ಅವರ ನೆರವಿನಿಂದ ಸರಕಾರಿ ಶಾಲೆಯನ್ನು ಹೈಟೆಕ್ ಆಗಿ ಪರಿವರ್ತಿಸಿದ್ದರಿಂದ ಶಾಲೆಯ ಮಕ್ಕಳ ದಾಖಲಾತಿಯು ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರ ಹಿಂದಿನ ಪರಿಶ್ರಮ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರದು ಎಂಬುದು ಹೆಮ್ಮೆಯ ಸಂಗತಿಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕ ವೀರಣ್ಣ ಮಡಿವಾಳರ ಅವರು ಪರಿಶ್ರಮವಹಿಸಿ ಶಾಲೆಯನ್ನು ಅಭಿವೃದ್ಧಿಪಡಿಸಿ ಶಾಲೆಗೆ ಹಲವು ಪ್ರಶಸ್ತಿ ಬರಲು ಕಾರಣರಾಗಿದ್ದಾರೆ. ಕೆಲವು ವರ್ಷಗಳ ಹಿಂದೆ 70 ವಿದ್ಯಾರ್ಥಿಗಳಿದ್ದಾಗ ಎರಡು ಕೊಠಡಿಯಲ್ಲಿ ತರಗತಿ ನಡೆಸಲಾಗುತ್ತಿತ್ತು. ಈಗ ವಿದ್ಯಾರ್ಥಿಗಳ ಸಂಖ್ಯೆ ಅದರ ಎರಡು ಪಟ್ಟು ಅಧಿಕವಾಗಿದೆ. ಅದಕ್ಕಾಗಿ ಅತ್ಯಗತ್ಯವಾಗಿರುವ ನಾಲ್ಕು ಕೊಠಡಿಗಳನ್ನು ಕಟ್ಟಿಸಿಕೊಡುವಂತೆ ಮುಖ್ಯ ಶಿಕ್ಷಕರಾಗಿರುವ ವೀರಣ್ಣ ಅವರು ಹಲವು ವರ್ಷಗಳಿಂದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಕೊಠಡಿ ನಿರ್ಮಿಸದಿರುವುದು ದುರಂತ. ಸರಕಾರವು ಇಷ್ಟರೊಳಗೆ ಈ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ನಾಲ್ಕು ಕೊಠಡಿಗಳನ್ನು ನಿರ್ಮಿಸಬೇಕಿತ್ತು. ಅದರ ಬದಲಾಗಿ ಕೊಠಡಿ ಮಂಜೂರು ಮಾಡಿ ಎಂದು ಪ್ರಜಾಸತ್ತಾತ್ಮಕ ನೆಲೆಯಲ್ಲಿ ಧ್ವನಿ ಎತ್ತಿದ್ದನ್ನೇ ನಿಯಮ ಉಲ್ಲಂಘನೆ ಎಂದು ಪರಿಗಣಿಸಿ ವೀರಣ್ಣ ಮಡಿವಾಳರ ಅವರನ್ನು ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ. ಇದು ಶಿಕ್ಷಣಾಧಿಕಾರಿಯ ಸರ್ವಾಧಿಕಾರಿ ಧೋರಣೆಯಾಗಿದ್ದು ಸರಕಾರ ಇಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.” ಎಂದು ಆಗ್ರಹಿಸಿದರುಪ್ರಗತಿಪರ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು.

ಅಖಿಲ ಭಾರತ ವಕೀಲರ ಒಕ್ಕೂಟದ ಮುಖಂಡರಾದ ನಾರಾಯಣ ಕಾಳೆ ಮಾತನಾಡಿ, “ಜೀವಪರ ಕಳಕಳಿಯ ಶಿಕ್ಷಕ ವೀರಣ್ಣ ಅವರನ್ನು ಅಪರಾಧಿ ರೀತಿ ನೋಡಿ, ಅಮಾನತು ಮಾಡಿರುವುದನ್ನು ಸಹಿಸಲಾಗದು‌. ಕೂಡಲೇ ವೀರಣ್ಣ ಮಡಿವಾಳರ ಮೇಲಿನ ಅಮಾನತು ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು. ಹಾಗೂ ಅಮಾನತು ಮಾಡಿರುವ ಶಿಕ್ಷಣಾಧಿಕಾರಿಯ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾಲ ವಿಳಂಬ ಮಾಡದೇ ಶಾಲೆಗೆ ಅಗತ್ಯವಿರುವ ನಾಲ್ಕು ಕೊಠಡಿಗಳನ್ನು ನಿರ್ಮಿಸಲು ಮತ್ತು ಶಾಲೆಗೆ ಅಗತ್ಯವಿರುವ ಇತರ ಶೈಕ್ಷಣಿಕ ಪರಿಕರಗಳನ್ನು ಪೂರೈಸಲು ಕ್ರಮವಹಿಸಲು ಮುಂದಾಗಬೇಕು ಇಲ್ಲವಾದಲ್ಲಿ ತೀವ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಲು ಸಚಿವರು ಹೆಚ್. ಕೆ. ಪಾಟೀಲರಿಗೆ ಒತ್ತಾಯ

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಹಿರಿಯ ಸಾಹಿತಿಗಳಾದ ಸತೀಶ ಕುಲಕರ್ಣಿ, ನಿವೃತ್ತ ಡಿಡಿಪಿಯು ಅಧಿಕಾರಿಗಳಾದ ಎಂ. ಆಂಜನೇಯ, ಡಿಎಸ್ಎಸ್ ಜಿಲ್ಲಾಧ್ಯಕ್ಷರಾದ ಉಡಚಪ್ಪ ಮಾಳಗಿ, ರೈತ ಸಂಘಟನೆಯ ಜಿಲ್ಲಾಧ್ಯಕ್ಷರಾದ ರಾಮಣ್ಣ ಕೆಂಚಳ್ಳೇರ, ಸುರೇಶ ಛಲವಾದಿ, ಖಲಂದರ್ ಅಲ್ಲಿಗೌಡ್ರ, ರಮೇಶ ತಳವಾರ, ಶರಣು ಸಂಗನಾಳ, ಜಗದೀಶ ಹರಿಜನ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...